
ಧಾರವಾಡ(ಏ. 12) ರಸ್ತೆ ಪಕ್ಕ ನಿಂತವರ ಮೇಲೆ ಕಾರು ಹರಿದು ಆರು ಜನರಿಗೆ ಗಾಯವಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ. ರಸ್ತೆ ಪಕ್ಕ ನಿಲ್ಲಿಸಿದ್ದ ಬೈಕ್‌ಗಳು ಜಖಂ ಆಗಿವೆ. ಕಾಂಗ್ರೆಸ್ ಮುಖಂಡ ವಿಜಯ ಕುಲಕರ್ಣಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಗುರಿಯಾಗಿದೆ.
ವಿಜಯ, ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ. ಧಾರವಾಡದ ಕೆವಿಜಿ ಬ್ಯಾಂಕ್ ಎದುರು ನಡೆದ ಘಟನೆ ನಡೆದಿದೆ. ಬೆಳಗಾವಿ ರಸ್ತೆಯಲ್ಲಿ ನಡೆದ ಘಟನೆ ನಡೆದಿದ್ದು ಅಪಘಾತಪಡಿಸಿದ ಕಾರಿಗೆ ಸ್ಥಳೀಯರು ಘೇರಾವ್ ಹಾಕಿದ್ದಾರೆ.
ವಿನಯ್ ಕುಲಕರ್ಣಿಗೆ ಇನ್ನೂ ಬೇಲ್ ಸಿಕ್ಕಿಲ್ಲ
ಅಪಘಾತದಲ್ಲಿ ಶೇಖರ ಹುದ್ದಾರ್ (37), ಚರಣ್ ನಾಯಕ್ (17) ಸಾವಿಗೀಡಾಗಿದ್ದಾರೆ. ವಿಜಯ ಕುಲಕರ್ಣಿ ಅವರೇ ಕಾರು ಚಾಲನೆ ಮಾಡುತ್ತಿದ್ದರ ಎನ್ನಲಾಗಿದ್ದು ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ವಿಜಯ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ