ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಕಾರು, ಕಾಂಗ್ರೆಸ್ ಮುಖಂಡ ಸ್ಥಳದಲ್ಲೇ ಸಾವು!

By Gowthami K  |  First Published May 16, 2023, 8:08 PM IST

ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ್ಟ್ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ   ಕಾಂಗ್ರೆಸ್ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 


ಶಿವಮೊಗ್ಗ (ಮೇ.16): ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ್ಟ್ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ   ಕಾಂಗ್ರೆಸ್ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕೋಡೂರು ಸಮೀಪದ ತುರುಗೋಡು ನಾಗರಾಜ್ ಗೌಡ (55) ಮೃತ ದುರ್ದೈವಿಯಾಗಿದ್ದಾರೆ. ಶಿಕಾರಿಪುರದಿಂದ ವಾಪಾಸ್ ಆಗುವ ವೇಳೆ  ಗೌತಮಪುರ ಸಮೀಪದ ಅಂಬಲಿಗೊಳ ಬಳಿ ನಡೆದ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಚಾಲಕ ನಾಗರಾಜ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ನಾಗರಾಜ್  ಹೊಸನಗರ ತಾಲೂಕಿನ ಮುಂಬಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು.  ಹಾಗೂ ಮುಂಬಾರು ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲು ಮಾಡಲಾಗಿದೆ.

ಸರಣಿ ಅಪಘಾತ: ಇಬ್ಬರಿಗೆ ಗಾಯ
ಮಂಗಳೂರು: ನಗರದ ಹಂಪನಕಟ್ಟೆಸಿಗ್ನಲ್‌ ಬಳಿ ಮೂರು ಸಿಟಿ ಬಸ್‌ಗಳ ನಡುವೆ ಸೋಮವಾರ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

Tap to resize

Latest Videos

Bengaluru: ಮ್ಯಾಟ್ರಿಮೋನಿ ಸೈಟ್‌ ನಲ್ಲಿ ಪರಿಚಯವಾಗಿ ಯುವತಿಗೆ 43.51 ಲಕ್ಷ ವಂಚಿಸಿದ

ನಗರದ ಸ್ಟೇಟ್‌ಬ್ಯಾಂಕ್‌ ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಬಸ್ಸಿನ ಹಿಂಭಾಗಕ್ಕೆ ಕುಂಜತ್ತಬೈಲ್‌ ಕಡೆಗೆ ತೆರಳುತ್ತಿದ್ದ ಬಸ್‌ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತಲಪಾಡಿಗೆ ಹೋಗುತ್ತಿದ್ದ ಬಸ್‌, ಅದರ ಮುಂಭಾಗದಲ್ಲಿದ್ದ ನೀರುಮಾರ್ಗ ಕಡೆಗೆ ತೆರಳುತ್ತಿದ್ದ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಮೂರೂ ಬಸ್‌ಗಳು ಜಖಂಗೊಂಡಿವೆ. ಪ್ರಯಾಣಿಕರು ಸಣ್ಣಪುಟ್ಟಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಪೈಕಿ ಇಬ್ಬರಿಗೆ ತುಸು ಗಂಭೀರ ಗಾಯಗಳಾಗಿವೆ. ಘಟನೆಯಿಂದಾಗಿ ಹಂಪನಕಟ್ಟೆಯಲ್ಲಿ ಕೆಲಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಬಳಿಕ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಸ್‌ಗಳನ್ನು ತೆರವುಗೊಳಿಸಿ, ವಾಹನ ಸಂಚಾರ ಸುಗಮಗೊಳಿಸಿದ್ದಾರೆ.

ಕ್ರಿಶ್ಚಿಯನ್ ಮಿಶನರಿಯಲ್ಲಿ ಸನ್ಯಾಸಿನಿಯಾಗಲು ಅಪಹರಣ ನಾಟಕವಾಡಿದ ಶಿವಮೊಗ್ಗದ

ಎರಡು ಬೈಕ್‌ಗಳಿಗೆ ಕಾರು ಡಿಕ್ಕಿ, 3 ಸಾವು
ಗದಗ: ಗದಗ ತಾಲೂ​ಕಿನ ಅಡವಿ ಸೋಮಾ​ಪುರ ಬಳಿ ಸೋಮ​ವಾರ ಎರಡು ಬೈಕ್‌ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮುಂಡರಗಿಯ ಶಿವಪ್ಪ ನಾಯಕ (50), ಶಿವಾನಂದ ಲಮಾಣಿ (33) ಹಾಗೂ ಕೃಷ್ಣಪ್ಪ ಚವ್ಹಾಣ ಮೃತರು. ಗದಗ ಕಡೆ ತೆರಳುತ್ತಿದ್ದ ಎರಡು ಬೈಕ್‌ಗಳಿಗೆ ಎದುರುಗಡೆಯಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆಯಿತು. ಎರಡು ಬೈಕ್‌​ನ​ಲ್ಲಿದ್ದ ಸವಾ​ರರ ಪೈಕಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರು. ಮತ್ತೊಬ್ಬ ಗದಗದ ಜಿಲ್ಲಾ​ಸ್ಪ​ತ್ರೆ​ಯಲ್ಲಿ ಮೃತ​ಪ​ಟ್ಟಿ​ದ್ದಾ​ನೆ. ಮೃತರೆಲ್ಲರೂ ಬೈಕ್‌ನಲ್ಲಿದ್ದವರು. ಅಪಘಾತ ಸಂಭವಿಸಿದ ತಕ್ಷಣ ಕಾರು ಚಾಲಕ ಸೇರಿದಂತೆ ಕಾರಿ​ನ​ಲ್ಲಿದ್ದವರು ಪರಾರಿಯಾಗಿ​ದ್ದಾ​ರೆ.

click me!