
ಬೆಂಗಳೂರು(ಅ. 26) ಇನ್ಫೋಸಿಸ್ ಪ್ರತಿಷ್ಠಾನ ಅಧ್ಯಕ್ಷೆ ಸುಧಾ ಮೂರ್ತಿ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜಯರಾಜ್ ನಾಯ್ಡು ದೂರು ನೀಡಿದ್ದಾರೆ ವೆಬ್ ಸೀರಿಸ್ ನಲ್ಲಿ ಬರುವ ಸನ್ನಿವೇಶದಲ್ಲಿ ಅವಹೇಳನ ಮಾಡಲಾಗಿದೆ. ಹೆಸರು ಬದಲಿಸಿ ಅವಹೇಳನ ಮಾಡಲಾಗಿದ್ದು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸೀರಿಸ್ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ಮೇಲೆ ದೂರು ನೀಡಿದ್ದಾರೆ. ವೆಬ್ ಸೀರೀಸ್ನಲ್ಲಿ ಬರುವ ಸನ್ನಿವೇಶದಲ್ಲಿ ಸುಧಾಮೂರ್ತಿ ಅಮ್ಮನವರ ಹೆಸರಬದಲಿಸಿ, ಏಕವಚನದಲ್ಲಿ ಕರೆದಿದ್ದು ನೋವಾಗಿದೆ. ಇಂಥವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ