ಜೀವ ಬೆದರಿಕೆ: ರಕ್ಷಣೆ ಕೋರಿ ಪೊಲೀಸ್ ಮೊರೆ ಹೋದ ಉಗ್ರಪ್ಪ

By Suvarna NewsFirst Published May 29, 2020, 7:11 PM IST
Highlights

ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ವಿ ಎಸ್ ಉಗ್ರಪ್ಪ ಅವರಿಗೆ ಬೆದರಿಕೆ ಕರೆಗಳು ಬಂದಿದ್ದು, ರಕ್ಷಣೆ ಕೋರಿ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು, (ಮೇ, 29): ಕಾಂಗ್ರೆಸ್ ನಾಯಕ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ವಿ ಎಸ್ ಉಗ್ರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ.

ಈ ಕುರಿತು ಶುಕ್ರವಾರ ಬೆಂಗಳೂರು ಪೊಲೀಸ್ ಕಮೀಷನರ್ ಅವರಿಗೆ ಲಿಖಿತ ದೂರು ನೀಡಿರುವ ಉಗ್ರಪ್ಪ, ರಕ್ಷಣೆ ನೀಡುವಂತೆ ಕೇಳಿಕೊಂಡಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಅಸಮಾಧಾನದ ಕಿಡಿ, ರಾಮಮಂದಿರಕ್ಕೆ ಪಾಕ್ ಸಿಡಿಮಿಡಿ; ಮೇ.29ರ ಟಾಪ್ 10 ಸುದ್ದಿ!

ಮೇ 29 ರಂದು ಎಚ್‌ ಎಸ್‌ ಆರ್‌ ಲೇಔಟ್‌ನಲ್ಲಿರುವ ನನ್ನ ಮನೆಗೆ ಬೆದರಿಕೆ ಪತ್ರ ಬಂದಿದೆ. ನೀವು ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ್ದೀರಾ, ಇನ್ಮುಂದೆ ಹಿಂದೂಗಳ ಬಗ್ಗೆ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೇ ಯಾವುದೇ ಹಂತಕ್ಕೂ ನಾವು ಹೋಗಲು ಸಿದ್ದರಿದ್ದೇವೆ ಎಂದು ಪತ್ರದಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಉಗ್ರಪ್ಪ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಓಲೈಸಲು ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡುತ್ತೀಯಾ, ನೀನು ಹಿಂದೂ ಅಲ್ಲ, ಕ್ರಿಶ್ಚಿಯನ್‌ರಿಗೆ ನೀನು ಹುಟ್ಟಿದ್ದೀಯಾ, ನಿನ್ನ ಕುಟುಂಬದವರೂ ಹಿಂದೂಗಳು ಅಲ್ಲ ಎಂದು ಪತ್ರದಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಉಗ್ರಪ್ಪ ಹೇಳಿದ್ದಾರೆ.

ಪತ್ರದ ಮುಖಾಂತರ ಪ್ರಾಣ ಬೆದರಿಕೆ ಹಾಕಿರುವ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೇ ಕೂಡಲೇ ನನಗೆ ರಕ್ಷಣೆ ನೀಡಬೇಕು ಎಂದು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.

click me!