ದರೋಡೆ ಪ್ರಕರಣ: ಸ್ಯಾಂಟ್ರೋ ರವಿ ಪತ್ನಿಗೆ ಕ್ಲೀನ್‌ಚಿಟ್‌?

Published : May 18, 2023, 08:25 AM ISTUpdated : May 18, 2023, 08:48 AM IST
ದರೋಡೆ ಪ್ರಕರಣ: ಸ್ಯಾಂಟ್ರೋ ರವಿ ಪತ್ನಿಗೆ ಕ್ಲೀನ್‌ಚಿಟ್‌?

ಸಾರಾಂಶ

ವೈಯಕ್ತಿಕ ದ್ವೇಷದಿಂದ ಪತಿ ನಡೆಸಿದ ಪಿತೂರಿಯಿಂದಾಗಿ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಸುಳ್ಳು ದರೋಡೆ ಪ್ರಕರಣ ದಾಖಲಾಗಿದ್ದಕ್ಕೆ ಸಿಸಿಬಿ ತನಿಖೆಯಲ್ಲಿ ಪೂರಕ ಸಾಕ್ಷ್ಯಗಳು ಲಭ್ಯವಾಗಿವೆ. ಆಗಿನ ಕಾಟನ್‌ಪೇಟೆ ಠಾಣೆ ಇನ್‌ಸ್ಪೆಕ್ಟರ್‌ ಪ್ರವೀಣ್‌ ಕರ್ತವ್ಯ ಲೋಪ ಎಸಗಿರುವುದು ಸಹ ಸಾಬೀತು. 

ಬೆಂಗಳೂರು(ಮೇ.18):  ಕುಖ್ಯಾತ ವಂಚಕ ಕೆ.ಎಸ್‌.ಮಂಜುನಾಥ ಅಲಿಯಾಸ್‌ ಸ್ಯಾಂಟ್ರೋ ರವಿ ಎರಡನೇ ಪತ್ನಿ ವಿರುದ್ಧದ ದರೋಡೆ ಪ್ರಕರಣದ ತನಿಖೆ ಮುಕ್ತಾಯಗೊಳಿಸಿರುವ ಸಿಸಿಬಿ, ಈ ಸಂಬಂಧ ಶೀಘ್ರದಲ್ಲೇ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಚ್‌ ಅನ್ನು ಸಲ್ಲಿಸಲು ಅಂತಿಮ ಹಂತದ ಸಿದ್ಧತೆ ನಡೆಸಿದೆ. ಈ ಪ್ರಕರಣದಲ್ಲಿ ರವಿ ಪತ್ನಿಗೆ ಸಿಸಿಬಿ ಕ್ಲೀನ್‌ಚೀಟ್‌ ನೀಡಲಿದೆ ಎನ್ನಲಾಗಿದೆ.

ವೈಯಕ್ತಿಕ ದ್ವೇಷದಿಂದ ಪತಿ ನಡೆಸಿದ ಪಿತೂರಿಯಿಂದಾಗಿ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಸುಳ್ಳು ದರೋಡೆ ಪ್ರಕರಣ ದಾಖಲಾಗಿದ್ದಕ್ಕೆ ಸಿಸಿಬಿ ತನಿಖೆಯಲ್ಲಿ ಪೂರಕ ಸಾಕ್ಷ್ಯಗಳು ಲಭ್ಯವಾಗಿವೆ. ಆಗಿನ ಕಾಟನ್‌ಪೇಟೆ ಠಾಣೆ ಇನ್‌ಸ್ಪೆಕ್ಟರ್‌ ಪ್ರವೀಣ್‌ ಕರ್ತವ್ಯ ಲೋಪ ಎಸಗಿರುವುದು ಸಹ ಸಾಬೀತಾಗಿದೆ ಎಂದು ಮೂಲಗಳು ‘ಕನ್ನಡಪ್ರಭ’ಕ್ಕೆ ತಿಳಿಸಿವೆ.

ಪತ್ನಿ ವಿರುದ್ಧ ಕೇಸ್‌: ನೆರವಿತ್ತವರಿಗೆ ಸ್ಯಾಂಟ್ರೋ ರವಿ ಆಫರ್‌; ದೂರು ನೀಡಿದವನಿಗೆ ಸರ್ಕಾರಿ ಉದ್ಯೋಗ, ಹಣದ ನೆರವು..!

ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯ ಪೊಲೀಸ್‌ ಇಲಾಖೆಯ ವರ್ಗಾವಣೆ ದಂಧೆಯಲ್ಲಿ ಸ್ಯಾಂಟ್ರೋ ರವಿ ಪಾತ್ರ ವಹಿಸಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಆತನ ಕೆಲವು ವಿಡಿಯೋಗಳು ಬಹಿರಂಗವಾಗಿ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿತ್ತು. ಅತ್ಯಾಚಾರ ಹಾಗೂ ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಿದ ಆರೋಪದ ಮೇರೆಗೆ ಆತನ ಪತ್ನಿ ಮೈಸೂರಿನಲ್ಲಿ ಸ್ಯಾಂಟ್ರೋ ರವಿ ವಿರುದ್ಧ ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್‌ನಲ್ಲಿ ಮೈಸೂರು ಪೊಲೀಸರು ಬಂಧಿಸಿ ಕರೆ ತಂದಿದ್ದರು. ಬಳಿಕ 2022ರ ನವೆಂಬರ್‌ನಲ್ಲಿ ಆತನ ಪತ್ನಿ ಹಾಗೂ ನಾದಿನಿ ಮೇಲೆ ಬೆಂಗಳೂರಿನ ಕಾಟನ್‌ಪೇಟೆ ಠಾಣೆಯಲ್ಲಿ ಸುಳ್ಳು ದರೋಡೆ ಪ್ರಕರಣ ದಾಖಲಾಗಿದ್ದ ಸಂಗತಿ ಬಯಲಾಗಿತ್ತು. ಈ ಸಂಬಂಧ ಅಂದಿನ ಕಾಟನ್‌ಪೇಟೆ ಠಾಣೆಯ ಇನ್‌ಸ್ಪೆಕ್ಟರ್‌ ಪ್ರವೀಣ್‌ ಅವರನ್ನು ಡಿಜಿಪಿ ಪ್ರವೀಣ್‌ ಸೂದ್‌ ಅಮಾನತುಗೊಳಿಸಿದ್ದರು. ಈ ಸುಳ್ಳು ದರೋಡೆ ಆರೋಪದ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದ ಸಿಸಿಬಿ, ಕೊನೆಗೆ ರವಿ ಪತ್ನಿ ಹಾಗೂ ನಾದಿನಿಯನ್ನು ದೋಷಮುಕ್ತಗೊಳಿಸಿದೆ ಎನ್ನಲಾಗಿದೆ.

ಸ್ಯಾಂಟ್ರೋ ವಿರುದ್ಧ ಮತ್ತೊಂದು ಕೇಸ್‌?

ದರೋಡೆ ಪ್ರಕರಣದಲ್ಲಿ ಸಿಸಿಬಿ ‘ಬಿ’ ರಿಪೋರ್ಚ್‌ ಸಲ್ಲಿಸಿದ ಬಳಿಕ ರವಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ದರೋಡೆ ಪ್ರಕರಣದಲ್ಲಿ ರವಿಯನ್ನು ಪೊಲೀಸರು ತನಿಖೆಗೆ ಒಳಪಡಿಸಿಲ್ಲ. ಈ ಕೃತ್ಯದಲ್ಲಿ ಆತನ ವಿಚಾರಣೆಗೆ ತಾಂತ್ರಿಕ ತೊಡಕು ಎದುರಾಗಿತ್ತು. ಹೀಗಾಗಿ ಎರಡನೇ ಪತ್ನಿ ದೂರು ಆಧರಿಸಿ ಪ್ರತ್ಯೇಕ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ಪೊಲೀಸರು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!