ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಬಂಗಾರಿ ಸಂಕಷ್ಟ?

By Kannadaprabha News  |  First Published Jan 7, 2025, 4:34 AM IST

ಐಶ್ವರ್ಯ ಗೌಡ ಅವರ ಪತಿ ಹರೀಶ್ ಅವರ ಹೆಸರಿನಲ್ಲಿ ನೋಂದಣಿಯಾಗಿರುವ ಐಷಾರಾಮಿ ಬೆನ್ಜ್‌ ಕಾರನ್ನು ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ ಬಳಕೆ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೀಗಾಗಿ ಐಶ್ವರ್ಯ ಗೌಡ ದಂಪತಿಯೊಂದಿಗೆ ಸಂಬಂಧ, ವ್ಯವಹಾರ ಕುರಿತು ಪೊಲೀಸರು ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ . 


ಬೆಂಗಳೂರು(ಜ.07):  ಚಂದ್ರಾಲೇಔಟ್‌ ಠಾಣೆಯಲ್ಲಿದಾಖಲಾಗಿರುವ ಐಶ್ವರ್ಯ ಗೌಡ ದಂಪತಿ ವಿರುದ್ಧದ ವಂಚನೆ ಪ್ರಕರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. 
ಐಶ್ವರ್ಯ ಗೌಡ ಅವರ ಪತಿ ಹರೀಶ್ ಅವರ ಹೆಸರಿನಲ್ಲಿ ನೋಂದಣಿಯಾಗಿರುವ ಐಷಾರಾಮಿ ಬೆನ್ಜ್‌ ಕಾರನ್ನು ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರ್ಣಿ ಬಳಕೆ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೀಗಾಗಿ ಐಶ್ವರ್ಯ ಗೌಡ ದಂಪತಿಯೊಂದಿಗೆ ಸಂಬಂಧ, ವ್ಯವಹಾರ ಕುರಿತು ಪೊಲೀಸರು ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. 

ಈ ವಂಚನೆ ಪ್ರಕರಣದ ಆರೋಪಿಗಳಾಗಿರುವ ಐಶ್ವರ್ಯ ಗೌಡ ದಂಪತಿ ಹಾಗೂ ದೂರುದಾರೆ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದಂಗಡಿ ಮಾಲಕಿ ವನಿತಾ ಐತಾಳ್‌ಗೆ ವಿನಯ್ ಕುಲಕರ್ಣಿ ಚಿರಪರಿತರು. ಈ ವಂಚನೆ ಪ್ರಕರಣ ದಾಖಲಾಗುವ ಮುನ್ನ ಐಶ್ವರ್ಯ ಗೌಡ ಮತ್ತು ದೂರುದಾರೆ ವನಿತಾ ಐತಾಳ್ ಅವರನ್ನು ಕಾಂಗ್ರೆಸ್ ಶಾಸಕರಾದ ವಿನಯ್ ಕುಲಕರ್ಣಿ ಅವರು ನಗರದ ಯಶವಂತಪುರದಲ್ಲಿರುವ ಖಾಸಗಿ ಹೋಟೆಲ್ ವೊಂದರಲ್ಲಿ ಭೇಟಿ ಮಾಡಿ ಸಂಧಾನ ನಡೆಸಲು ಯತ್ನಿಸಿದ್ದರು ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ಐಶ್ವರ್ಯ ಗೌಡ ಮತ್ತು ವನಿತಾ ಐತಾಳ್ ಸಹ ಮಾಧ್ಯಮಗಳೊಂದಿಗೆ ಮಾತನಾಡುವಾಗ ವಿನಯ್ ಕುಲಕರ್ಣಿ ಅವರು ತಮ್ಮಿಬ್ಬರಿಗೂ ಪರಿಚವಿರುವ ಬಗ್ಗೆ ಹೇಳಿಕೊಂಡಿದ್ದರು. 
ಯಶವಂತಪುರದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಭೇಟಿಯಾಗಿ ಇಬ್ಬರನ್ನೂ ಕೂರಿಸಿ ಬುದ್ದಿವಾದ ಹೇಳಿದ್ದಾಗಿಯೂ ಐಶ್ವರ್ಯ ಗೌಡ ಹಾಗೂ ವನಿತಾ ಐತಾಳ್ ತಿಳಿಸಿದ್ದರು. 

Tap to resize

Latest Videos

ವಂಚನೆ ಕೇಸ್‌: ಐಶ್ವರ್ಯ ಗೌಡ ಜತೆ ಕಾಂಗ್ರೆಸ್ಸಿಗರು ಭಾಗಿ, ಅನ್ನದಾನಿ

ಡಿ.ಕೆ. ಸುರೇಶ್ ತಂಗಿಯ ಹೆಸರಲ್ಲಿ ಚಿನ್ನ ವಂಚನೆ: ಐಶ್ವರ್ಯಳ ಐಷಾರಾಮಿ ಕಾರು, 29 ಕೆಜಿ ಬೆಳ್ಳಿ ವಶ

ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿ ಚಿನ್ನದ ವ್ಯಾಪಾರಿಗೆ 14 ಕೋಟಿ ರು. ವಂಚಿಸಿದ ಪ್ರಕರಣ ಸಂಬಂಧ ಆರೋಪಿ ಐಶ್ವರ್ಯ ಗೌಡಳ ಮನೆಗಳ ಮೇಲೆ ಬುಧವಾರ ಪೊಲೀಸರು ದಾಳಿ ನಡೆಸಿದ್ದು, ಆರೋಪಿ ಬಳಿ ಕೋಟ್ಯಂತರ ರು. ಮೌಲ್ಯದ ಐಷರಾಮಿ ಕಾರುಗಳು ಜ.01 ರಂದು ಪತ್ತೆಯಾಗಿದ್ದವು.

ಬ್ಯಾಟರಾಯನಪುರ ಉಪ ವಿಭಾಗದ ಎಸಿಪಿ ಭರತ್ ರೆಡ್ಡಿ ನೇತೃತ್ವದಲ್ಲಿ ಐಶ್ವರ್ಯ ಗೌಡಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲಿಸಿದ್ದು, ಬಿಎಂಡಬ್ಲ್ಯು, ಆಡಿ ಕಾರುಗಳು ಹಾಗೂ 29 ಕೆ.ಜಿ. ಬೆಳ್ಳಿ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆದರೆ, ವಂಚನೆ ಕೃತ್ಯಗಳು ಬಯಲಾದ ಬೆನ್ನಲ್ಲೇ ಎಚ್ಚೆತ್ತು ತನ್ನ ಮನೆಯಿಂದ ಬಂಗಾರದ ಒಡವೆಗಳನ್ನು ಸಾಗಿಸಿದ್ದಾಳೆ. ಹೀಗಾಗಿ 150 ಗ್ರಾಂ. ಮಾತ್ರ ಚಿನ್ನದ ಆಭರಣ ಸಿಕ್ಕಿದ್ದವು. 

ಮಾಜಿ ಸಂಸದ ಡಿ.ಕೆ. ಸುರೇಶ್‌ ಹೆಸರಲ್ಲಿ ಮತ್ತೊಂದು ವಂಚನೆ: ಐಶ್ವರ್ಯ ವಿರುದ್ಧ ಕೇಸ್‌

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹೆಸರನ್ನು ಬಳಸಿಕೊಂಡು ಚಿನ್ನದ ವ್ಯಾಪಾರಿ ವನಿತಾ ಐತಾಳ್ ಅವರಿಗೆ 14 ಕೋಟಿ ರು. ಮೌಲ್ಯದ ಚಿನ್ನ ಖರೀದಿಸಿ ವಂಚಿಸಿದ ಆರೋಪದ ಮೇರೆಗೆ ಐಶ್ವರ್ಯ ಗೌಡ ದಂಪತಿಯನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆ ಮುಂದುವರೆಸಿದ ಪೊಲೀಸರು, ಆರೋಪಿ ಮನೆ ಶೋಧನೆಗೆ ನಗರದ ಎಸಿಎಂಎಂ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದಿದ್ದರು. 

ಈ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಹಾಗೂ ತಲಘಟ್ಟಪುರದಲ್ಲಿರುವ ಐಶ್ವರ್ಯ ಗೌಡಳಿಗೆ ಸೇರಿದ ಎರಡು ಮನೆಗಳ ಮೇಲೆ ಬುಧವಾರ ದಿಢೀರ್‌ ದಾಳಿ ನಡೆಸಿ ಪೊಲೀಸರು ತಪಾಸಣೆ ನಡೆಸಿದರು. ಆ ವೇಳೆ ಐಷಾರಾಮಿ ಕಾರುಗಳು ಹಾಗೂ ಬೆಳ್ಳಿ ವಸ್ತುಗಳು ಪತ್ತೆಯಾಗಿದ್ದವು. 

click me!