
ಕೋಲಾರ(ಆ.09): ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಕೆಜಿಎಫ್ ತಾಲೂಕಿನ ಎಸ್.ಪ್ರವೀಣ್(20) ಎಂಬುವನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ಕೃತ್ಯಕ್ಕೆ ಸಹಕರಿಸಿದ ಮಂಜುನಾಥ್ (35) ಎಂಬ ವ್ಯಕ್ತಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದರ ಸಂಬಂಧ 2021ರ ಡಿಸೆಂಬರ್ 25ರಂದು ಬೇತಮಂಗಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು ಮಂಗಳವಾರ ಅಪರಾಧಿ ಪ್ರವೀಣ್ ಎಂಬಾತನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ತಲಾ 70 ಸಾವಿರ ರೂ. ದಂಡ ವಿಧಿಸಿದ್ದಾರೆ.
ಅಪ್ತಾಪ್ತೆ ಮೇಲೆ ರೇಪ್, ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಸಮೂಹಿಕ ಅತ್ಯಾಚಾರ!
ಮಂಜುನಾಥ್ ಎಂಬಾತನಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ. ಜೊತೆಗೆ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ. ಲಲಿತಕುಮಾರಿ ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ