Delhi Crime News: ಚಲಿಸುತ್ತಿದ್ದ ಕಾರಿನಲ್ಲಿ 16 ವರ್ಷದ ಯುವತಿ ಗ್ಯಾಂಗ್ ರೇಪ್: ಆರೋಪಿಗಳು ಅರೆಸ್ಟ್

By Suvarna NewsFirst Published Jul 15, 2022, 5:25 PM IST
Highlights

Delhi Crime News: ನಿಲ್ಲಿಸಿದ್ದ ಕಾರಿನೊಳಗೆ ಈ ಘಟನೆ ನಡೆದಿದ್ದು ಸಂತ್ರಸ್ತೆಯ ಸ್ನೇಹಿತ ಸೇರಿದಂತೆ ಮೂವರು  ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ

ನವದೆಹಲಿ (ಜು. 15):  ದಕ್ಷಿಣ ದೆಹಲಿಯ ವಸಂತ ವಿಹಾರ್‌ನ ಮಾರುಕಟ್ಟೆಯಿಂದ ಅಪಹರಿಸಿ, ಮಹಿಪಾಲ್‌ಪುರದಲ್ಲಿ 10 ನೇ ತರಗತಿ ವಿದ್ಯಾರ್ಥಿಯನ್ನು ಕಾರಿನಲ್ಲಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ (Gang Rape) ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಜುಲೈ 6 ರಂದು ನೈರುತ್ಯ ದೆಹಲಿಯ ಮಹಿಪಾಲ್‌ಪುರದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಈ ಘಟನೆ ನಡೆದಿದ್ದು, ಅತ್ಯಾಚಾರ ಸಂತ್ರಸ್ತೆಯ ಸ್ನೇಹಿತ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆರೋಪಿಗಳೆಲ್ಲ 20ರ ಆಸುಪಾಸಿನವರು. ಸಂತ್ರಸ್ತೆ ಯುವತಿಗೆ ಮತ್ತು ಆರೋಪಿಗೆ ಯಾವುದೇ ಬಾಹ್ಯ ಗಾಯಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. "ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ ಮತ್ತು ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯಿದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ವಸಂತ ವಿಹಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ" ಎಂದು ಪೊಲೀಸ್ ಉಪ ಆಯುಕ್ತ (ನೈಋತ್ಯ) ಮನೋಜ್ ಸಿ ತಿಳಿಸಿದ್ದಾರೆ. ಘಟನೆ ಸಂಬಂಧ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ

ಇದನ್ನೂ ಓದಿ: ಅಪ್ರಾಪ್ತೆಯ ಅತ್ಯಾಚಾರಗೈದ ಅಪ್ಪ, ಇಬ್ಬರು ಸ್ನೇಹಿತರು 20 ವರ್ಷ ಜೈಲುಪಾಲು!

click me!