Delhi horror 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಸಿಬ್ಬಂದಿ ಸೇರಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರ!

Published : Mar 23, 2023, 09:46 PM IST
Delhi horror 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಸಿಬ್ಬಂದಿ ಸೇರಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರ!

ಸಾರಾಂಶ

ದೆಹಲಿಯಲ್ಲಿ ಮತ್ತೊಂದು ಭೀಕರ ಅತ್ಯಾಚಾರ ನಡೆದಿದೆ. 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಪಿಯೋನ್ ಸೇರಿ ನಾಲ್ವರು ಸಾಮಾಹಿಕ ಅತ್ಯಾಚಾರ ಎಸಗಿದ್ದಾರೆ. ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಶಾಲೆಯಲ್ಲಿ ಈ ಘಟನೆ ನಡೆದಿದೆ

ನವದೆಹಲಿ(ಮಾ.23): ದೇಶದಲ್ಲಿ ಮಹಿಳೆ ಹಾಗೂ ಮಕ್ಕಳ ಮೇಲಿನ ನಡೆಯುತ್ತಿರುವ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ಆತಂಕ ತರುತ್ತಿದೆ. ಇದೀಗ ದೆಹಲಿಯಲ್ಲಿ ಮತ್ತೆ ಅತ್ಯಾಚಾರ ವರದಿಯಾಗಿದೆ. ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಶಾಲೆಯಲ್ಲಿ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಾಲಾ ಪಿಯೋನ್ ಸೇರಿ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. 10 ವರ್ಷ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಪಿಯೋನ್ ಅಜಯ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂವರಿಗಾಗಿ ಶೋಧ ಕಾರ್ಯ ಆರಂಭಗೊಂಡಿದೆ. ಇತ್ತ ದೆಹಲಿ ಮಹಿಳಾ ಆಯೋಗ, ಶಾಲಾ ಆಡಳಿತ ಮಂಡಳಿ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ವಿದ್ಯಾರ್ಥಿನಿಗೆ ಮತ್ತು ಬರುವ ಔಷಧಿ ನೀಡಿ ನಿರ್ಜನ ಸ್ಥಳಕ್ಕೆ ಹೊತ್ತೊಯ್ದ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಘಟನೆಯಿಂದ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿದೆ. ವಿದ್ಯಾರ್ಥಿನಿಯನ್ನು ದೆಹಲಿಯ ಎಲ್‌ಬಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವಿಶೇಷ ಚೇತನ ಮಹಿಳೆ ಮೇಲೆ NGO ಸದಸ್ಯರಿಂದ ಅತ್ಯಾಚಾರ, ಒಂದು ವರ್ಷದ ಬಳಿಕ ಪ್ರಕರಣ ಬೆಳಕಿಗೆ!

ಈ ಘಟನೆ ಕುರಿತು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಅತ್ಯಂತ ಗಂಭೀರ ಪ್ರಕರಣವಾಗಿದೆ. 10 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಇದರಲ್ಲಿ ಶಾಲಾ ಸಿಬ್ಬಂದಿಯೂ ಸೇರಿದ್ದಾರೆ. ಈ ಘಟನೆಯಿಂದ ಶಾಲೆಗೆ ತೆರಳು ವಿದ್ಯಾರ್ಥಿಗಳು ಎಷ್ಟು ಸುರಕ್ಷಿತ ಅನ್ನೋ ಪ್ರಶ್ನೆ ಮೂಡಿದೆ. ಹೀಗಾಗಿ ದೆಹಲಿ ಮುನ್ಸಿಪಲ್ ಕಾರ್ಪೋರೇಶನ್ ಶಾಲೆ ಹಾಗೂ ಪೊಲೀಸರಿಗೆ ನೊಟೀಸ್ ಜಾರಿ ಮಾಡಲಾಗಿದೆ ಎಂದು ಸ್ವಾತಿ ಮಲಿವಾಲ್ ಹೇಳಿದ್ದಾರೆ.

ಅಪ್ರಾಪ್ತತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಶಿಕ್ಷೆ
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ . 1.60 ಲಕ್ಷ ದಂಡ ವಿಧಿಸಿ ಹಾವೇರಿಯ ವಿಶೇಷ ಸತ್ರ ನ್ಯಾಯಾಲಯದ (ಶೀಘ್ರಗತಿ ನ್ಯಾಯಾಲಯದ-1) ನ್ಯಾಯಾಧೀಶರಾದ ನಿಂಗೌಡ ಪಾಟೀಲ ತೀರ್ಪು ನೀಡಿದ್ದಾರೆ.

ಇದೆಂಥಾ ಪೈಶಾಚಿಕ ಕೃತ್ಯ, ಕಲಬುರಗಿ ಜಿಮ್ಸ್‌ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ!

ಸೊರಬ ತಾಲೂಕಿನ ಉದ್ರಿ ಗ್ರಾಮದ ಚಂದ್ರಪ್ಪ ಈರಪ್ಪ ಗಂಗಳ್ಳೇರ (42) ಶಿಕ್ಷೆಗೊಳಗಾದ ಆರೋಪಿ. ಬಾಲಕಿಯನ್ನು ಫೋನಿನ ಮೂಲಕ ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದಾನೆ. ಜು. 18, 2020ರಂದು ಅಪಹರಿಸಿಕೊಂಡು ಚಿಕ್ಕಮಂಗಳೂರ ಮತ್ತು ಸಕಲೇಶಪುರಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾಗಿ ಕಾಗಿನೆಲೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಬ್ಯಾಡಗಿ ವೃತ್ತ ತನಿಖಾಧಿಕಾರಿ ಸಿಪಿಐ ಬಸವರಾಜ ಪಿ.ಎಸ್‌. ತನಿಖೆ ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಎಲ್ಲವನ್ನು ಕೂಲಂಕುಷವಾಗಿ ಪರಿಶೀಲಿಸಿದ ನ್ಯಾಯಾಲಯ ಆರೋಪಿಗೆ ದಂಡ ಹಾಗೂ ಶಿಕ್ಷೆ ವಿಧಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ