ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ನೋಡುವ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!

By Kannadaprabha NewsFirst Published Feb 13, 2024, 8:48 PM IST
Highlights

ಹೋರಿ ಹಬ್ಬ ಅಥವಾ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಶಿವಮೊಗ್ಗ (ಫೆ.13): ಹೋರಿ ಹಬ್ಬ ಅಥವಾ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ.

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಮೃತಪಟ್ಟ ಯುವಕ. ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿದ್ದ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. 

ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವುದೇ ದೊಡ್ಡ ಸವಾಲಾಗಿದೆ: ಡಿಕೆ ಶಿವಕುಮಾರ

ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಹೋರಿ ತಿವಿದ ಪರಿಣಾಮ ತೀವ್ರ ಗಾಯಗೊಂಡಿದ್ದ. ತೀವ್ರ ಗಾಯಗೊಂಡಿದ್ದ ಪುನೀತ್ ರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕೊಂಡೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಕೊನೆಯುಸಿರೆಳೆದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪುನೀತ್ ತಂದೆ ಗಜೇಂದ್ರ ಆಚಾರ್ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹೋರಿ ಹಬ್ಬ ಆಯೋಜಕರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Hubli: 11 ಜನರ ಮೇಲೆ ಪೊಲೀಸರಿಂದ ದೌರ್ಜನ್ಯ ಆರೋಪ: ಹಣಕ್ಕಾಗಿ ಕಾಯುವ ರಕ್ಷಕರೇ ರೌಡಿಗಳಂತೆ ವರ್ತಿಸಿದ್ರಾ ?

ಸೋಮವಾರ ಪುನೀತ್ ಆಚಾರ್ ಕಲ್ಮನೆಗೆ ಗೂಳಿ ಓಟ ವೀಕ್ಷಿಸಲು ತೆರಳಿದ್ದ. ಆತ ಕ್ರೀಡೆಯನ್ನು ವೀಕ್ಷಿಸುತ್ತಿದ್ದಾಗ, ಗೂಳಿಯೊಂದು ಅವರಿಗೆ ತಿವಿದಿದ್ದು, ಈ ವೇಳೆ ಪುನೀತ್ ತೀವ್ರವಾಗಿ ಗಾಯಗೊಂಡರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

click me!