
ರಾಯಚೂರು(ಮಾ.13): ಸಾರಿಗೆ ಬಸ್‌ನಲ್ಲಿ ತಡರಾತ್ರಿ ಪ್ರಯಾಣಿಸುತ್ತಿದ್ದ ಮಹಿಳೆಗೆ ನಿರ್ವಾಹಕರೊಬ್ಬರು ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಬಸ್ ಕಡೆಕ್ಟರ್ ವಿರುದ್ಧ ಸಂತ್ರಸ್ತ ಮಹಿಳೆ ಇಲಾಖೆ ಮೇಲಾಧಿಕಾರಿಗೆ ದೂರು ಸಲ್ಲಿಸಿದ್ದಾಳೆ.
ಕಳೆದ ಫೆ.18 ರಂದು ದೇವದುರ್ಗದ ಮಹಿಳೆಯೊಬ್ಬರು ರಾಯಚೂರು ನಗರ ವಿಭಾಗಕ್ಕೆ ಸೇರಿದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ನಲ್ಲಿ ರಾಯಚೂರಿನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಸಮಯದಲ್ಲಿ ತಡ ರಾತ್ರಿ ಬಸ್ ಒಳಗಿನ ಲೈಟ್ ಆಫ್ ಆದಾಗ ರಾಯಚೂರು ನಗರ ಘಟಕದ ಕಂಡಕ್ಟರ್ ಲಕ್ಷ್ಮಿಕಾಂತ್ ರೆಡ್ಡಿ ಎನ್ನುವವರು ಖಾಸಗಿ ಅಂಗಾಂಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದಾನೆ.
ತುಮಕೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಬಾಲಮಂಜುನಾಥ್ ಸ್ವಾಮೀಜಿ ಅರೆಸ್ಟ್
ಬಸ್ ಚಾಲಕನ ಸೀಟ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆಗೆ ಚಾಲಕ ಮಲಗಲು ಇರುವ ಸೀಟ್ ನಲ್ಲಿ ಮಲಗಿದ್ದ ಆರೋಪಿ ಕಂಡಕ್ಟರ್ ಶಕ್ತಿ ಯೋಜನೆಯಡಿ ಆ ಮಹಿಳೆಗೆ ನೀಡಿದ ಉಚಿತ ಟಿಕೆಟ್ ಹರಿದು ತನ್ನ ಜೇಬಿನಲ್ಲಿರಿಸಿಕೊಂಡು ಟಿಕೆಟ್ ಬೇಕಾದರೆ ಸಹಕರಿಸು ಇಲ್ಲದಿದ್ದರೆ ದಂಡ ಬೀಳುತ್ತೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ. ದೂರನ್ನು ಗಂಭೀರವಾಗಿ ಪರಿಗಣಿಸಿರುವ ಸಾರಿಗೆ ಸಂಸ್ಥೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ