
ಬೆಂಗಳೂರು(ಏ. 12) ನ್ಯಾಯಾಲಯಕ್ಕೆ ರಕ್ಷಿತ್ ಶೆಟ್ಟಿ ಹಾಜರ್ ಆಗಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾ ಹಾಡಿನ ವಿರುದ್ಧ ಕಾನೂನು ಸಮರಕ್ಕೆ ಲಹರಿ ಸಂಸ್ಥೆ ಮುಂದಾಗಿತ್ತು. ಶಾಂತಿ ಕ್ರಾಂತಿ ಸಿನಿಮಾದ ಹಾಡನ್ನ ಬಳಸಿಕೊಂಡಿದ್ದಾರೆ ಅಂತ ಆರೋಪ ಮಾಡಿತ್ತು.
ಕಳೆದ ಕೆಲ ವರ್ಷಗಳಿಂದ ಕೋರ್ಟ್ ನಲ್ಲಿ ಕೇಸ್ ನ ವಿಚಾರಣೆ ನಡೆಯುತ್ತಿತ್ತು. ವಿಚಾರಣೆಗೆ ಹಾಜಾರಾಗದ ಹಿನ್ನೆಲೆ ನಟ ರಕ್ಷಿತ್ ಶೆಟ್ಟಿ ಹಾಗೂ ತಂಡದವರಿಗೆ ಜಾಮೀನು ರಹಿತ ವಾರೆಂಟ್ ನೀಡಲಾಗಿತ್ತು
ಸೋಮವಾರ 9ನೇ ಎಸಿಎಮ್ಎಮ್ ಕೋರ್ಟ್ ಮುಂದೆ ಹಾಜಾರಾದ ನಟ ರಕ್ಷಿತ್ ಶೆಟ್ಟಿಗೆ ನಗದು ಶ್ಯೂರಿಟಿ ಕೊಡುವಂತೆ ನ್ಯಾಯಮೂರ್ತಿಗಳು ಸೂಚಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ನಗದು ಶ್ಯೂರಿಟಿಗೆ ಶೆಟ್ಟಿ ವ್ಯವಸ್ಥೆ ಮಾಡಿದ್ದಾರೆ.
ರಶ್ಮಿಕಾಗೆ ಶೆಟ್ಟರಿಂದ ವಿಶಿಷ್ಟ ಬರ್ತಡೆ ವಿಶ್
ಕಿರಿಕ್ ಪಾರ್ಟಿಯಲ್ಲಿ ಲಹರಿ ಸಂಸ್ಥೆಗೆ ಸೇರಿದ ಹಾಡುಗಳ ಅಕ್ರಮ ಬಳಕೆ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಯಾರದೇ ಅನುಮತಿ ಇಲ್ಲದೇ ಹಾಡುಗಳನ್ನು ಬಳಕೆ ಮಾಡಿಕೊಂಡಿದ್ದರು ಎಂಬುದು ದೊಡ್ಡ ಸುದ್ದಿಯಾಗಿತ್ತು.
"
ಈ ಬಗ್ಗೆ ಕ್ರಿಮಿನಲ್ ಮತ್ತು ಸಿವಿಲ್ ಕೇಸ್ ಹಾಕಿದ್ದ ಲಹರಿ ರೆಕಾರ್ಡಿಂಗ್ಸ್ ಕಾನೂನು ಹೋರಾಟ ಆರಂಭಿಸಿತ್ತು. ಕಾಪಿ ರೈಟ್ಸ್ ಆಕ್ಟ್ 63ಎ ಮತ್ತು 63 ಬಿ ಅಡಿಯಲ್ಲಿ ಕೇಸ್ ಹಾಕಲಾಗಿತ್ತು..
ಸೆಪ್ಟಂಬರ್ 28, 2019 ರಲ್ಲಿ ಕೇಸು ದಾಖಲಾಗಿತ್ತು. ಅರ್ಜಿಯಲ್ಲಿ ಸಿನಿಮಾ ರಿಲೀಸ್ ಮಾಡದಂತೆ ಕೋರಿಕೆ ಮಾಡಲಾಗಿತ್ತು. ಆದರೆ ಕೊನೆಗೆ ಆಡರ್ ಟೆಕಿಂಗ್ ಪಡೆದುಕೊಂಡು ಸಿನಿಮಾ ರಿಲೀಸ್ ಆಗಿತ್ತು. ಕ್ರಿಮಿನಲ್ ಕೇಸ್ ವಿಚಾರಣೆ ಎಸಿಎಂಎಂ ಕೋರ್ಟ್ ನಲ್ಲಿ ಮುಂದುವರೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ