ಗದಗ ಕಾಂಗ್ರೆಸ್ ಕಾರ್ಯಕರ್ತನ ಅಟ್ಟಾಡಿಸಿ ಕೊಂದು ಮರಕ್ಕೆ ನೇತುಹಾಕಿದ ದುಷ್ಕರ್ಮಿಗಳು!

By Kannadaprabha News  |  First Published Mar 12, 2024, 10:26 PM IST

ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಎಂದು ತಿಳಿದುಬಂದಿದೆ.


ಗದಗ (ಮಾ.12) ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನೊಂದರಲ್ಲಿ ಮರಕ್ಕೆ ನೇತು ಹಾಕಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಎಂದು ತಿಳಿದುಬಂದಿದೆ.

 

Tap to resize

Latest Videos

undefined

ಗದಗ: ಬ್ರೇಕ್ ಫೇಲ್ ಆಗಿ ಬಸ್ ನಿಲ್ದಾಣದ ಬಳಿ ಡಿವೈಡರ್‌ಗೆ ಡಿಕ್ಕಿಯಾದ ಸಾರಿಗೆ ಬಸ್!

ಕೊಲೆಗೂ ಮುನ್ನ ಶರಣಪ್ಪ ಸಂದಿಗೌಡ್ರರನ್ನು ಅಟ್ಟಾಡಿಸಿಕೊಂಡು ಹೋಗಿ ಕಣ್ಣಿಗೆ ಖಾರದ ಪುಡಿ ಎರಚಿ ಕೊಲೆ ಮಾಡಿ ನಂತರ ಮರಕ್ಕೆ ನೇತು ಹಾಕಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಡರಗಿ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ್ಲ‌ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇಂದು ಡಂಬಳದಲ್ಲಿ ಕಾಂಗ್ರೆಸ್ ಪಕ್ಷದಿಂದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರನ ಹತ್ಯೆ ಕಾರ್ಯಕರ್ತರಲ್ಲಿ ಆತಂಕ ಮನೆ ಮಾಡಿದೆ.

 

ಗಲಾಟೆ ಮಾಡಿ ಸಾಯಲು ಹೊರಟ ಮಗ ರಕ್ಷಿಸಲು ಹೋದ ತಾಯಿ ಕೂಡ ರೈಲಿಗೆ ಬಲಿ, ತಂಗಿ ಆತ್ಮಹತ್ಯೆ!

click me!