ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿಗಾಗಿ ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿ ದರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ.
ಬೆಳಗಾವಿ (ಜು.27): ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿಗಾಗಿ ಗ್ರಾಮ ಒನ್ ಕೇಂದ್ರದ ಲಾಗಿನ್ ಐಡಿ ದರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ. ಬೆಳಗಾವಿ ನಗರದ ಚವಾಟಗಲ್ಲಿಯಲ್ಲಿ ಜನತಾ ಆನ್ ಲೈನ್ ಸೆಂಟರ್ ನಡೆಸುತ್ತಿರುವ ಅದೃಶ್ ಆರ್.ಟಿ. ಹಾಗೂ ಮುತಗಾ ಗ್ರಾಮ ಒನ್ ಕೇಂದ್ರದ ಕಿರಣ ಚೌಗಲಾ ಎಂಬುವರ ವಿರುದ್ಧ ಬೆಳಗಾವಿ ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿರುತ್ತದೆ.
ಚವಾಟಗಲ್ಲಿಯ ಜನತಾ ಆನ್ ಲೈನ್ ಕೇಂದ್ರದಲ್ಲಿ ಗೃಹಲಕ್ಷ್ಮೀ ಫಲಾನುಭವಿಗಳ ನೋಂದಣಿಗೆ ಹಣ ಪಡೆಯಲಾಗುತ್ತಿದೆ ಎಂಬ ಸಾರ್ವಜನಿಕರ ದೂರಿನ ಮೇರೆಗೆ ಇಂದು ಅಧಿಕಾರಿಗಳ ತಂಡವು ದಾಳಿ ನಡೆಸಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ನಾಗರಾಜ್, ಬೆಳಗಾವಿ ತಹಶಿಲ್ದಾರ ಸಿದ್ದರಾಯ ಬೋಸಗಿ ಹಾಗೂ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭಜಂತ್ರಿ ಅವರು ಜನತಾ ಆನ್ ಲೈನ್ ಕೇಂದ್ರದ ಮೇಲೆ ದಾಳಿ ನಡೆಸಿ ಅಕ್ರಮವನ್ನು ಪತ್ತೆ ಮಾಡಿದ್ದರು. ಇದಾದ ಬಳಿಕ ಕೇಂದ್ರಕ್ಕೆ ಬೀಗ ಜಡಿದು ಪೊಲೀಸ್ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿರುವ ಮುತಗಾ ಗ್ರಾಮ ಒನ್ ಕೇಂದ್ರದ ಪರವಾನಿಗೆಯನ್ನು ಕೂಡ ಅಮಾನತು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಲೋಕಸಭೆ: ರಾಜ್ಯದಲ್ಲಿ 15-20 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು: ಜಗದೀಶ್ ಶೆಟ್ಟರ್
ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮುಗಿಬಿದ್ದ ಜನ: ಗೃಹಲಕ್ಷಿ ಯೋಜನೆ ಅರ್ಜಿ ಸಲ್ಲಿಸಲು ಮಹಿಳೆಯರು ಮುಗಿಬಿದ್ದಿದ್ದು, ಬುಧವಾರ ವಿನೋಬನಗರದ ಸೂಡಾ ಕಾಂಪ್ಲೆಕ್ಸ್, ಬಸ್ ನಿಲ್ದಾಣ, ದ್ರೌಪದಮ್ಮ ವೃತ್ತದಲ್ಲಿರುವ ಇರುವ ಸೇವಾ ಕೇಂದ್ರ ಬಳಿ ಅರ್ಜಿ ಸಲ್ಲಿಸಲು ಮಹಿಳೆಯರು ಮಳೆಯನ್ನೂ ಲೆಕ್ಕಿಸದೇ ಉದ್ದದ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯ್ದು ನಿಂತಿದ್ದ ದೃಶ್ಯ ಕಂಡುಬಂತು. ವಿನೋಬನಗರದ ಸೂಡಾ ಕಾಂಪ್ಲೆಕ್ಸ್, ಬಸ್ ನಿಲ್ದಾಣ, ದ್ರೌಪದಮ್ಮ ವೃತ್ತದಲ್ಲಿರುವ ಇರುವ ಸೇವಾ ಕೇಂದ್ರಗಳು ಅಧಿಕೃತ ಕೇಂದ್ರಗಳಾಗಿವೆ. ಈ ಕೇಂದ್ರಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ.
ಸುರಿಯುತ್ತಿರುವ ಮಳೆಯ ನಡುವೆಯೂ ಬೆಳಗ್ಗೆಯಿಂದಲೇ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಅರ್ಜಿ ಸಲ್ಲಿಸಲು ದಿನಗಟ್ಟಲೇ ಕಾಯುವ ಪರಿಸ್ಥಿತಿ ಎದುರಾಗಿದೆ. ಈ ಯೋಜನೆ ಆಗಸ್ಟ್ 15ಕ್ಕೆ ಕೊನೆ ಎಂಬ ಸುಳ್ಳು ವದಂತಿಯಿಂದ ಆತಂಕಕ್ಕೊಳಗಾದ ಮಹಿಳೆಯರು ಅರ್ಜಿ ಸಲ್ಲಿಸಲು ಮುಗಿಬಿದ್ದಿದ್ದಾರೆ. ಈಗಾಗಲೇ ಕಾಂಗ್ರೆಸ್ ಸ್ಥಳೀಯ ಮುಖಂಡರು ಅರ್ಜಿ ಸಲ್ಲಿಕೆಗೆ ಯಾವುದೇ ಗಡುವು ಇಲ್ಲ, ಅದು ನಿರಂತರ ಪ್ರಕ್ರಿಯೆ ಎಂದು ಹೇಳಿದ್ದಾರೆ. ಆದರೂ ಕೇಳುವ ವ್ಯವಧಾನ ಮಹಿಳೆಯರಿಗೆ ಇಲ್ಲವಾಗಿದೆ. ಹೀಗಾಗಿ ಗೃಹಲಕ್ಷ್ಮೇ ಯೋಜನೆಗೆ ಅರ್ಜಿ ಸಲ್ಲಿಸಲು ನೂಕುನುಗ್ಗಲು ಉಂಟಾಗಿದೆ.
ಕೆಜೆ ಹಳ್ಳಿ, ಡಿಜೆ ಹಳ್ಳಿ ಆರೋಪಿಗಳನ್ನು ಅಮಾಯಕರೆಂದು ಪರಿಗಣಿಸುವುದು ಅಪಾಯಕಾರಿ: ಸಿ.ಟಿ.ರವಿ
ಕೇಂದ್ರಗಳ ರದ್ದುಪಡಿಸಲು ಕಾಂಗ್ರೆಸ್ ಆಗ್ರಹ: ಶಿವಮೊಗ್ಗ ನಗರದಲ್ಲಿ ಕೇವಲ ಮೂರು ಅಧಿಕೃತ ಸೇವಾ ಕೇಂದ್ರಗಳಿದ್ದರೂ ಹಲವು ಖಾಸಗಿ ಸೇವಾ ಕೇಂದ್ರಗಳು ಅಧಿಕೃತ ಸೇವಾ ಕೇಂದ್ರಗಳಿಂದ ಲಾಗಿನ್ ಐಡಿ ಪಡೆದು ಅವರೂ ನೋಂದಣಿ ಮಾಡುತ್ತಿದ್ದಾರೆ. ಇದಕ್ಕೆ ಅವರು ಮಹಿಳೆಯರಿಂದ ಮನಸ್ಸಿಗೆ ಬಂದಂತೆ ಶುಲ್ಕ ಪಡೆಯುತ್ತಿದ್ದಾರೆ ಎಂಬ ದೂರುಗಳಿವೆ. ಈ ರೀತಿ ಎರವಲು ಲಾಗಿನ್ ಪಡೆಯುವುದು ಕ್ರಿಮಿನಲ್ ಅಪರಾಧವಾಗಿದೆ. ಅಲ್ಲದೇ, ಯಾವುದೇ ಕಾರಣಕ್ಕೂ ಯಾವುದೇ ರೀತಿಯ ಶುಲ್ಕವನ್ನು ಸೇವಾ ಕೇಂದ್ರಗಳು ಪಡೆಯುವಂತಿಲ್ಲ. ಆದರೂ ಶುಲ್ಕ ಪಡೆಯುತ್ತಿರುವುದು ಕಂಡು ಬಂದಿರುವುದರಿಂದ ಅಂತಹ ಕೇಂದ್ರಗಳ ಅನುಮತಿಯನ್ನು ರದ್ದುಪಡಿಸಲು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.