Actor Chetan Row: ನಟ ಚೇತನ್ ವಿರುದ್ಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
ಉಡುಪಿ (ಅ. 20): ‘ಕಾಂತಾರ’ ಚಿತ್ರದಲ್ಲಿ ತೋರಿಸಿರುವಂತೆ ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರಿದ ಆಚರಣೆ ಅಲ್ಲ. ಅದು ಮೂಲ ನಿವಾಸಿಗಳಾದ ಆದಿವಾಸಿಗಳ ಹಬ್ಬ. ಅದನ್ನು ಹಿಂದೂ ಧರ್ಮದ ಜತೆ ಸೇರಿಸಿರುವುದು ತಪ್ಪು ಎಂದು ಅಭಿಪ್ರಾಯಪಟ್ಟಿದ್ದ ನಟ ಚೇತನ್ ವಿರುದ್ಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೇತನ್ ವಿರುದ್ಧ ಹಿಂದೂ ಜಾಗರಣಾ ವೇದಿಕೆ ದೂರು ನೀಡಿದ್ದು ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ಧಕ್ಕೆಯಾಗಿದೆ, ಹೀಗಾಗಿ ನಟ ಚೇತನ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಚೇತನ್ ಹೇಳಿಕೆಯನ್ನು ದೈವಾರಾಧಕರು ಸೇರಿದಂತೆ ದಕ್ಷಿಣ ಕನ್ನಡದ ಅನೇಕರು ಖಂಡಿಸಿದ್ದಾರೆ. ಇದು ಹಿಂದೂ ಸಂಸ್ಕೃತಿಯ ಭಾಗ ಎಂದು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಚೇತನ್, ‘ಕಾಂತಾರ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ಸಂಗತಿ. ಭೂತಕೋಲ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ, ನಳಿಕೆ, ಪರವ ಬಹುಜನ ಸಂಪ್ರದಾಯಗಳು ವೈದಿಕ ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವಂತವು. ಮೂಲನಿವಾಸಿಗಳ ಸಂಸ್ಕೃತಿಯನ್ನು ಪರದೆ ಮೇಲಾಗಲಿ, ಅದರಾಚೆಗಾಗಲಿ ಸತ್ಯಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳಿಕೊಳ್ಳುತ್ತೇವೆ’ ಎಂದಿದ್ದಾರೆ.
undefined
ಸಂಸ್ಕ್ರತಿ ಇಲ್ಲದವರು ಸಂಸ್ಕ್ರತಿ ಬಗ್ಗೆ ಮಾತನಾಡಬಾರದು , ನಟ ಚೇತನ್‌ಗೆ ಸಚಿವ ಸುನೀಲ್ ಕುಮಾರ್ ಟಾಂಗ್
ಬಳಿಕ ಸುದ್ದಿಗೋಷ್ಠಿ ನಡೆಸಿ, ‘ಕಾಂತಾರ ಚಿತ್ರದಲ್ಲಿ ಹಂದಿಗೆ ವರಾಹ ಪದ ಬಳಸಿ ವಿಷ್ಣುವಿನ ರೂಪಕ ನೀಡಿದ್ದಾರೆ. ಇದು ಮೂಲ ಆಚರಣೆ ಮತ್ತು ಜನಪದೀಯ ಸಂಸ್ಕೃತಿಯ ಮೇಲೆ ವೈದಿಕ ಮತ್ತು ಬ್ರಾಹ್ಮಣ್ಯ ಸಂಸ್ಕೃತಿಯ ಹೇರಿಕೆ ಆಗಿದೆ’ಎಂದು ಕಿಡಿಕಾರಿದ್ದಾರೆ.