
ಬೆಳಗಾವಿ (ಜ.5): ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಬುದ್ಧಿಮಾಂದ್ಯ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ್ದು, ಆಕೆ ಗರ್ಭವತಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಂತ್ರಸ್ತೆ ಮಗುವಿಗೆ ಜನ್ಮ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ತಾಯಿ ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ದರಿಂದ, ಮನೆಯಲ್ಲಿ ತಂದೆ ಮತ್ತು ಮಗಳು ಮಾತ್ರ ಇರುತ್ತಿದ್ದರು. ಇಂತಹ ಪರಿಸ್ಥಿತಿಯ ಲಾಭ ಪಡೆದು ಆರೋಪಿ ಮಗಳ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾನೆ.
ಸಂತ್ರಸ್ತೆ ಗರ್ಭಿಣಿಯಾಗಿರುವ ಬಗ್ಗೆ ಅನುಮಾನಗೊಂಡ ಸ್ಥಳೀಯರು ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಗರ್ಭಿಣಿ ಎಂದು ಆಶಾ ಕಾರ್ಯಕರ್ತೆಯರು ಖಚಿತಪಡಿಸಿದಾಗ, ಪೊಲೀಸರಿಗೆ ದೂರು ನೀಡಲಾಗಿದೆ.
5 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ 20 ವರ್ಷ ಜೈಲು ಶಿಕ್ಷೆ
ಅನುಮಾನ ಬಂದ ಹಿನ್ನೆಲೆಯಲ್ಲಿ ಡಿಎನ್‌ಎ ಪರೀಕ್ಷೆ ನಡೆಸಲಾಗಿದ್ದು, ಆರೋಪಿಯೇ ತನ್ನ ಮೊಮ್ಮಗನ ತಂದೆ ಎಂಬುದು ದೃಢಪಟ್ಟಿದೆ.
ಎನ್‌ಜಿಒ ದೂರಿನ ಮೇರೆಗೆ ತನಿಖೆ ನಡೆಸಲಾಗಿದೆ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಎಸ್ಎಸ್ ಸಿದ್ದರಾಮಪ್ಪ ತಿಳಿಸಿದ್ದಾರೆ.
ಮಗಳ ಅತ್ಯಾಚಾರಕ್ಕೆ ಮಲತಂದೆಗೆ ಅವಕಾಶ, ತಾಯ್ತನಕ್ಕೆ ಕಳಂಕ ಎಂದು ಜಾಮೀನು ನಿರಾಕರಿಸಿದ ಕೋರ್ಟ್!
ಆಕೆಯ ತಂದೆಯೇ ಅಪರಾಧಿ ಎಂದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ