ಕರ್ನಾಟಕ ಶಾಸಕನ ಹತ್ಯೆಗೆ ಸಂಚು: ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ ಬಹಿರಂಗ

By Suvarna News  |  First Published Mar 6, 2020, 3:48 PM IST

ಮೈಸೂರಿನಲ್ಲಿ ಮಾಜಿ ಸಚಿವ, ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನ ಬೆನ್ನಲ್ಲೇ ಇದೀಗ ಮತ್ತೋರ್ವ ಶಾಸಕನ ಕೊಲೆಗೆ ಸಂಚು ರೂಪಿಸಲಾಗಿದೆ ಎಂದು  ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿಯನ್ನ ಬಹಿರಂಗಪಡಿಸಿದೆ.


ಬೆಂಗಳೂರು, (ಮಾ.06): ಮಂಗಳೂರಿನ ಉಳ್ಳಾಲ ಕ್ಷೇತ್ರದ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಕೊಲೆಗೆ ಸಂಚು ನಡೆದಿದೆ ಎನ್ನುವ ಆತಂಕಕಾರಿ ಮಾಹಿತಿಯನ್ನ ರಾಜ್ಯ ಗುಪ್ತಚರ ಇಲಾಖೆ ಸರ್ಕಾರಕ್ಕೆ ಮಾಹಿತಿ ನೀಡಿದೆ. 

ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಯು.ಟಿ. ಖಾದರ್ ಅವರ ಜೀವಕ್ಕೆ ಅಪಾಯವಿರುವ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

Tap to resize

Latest Videos

undefined

ಬರ್ತ್ ಡೇ ದಿನವೇ ಬಿಜೆಪಿ ಮುಖಂಡನ ಬರ್ಬರ ಹತ್ಯೆ

ಗುಪ್ತಚರ ಇಲಾಖೆ ಈ ವಿಚಾರ ತಿಳಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸೂಚಿಸಿದ್ದು,ಓರ್ವ ಪೋಲಿಸ್ ಸಿಬ್ಬಂದಿಯನ್ನು ಭದ್ರತೆ ನೀಡಲು ಸರ್ಕಾರ ಮುಂದಾಗಿದೆ. ಇಂತಹ ಕಾಟಾಚಾರದ ಭದ್ರತೆ ನನಗೆ ಬೇಡ ಎಂದು ನಾನು ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ್ದೇನೆ ಎಂದು ಬೊಮ್ಮಾಯಿ ತಿಳಿಸಿದರು.

ಯುಟಿ ಖಾದರ್ ಹೇಳಿದ್ದೇನು..?
ವಿಧಾನಸೌಧದಲ್ಲಿ ಶುಕ್ರವಾರ ಪ್ರತಿಕ್ರಿಯಿಸಿರುವ ಯು.ಟಿ.ಖಾದರ್, ಮೂರ್ನಾಲ್ಕು ತಿಂಗಳ ಹಿಂದೆ ಗೃಹ ಸಚಿವರು ತಮಗೆ ಮೊಬೈಲ್ ಕರೆ ಮಾಡಿ, ಗುಪ್ತಚರ ಇಲಾಖೆಯ ಮಾಹಿತಿಯ ಪ್ರಕಾರ ನಿಮ್ಮ ಜೀವಕ್ಕೆ ಅಪಾಯವಿದೆ ಎಂಬ ಮಾಹಿತಿ ನೀಡಿದ್ದರು. ಅದಕ್ಕಾಗಿ ತಾವು ಗೃಹ ಸಚಿವರಿಗೆ ಧನ್ಯವಾದ ತಿಳಿಸಿದ್ದೇನೆ. 

ಶಾಸಕ ತನ್ವೀರ್ ಸೇಠ್ ಆಪ್ತನ ಕೊಲೆ ಯತ್ನ, ಮಾರಣಾಂತಿಕ ಹಲ್ಲೆ

ನಾನು ಜನಪ್ರತಿನಿಧಿ. ಆದರೆ ಜನಸಾಮಾನ್ಯರಿಗೆ ಈ ರೀತಿ ಆದರೆ ಯಾರು ಜವಾಬ್ದಾರಿ. ಭದ್ರತೆ ಕೇವಲ ಹೆಸರಿಗೆ ಮಾತ್ರ ಆಗಬಾರದು. ಕೂಲಿಕಾರ್ಮಿಕನ ಜೀವಕ್ಕೂ ಬೆಲೆ ಇದೆ. ನಿರ್ಬಯವಾಗಿ ಎಲ್ಲರೂ uಜೀವಿಸುಂತಾಗಬೇಕು ಎಂದರು. 

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಕೇವಲ ಒಬ್ಬನನ್ನು ಬಂಧಿಸಲಾಗಿದೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ. ಯಾರು ಹಣ ನೀಡಿದ್ದರು ಎಂಬುದನ್ನು ಮೊದಲು ಪೊಲೀಸ್ ಇಲಾಖೆ ಪತ್ತೆ ಹಚ್ಚಬೇಕು. ಜನಸಾಮಾನ್ಯರಿಗೂ ಪೊಲೀಸ್ ಇಲಾಖೆ ಭದ್ರತೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಮಾರ್ಚ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!