ರಾಜ್ಯದ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಮಚ್ಚು ಲಾಂಗು ಆರ್ಭಟಿಸಿದ್ದು, ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈಯ್ಯಲಾಗಿದೆ.
ಬೆಂಗಳೂರು, (ಜುಲೈ.10): ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಯಲಹಂಕ ಬಳಿಯ ಪಾಲನಹಳ್ಳಿಯಲ್ಲಿ ನಡೆದಿದೆ.
ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, 35 ವರ್ಷದ ಚನ್ನಕೇಶವ ಅಲಿಯಾಸ್ ಕೇಶವ ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತ.
ಗುರುವಾರ ತಡ ರಾತ್ರಿ 10:30ರ ಸುಮಾರಿಗೆ ದುಷ್ಕರ್ಮಿಗಳ ತಂಡವೊಂದು, ಕಾರಿನಲ್ಲಿ ತೆರಳುತ್ತಿದ್ದ ಚನ್ನಕೇಶವ ಅವರನ್ನು ತಡೆದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಸಿನಿಮೀಯ ರೀತಿಯಲ್ಲಿ ನಡೀತು ಮರ್ಡರ್: ಮಳೆ ನಡುವೆಯೇ ನಡೆದೇ ಹೋಯ್ತು ಭೀಕರ ಕೊಲೆ..!
ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕೊಲೆಯಾದ ಕೇಶವ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಮುಂಬರುವ ಕಾರ್ಪೊರೇಟರ್ ಟಿಕೇಟ್ ಆಕಾಂಕ್ಷಿಯಾಗಿದ್ದರು ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.