ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಫೆ.2): ಮುಂಬರೋ ವಿಧಾನಸಭಾ ಚುನಾವಣೆಯ ಟಿಕೆಟ್ ಅನೌನ್ಸ್ ಆಗುವ ಮೊದಲೇ ದ್ವೇಷದ ರಾಜಕೀಯ ಆರಂಭವಾಗಿದ್ದು, ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದಕ್ಕೆ ಮಾರಾಣಾಂತಿಕ ಹಲ್ಲೆ!
ಎನ್.ಆರ್.ಪುರ ತಾಲೂಕಿನ ನಾಗಲಾಪುರ ಸಮೀಪದ ರಾವೂರು ಗ್ರಾಮದ ಬಿಜೆಪಿ ಕಾರ್ಯಕರ್ತ ಶಿವು ಎಂಬುವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಾಣಾಂತಿಕ ಹಲ್ಲೆ ಮಾಡಿದ್ದಾರೆ. ಮನೆಗೆ ನುಗ್ಗಿದ ಕಾಂಗ್ರೆಸ್ ಕಾರ್ಯಕರ್ತರು ಮನೆಯಲ್ಲಿದ್ದ ಶಿವು ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದವರು ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಲ್ಲೆಯಿಂದ ತೀವ್ರ ಗಾಯವಾಗಿರುವ ಬಿಜೆಪಿ ಕಾರ್ಯಕರ್ತ ಶಿವು ಎನ್.ಆರ್.ಪುರ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ.
ವಿದೇಶಿಗರು 45 ಸಾವಿರ ಕೊಟ್ರೆ ಭಾರತೀಯ ನಕಲಿ ದಾಖಲೆ ಸೃಷ್ಟಿ: ಅಕ್ರಮ ನುಸುಳುಕೋರರಿಗೆ
ಹಲ್ಲೆಗೊಳಗಾದ ಶಿವು ಮೊದಲ ಕಾಂಗ್ರೆಸ್ ಕಾರ್ಯಕರ್ತನಾಗಿದ್ದ. ಕಳೆದ ತಿಂಗಳು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದನು. ಇದನ್ನ ಸಹಿಸದ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ಶಿವು ಆರೋಪಿಸಿದ್ದಾರೆ. ನಾಗಲಾಪುರ ಗ್ರಾಮದಲ್ಲಿ ಶಾಸಕ ರಾಜೇಗೌಡ ಕಾಂಗ್ರೆಸ ಕಾರ್ಯಕ್ರಮವನ್ನ ಆಯೋಜನೆ ಮಾಡಿದ್ದರು. ಈ ವೇಳೆ, ಕಾಂಗ್ರೆಸ್ನಿಂದ ಬಿಜೆಪಿ ಸೇರಿದ ಶಿವು ಜೊತೆ ಕಾಂಗ್ರೆಸ್ ಕಾರ್ಯಕರ್ತರು ಕ್ಯಾತೆ ತೆಗೆದು ಹಲ್ಲೆ ಮಾಡಿದ್ದಾರೆ. ಬಿಜೆಪಿಗೆ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರ ಹಿಂಬಾಲಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎನ್.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಪತ್ನಿ ಅನೈತಿಕ ಸಂಬಂಧ ಅನುಮಾನ: ಡಂಬಲ್ಸ್‌ನಿಂದ ಹೊಡೆದು ಕೊಲೆ