
ಮುಂಬೈ(ಮಾ. 03) ಮುಂಬೈನಿಂದ ಪೊಲೀಸರ ಕ್ರೌರ್ಯವೊಂದು ವರದಿಯಾಗಿದೆ. ಹಾಸ್ಟೇಲ್ ಗೆ ನುಗ್ಗಿದ ಪೊಲೀಸರು ಬಾಲಕಿಯರಿಂದ ನೃತ್ಯ ಮಾಡಿಸಿದ್ದಾರೆ.
ಮಹಾರಾಷ್ಟ್ರದ ಜಲಗಾಂವ್ ನಿಂದ ಘಟನೆ ವರದಿಯಾಗಿದೆ. ಜಲಗಾಂವ್ ವಸತಿಗೃಹಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸರಿಗೆ ಪ್ರವೇಶ ನೀಡಲು ಅವಕಾಶ ನೀಡಲಾಗಿತ್ತು. ಆದರೆ ಇದನ್ನು ಪೊಲೀಸರೇ ದುರ್ಬಳಕೆ ಮಾಡಿಕೊಂಡಿದ್ದಾರೆ. ಹಾಸ್ಟೆಲ್ ಗೆ ಬಂದ ಪೊಲೀಸರು ಹುಡುಗಿಯರ ಬಟ್ಟೆ ಬಿಚ್ಚಿಸಿ ನೃತ್ಯ ಮಾಡಿಸಿದ್ದಾರೆ. ಅಲ್ಲದೇ ವಿಡಿಯೋ ಸಹ ಮಾಡಿಕೊಂಡಿದ್ದಾರೆ. ಈ ವಿಡಿಯೋ ಕ್ಲಿಪ್ ಬಹಿರಂಗವಾಗಿದ್ದು ತನಿಖೆಗೆ ಒತ್ತಾಯ ಕೇಳಿಬಂದಿದೆ.
ವಿದೇಶಿ ಮಹಿಳೆ ಮೇಕಲೆ ಎರಗಿದ ಹೋರಾಟಗಾರ್ತಿ
ಮಹಾರಾಷ್ಟ್ರ ಸರ್ಕಾರಕ್ಕೆ ಇದು ದೊಡ್ಡ ಮುಜುಗರ ತಂದಿದೆ. ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಸಮಿತಿಯೊಂದನ್ನು ರಚನೆ ಮಾಡಿ ತನಿಖೆಗೆ ಆದೇಶ ನೀಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿಯೂ ಘಟನೆ ಪ್ರತಿಧ್ವನಿಸಿದೆ. ಹಾಗಾಗಿ ಮುಜುಗರಕ್ಕೆ ಬಿದ್ದ ಸರ್ಕಾರ ಸಮಿತಿ ರಚನೆ ಮಾಡಿ ಎರಡು ದಿನದಲ್ಲಿ ವರದಿ ಸಲ್ಲಿಸಲು ತಿಳಿಸಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ