ಶಾಲಾ ಟಾಯ್ಲೆಟ್‌ನಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

Published : Jul 24, 2022, 12:16 PM IST
ಶಾಲಾ ಟಾಯ್ಲೆಟ್‌ನಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಆರೋಪಿ ಬಂಧನ

ಸಾರಾಂಶ

Crime News: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಆರೋಪಿ ವಿದ್ಯಾರ್ಥಿನಿ ಓದುತ್ತಿದ್ದ ಶಾಲೆಯಲ್ಲೇ ವಾಚ್‌ಮನ್‌ ಆಗಿ ಕೆಲಸ ಮಾಡುತ್ತಿದ್ದ. ಶಾಲೆಯ ಬಾತ್‌ರೂಂನಲ್ಲೇ ಆಕೆಯ ಮೇಲೆ ಅತ್ಯಾಚಾರ ಮಾಡಲಾಗಿದೆ.

ಭೋಪಾಲ್‌:ಎಂಟೂವರೆ ವರ್ಷದ ಬಾಲಕಿ ಮೇಲೆ ಸರ್ಕಾರಿ ಶಾಲೆಯ ಟಾಯ್ಲೆಟ್‌ನಲ್ಲಿ ಅತ್ಯಾಚಾರ ನಡೆಸಿದ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಶಾಲೆಯಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಯ ಗಂಡನಿಂದ ಈ ಕೃತ್ಯ ನಡೆದಿದ್ದು, ಆರೋಪಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ತನ್ನ ಮೇಲೆ ನಡೆದ ಅತ್ಯಾಚಾರದ ಬಗ್ಗೆ ಬಾಲಕಿ ವಿವರವಾಗಿ ಮಾಹಿತಿ ನೀಡಿದ್ದಾಳೆ. ಕೃತ್ಯ ಎಸಗಿದ ಆರೋಪಿ ನೋಡಲು ಹೇಗೆ ಕಾಣುತ್ತಾನೆ ಎಂಬ ವಿವರ ಬಾಲಕಿ ನೀಡಿದ ನಂತರ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಲಕ್ಷ್ಮಿನಾರಾಯಣ್‌ ಧನಕ್‌ ಎಂದು ಗುರುತಿಸಲಾಗಿದೆ. 

ಇದನ್ನೂ ಓದಿ: ರೈಲ್ವೆ ಸ್ಟೇಷನ್‌ನಲ್ಲೇ ಅತ್ಯಾಚಾರ: ಕೃತ್ಯವೆಸಗಿದ 4 ಉದ್ಯೋಗಿಗಳ ಬಂಧನ

"ಅತ್ಯಾಚಾರ ಘಟನೆಯೊಂದಿ ಭೋಪಾಲ್‌ನ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆದಿದೆ. ಆರೋಪಿ ಶಾಲೆಯಲ್ಲಿ ವಾಚ್‌ಮನ್‌ ಆಗಿ ಕೆಲಸ ಮಾಡುತ್ತಿದ್ದ. ಆತನನ್ನು ನಾವು ಬಂಧಿಸಿದ್ದೇವೆ. ವಿಚಾರಣೆ ವೇಳೆ ಆತನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಹೆಚ್ಚುವರಿ ತನಿಖೆ ನಡೆಸಲಾಗುತ್ತಿದೆ," ಎಂದು ಭೋಪಾಲ್‌ನ ಹೆಚ್ಚುವರಿ ಪೊಲೀಸ್‌ ಆಯುಕ್ತ ಸಚಿನ್‌ ಅತುಲ್ಕರ್‌ ಮಾಹಿತಿ ನೀಡಿದ್ದಾರೆ. 
ಪೊಲೀಸರ ಮಾಹಿತಿ ಪ್ರಕಾರ ವಿದ್ಯಾರ್ಥಿನಿ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದಾಳೆ. ಕಳೆದ ಆರು ದಿನಗಳ ಹಿಂದಷ್ಟೇ ಬಾಲಕಿ ಶಾಲೆಗೆ ಸೇರ್ಪಡೆಯಾಗಿದ್ದಾಳೆ. ಶುಕ್ರವಾರ ಮಧ್ಯಾಹ್ನ ಆಕೆಯ ಮೇಲೆ ಅತ್ಯಾಚಾರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ (Protection of Children from Sexual Offences Act) ಮತ್ತು ಅತ್ಯಾಚಾರದ ಪ್ರಕರಣ ದಾಖಲಾಗಿದೆ. 

"ಸಂತ್ರಸ್ಥ ಬಾಲಕಿ ಶುಕ್ರವಾರ ಮಧ್ಯಾಹ್ನ ಬಾತ್‌ರೂಂಗೆ ಹೋಗಿದ್ದಾಳೆ. ಆಗ ಆರೋಪಿ ಆಕೆಯ ಕಣ್ಣು ಮತ್ತು ಬಾಯಿ ಮುಚ್ಚಿ ಬಾತ್‌ರೂಂ ಒಳಕ್ಕೆ ಕರೆದೊಯ್ದು ಬಾಗಿಲು ಲಾಕ್‌ ಮಾಡಿಕೊಂಡಿದ್ದಾರೆ. ಆಕೆಯ ಮೇಲೆ ಅತ್ಯಾಚಾರ ಮಾಡಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ," ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಇದನ್ನೂ ಓದಿ: ಫೇಸ್‌ಬುಕ್ ಫ್ರೆಂಡ್‌ ಭೇಟಿಯಾಗಲು ಬಂದ ಅಮೆರಿಕದ ಟಿಕ್‌ಟಾಕರ್‌, ಪಾಕಿಸ್ತಾನಿ ಸ್ನೇಹಿತರಿಂದ ಗ್ಯಾಂಗ್‌ರೇಪ್‌!

ಬಾಲಕಿ ಅಳುತ್ತಿರುವುದನ್ನು ಬೇರೆ ವಿದ್ಯಾರ್ಥಿಗಳು ನೋಡಿದ್ದಾರೆ. ನಂತರ ಶಾಲೆಯ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ. ಅದರಿಂದ ಕೃತ್ಯ ಬೆಳಕಿಗೆ ಬಂದಿದೆ. "ಶಿಕ್ಷಕರು ಯಾಕೆ ಅಳುತ್ತಿದ್ದಾಳೆಂದು ಬಾಲಕಿಯನ್ನು ಕೇಳಿದ್ದಾರೆ. ಆಗ ಹಳದಿ ಬಣ್ಣದ ಶರ್ಟ್‌ ಧರಿಸಿರುವ ಅಂಕಲ್‌ ಒಬ್ಬರು ಬಾತ್‌ರೂಂಗೆ ನನ್ನನ್ನು ಬಲವಂತವಾಗಿ ಎಳೆದೊಯ್ದು ಅತ್ಯಾಚಾರ ಮಾಡಿದ ಬಗ್ಗೆ ವಿವರಿಸಿದ್ದಾಳೆ. ನಂತರ ಶಿಕ್ಷಕರು ನಮಗೆ ಮಾಹಿತಿ ನೀಡಿದರು," ಎಂದು ಪೊಲೀಸರು ತಿಳಿಸಿದ್ದಾರೆ. 

ಇದನ್ನೂ ಓದಿ: ಪತ್ನಿಯ ಸಹಾಯದಿಂದ ಅಪ್ರಾಪ್ತ ಬಾಲಕಿ ಮೇಲೆ ಪತಿ ಅತ್ಯಾಚಾರ: ಬಲವಂತವಾಗಿ ಆಸಿಡ್ ಕುಡಿಸಿ ವಿಕೃತಿ

ನಂತರ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ವಿಚಾರಣೆ ವೇಳೆ ಅತ್ಯಾಚಾರ ಎಸಗಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಪ್ರಕರಣದ ತನಿಖೆ ಮುಂದುವರೆಸಲಾಗಿದೆ. ಶಾಲೆಗೆ ಸೇರಿ ವಾರ ಕಳೆಯುವುದರೊಳಗೆ ಇಂತಾ ದುರಂತ ವಿದ್ಯಾರ್ಥಿನಿಯ ಬಾಳಲ್ಲಿ ಜರುಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು