ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌: ಯುವತಿಯಿಂದ ದೂರು, ಎಫ್‌ಐಆರ್‌ ದಾಖಲು

By Govindaraj S  |  First Published May 2, 2024, 10:40 AM IST

ಶಾಸಕ ಇಕ್ಬಾಲ್‌ ಹುಸೇನ್‌ ಮತ್ತು ಯುವತಿಯ ವಾಟ್ಸಪ್‌ ವಿಡಿಯೋ ಕಾಲ್ ವೈರಲ್‌ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಸೆನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನನ್ನ ಹಾಗೂ ಶಾಸಕರ ವೀಡಿಯೋವನ್ನ ಅಶ್ಲೀಲವಾಗಿ ಸೃಷ್ಟಿಸಿ ಹರಿಬಿಟ್ಟಿದ್ದಾರೆ.
 


ರಾಮನಗರ (ಮೇ.02): ಶಾಸಕ ಇಕ್ಬಾಲ್‌ ಹುಸೇನ್‌ ಮತ್ತು ಯುವತಿಯ ವಾಟ್ಸಪ್‌ ವಿಡಿಯೋ ಕಾಲ್ ವೈರಲ್‌ ಆದ ಬೆನ್ನಲ್ಲೇ ರಾಮನಗರ ಮೂಲದ ಯುವತಿ ಸೆನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ನನ್ನ ಹಾಗೂ ಶಾಸಕರ ವೀಡಿಯೋವನ್ನ ಅಶ್ಲೀಲವಾಗಿ ಸೃಷ್ಟಿಸಿ ಹರಿಬಿಟ್ಟಿದ್ದಾರೆ. ಫೇಸ್‌ಬುಕ್‌ನಲ್ಲಿ  ವೀಡಿಯೋ ಹರಿಬಿಟ್ಟು ನನ್ನ ತೇಜೋವಧೆ ಮಾಡುತ್ತಿದ್ದಾರೆ‌. ಇದರಿಂದ ನನ್ನ ಮಾನಹಾನಿಯಾಗಿದ್ದು ವೀಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.  ದೂರು ಸ್ವೀಕರಿಸಿ ಅನಾಮಧೇಯ ವ್ಯಕ್ತಿಯ ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸುದ್ದಿಗೆ ಗ್ರಾಸವಾದ ವಾಟ್ಸಪ್ ಕಾಲ್: ರಾಮನಗರ ಕಾಂಗ್ರೆಸ್ ಶಾಸಕ ಎಚ್‌.ಎ.ಇಕ್ಬಾಲ್ ಹುಸೇನ್ ಅವರು ಮಹಿಳೆಯೊಬ್ಬರ ಜತೆಗಿನ ವಾಟ್ಸ್‌ಆ್ಯಪ್‌ ಕಾಲ್‌ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಯೂ ಆಗಿರುವ ಮಹಿಳೆ ಜತೆ ಹುಸೇನ್ ಅವರು, ಆಪ್ತವಾಗಿ ಮಾತನಾಡುತ್ತಿರುವ 2 ನಿಮಿಷ 27 ಸೆಕೆಂಡ್‌ನ ವಿಡಿಯೊ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದ ಪ್ರಕರಣ ದೊಡ್ಡ ಸುದ್ದಿಯಾಗಿರುವ ಬೆನ್ನಲ್ಲೇ ಶಾಸಕ ಹುಸೇನ್ ವಿಡಿಯೊ ಬಹಿರಂಗವಾಗಿದ್ದು, ಇದರೊಂದಿಗೆ ಜಿಲ್ಲೆಯ ವಿವಿಧ ರಾಜಕಾರಣಿಗಳ ಜತೆ ಮಹಿಳೆ ಕಾಣಿಸಿಕೊಂಡಿರುವ ಫೋಟೊಗಳು ಕೂಡ ಮೊಬೈಲ್‌ಗಳಲ್ಲಿ ಹರಿದಾಡುತ್ತಿವೆ.

Tap to resize

Latest Videos

ಪ್ರಜ್ವಲ್‌ ವಿದೇಶಕ್ಕೆ ಹೋಗುವವರೆಗೂ ಕತ್ತೆ ಕಾಯುತ್ತಿದ್ದರಾ?: ಪ್ರಲ್ಹಾದ್‌ ಜೋಶಿ

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಶಾಸಕ ಇಕ್ಬಾಲ್ ಹುಸೇನ್, ‘ನಾನೇ ಮಾತನಾಡಿರುವ ವಿಡಿಯೊ ಇರಬಹುದು. ನಾನು ಗೆದ್ದಿರುವುದಕ್ಕೆ ಎದುರಾಳಿಗಳು ಈ ರೀತಿಯ ವಿಡಿಯೊ ಹರಿಬಿಟ್ಟಿದ್ದಾರೆ. ಇಂತಹವೆಲ್ಲಾ ಬರುತ್ತಿರುತ್ತವೆ. ಅದರಲ್ಲಿರುವ ಸತ್ಯಾಂಶವೇನು ಎಂದು ನೋಡುವೆ. ಪೊಲೀಸ್ ದೂರು ಸೇರಿದಂತೆ ಕಾನೂನು ಕ್ರಮ ಕುರಿತು ಇನ್ನೂ ನಿರ್ಧರಿಸಿಲ್ಲ’ ಎಂದರು. ಇನ್ನು ಇಕ್ಬಾಲ್ ಹುಸೇನ್ ಕುರಿತ ವಿಡಿಯೋ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆಎನ್ ರಾಜಣ್ಣ, 'ಇಕ್ಬಾಲ್ ಹುಸೇನ್ ಸಂಭಾವಿತ ವ್ಯಕ್ತಿ. ಅಂತಹವರ ಬಗ್ಗೆ ಈ ರೀತಿ ಆರೋಪಗಳು ಸರಿಯಲ್ಲ.. ಹಾಗೇನಾದರೂ ಇದ್ದರೆ ಈ ಬಗ್ಗೆ ಪರಿಶೀಲಿಸಲಾಗುತ್ತದೆ' ಎಂದು ಹೇಳಿದರು.

click me!