Yadgir: ಬಟ್ಟೆ ಅಂಗಡಿಯಲ್ಲಿ ದಂಪತಿ ಸಜೀವ ದಹನ, ಮಕ್ಕಳು ಸೇರಿ ನಾಲ್ವರು ಪಾರು

Published : Mar 27, 2023, 10:47 AM IST
Yadgir: ಬಟ್ಟೆ ಅಂಗಡಿಯಲ್ಲಿ ದಂಪತಿ ಸಜೀವ ದಹನ, ಮಕ್ಕಳು ಸೇರಿ ನಾಲ್ವರು ಪಾರು

ಸಾರಾಂಶ

ಯಾದಗಿರಿ ತಾಲೂಕಿನ ಸೈದಾಪುರದಲ್ಲಿರುವ ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಅವಘಡದಿಂದಾಗಿ ಅಗ್ನಿ ದುರಂತ ಸಂಭವಿಸಿ ದಂಪತಿಗಳಿಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಯಾದಗಿರಿ (ಮಾ.27): ಯಾದಗಿರಿ ತಾಲೂಕಿನ ಸೈದಾಪುರದಲ್ಲಿರುವ ಬಟ್ಟೆ ಅಂಗಡಿಯಲ್ಲಿ ವಿದ್ಯುತ್ ಅವಘಡದಿಂದಾಗಿ ಅಗ್ನಿ ದುರಂತ ಸಂಭವಿಸಿ ದಂಪತಿಗಳಿಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ರಾಗಯ್ಯ (39) ಹಾಗೂ ರಾಗಯ್ಯ ಪತ್ನಿ ಶಿಲ್ಪ (35) ಮೃತ ದುರ್ದೈವಿಗಳು. ಮೂರು ಅಂತಸ್ತಿನ ಈ ಕಟ್ಟಡದಲ್ಲಿ, ಎರಡು ಅಂತಸ್ತುಗಳನ್ನು ಬಟ್ಟೆ ಅಂಗಡಿಗಾಗಿ ಮೀಸಲಿಡಲಾಗಿತ್ತು. ಮೂರನೇ ಮಹಡಿಯಲ್ಲಿ ದಂಪತಿಗಳು ವಾಸವಿದ್ದರು. ಸೋಮವಾರ ಬೆಳಗಿನ ಜಾವ, ಸುಮಾರು 5:00 ಗಂಟೆಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಅವಘಡದಲ್ಲಿ ರಾಗಯ್ಯ ಅವರ ತಂದೆ ತಾಯಿ, ಹಾಗೂ ಪುತ್ರರಿಬ್ಬರನ್ನು ರಕ್ಷಿಸಲಾಗಿದೆ. ಎರಡು ಅಂತಸ್ತಿನ ಬಟ್ಟೆ ಮಳಿಗೆಯಲ್ಲಿ ಬೆಂಕಿ ಹತ್ತಿದ್ದರಿಂದ ಅದನ್ನು ನಂದಿಸುವ ಹರಸಾಹಸ ನಡೆದಿದೆ. ಸಾರ್ವಜನಿಕರು ಅಗ್ನಿಶಾಮಕದಳ ಹಾಗೂ ಪೊಲೀಸ್ ಇಲಾಖೆ ಅಗ್ನಿ ನಂದಿಸುವ ಕಾರ್ಯದಲ್ಲಿ ಭಾಗಿಯಾಗಿದ್ದರು. ಈ ಭಾಗದ ಪ್ರಮುಖ ಬಟ್ಟೆ ವ್ಯಾಪಾರಿ  ಹಾಗೂ ಅವರ ಪತ್ನಿ ದುರಂತ ಅಂತ್ಯ ಸ್ಥಳೀಯರನ್ನು ಆಘಾತಕ್ಕೀಡಾಗಿಸಿದೆ.

ಆನೇಕಲ್‌ನಲ್ಲಿ 22 ವರ್ಷದ ವಿಲೇಜ್‌ ಅಕೌಂಟೆಂಟ್‌ ನೇಣಿಗೆ ಶರಣು: ಯುವತಿ ಸಾವಿನ ಸುತ್ತ ಅನುಮಾನ

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಿನ್ನಲೆ ಈ ದುರಂತ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಅಶೋಕಯ್ಯ ಕಾಳಬೆಳಗುಂದಿ ಎಂಬವರಿಗೆ ಸೇರಿದ ಮನೆ‌ಯಾಗಿದೆ. ಮನೆಯಲ್ಲಿಯೇ ಬಟ್ಟೆ ಅಂಗಡಿಯಿದೆ. ದಟ್ಟವಾದ ಹೊಗೆ ಆವರಿಸಿದ್ದರಿಂದ ಮನೆಯಿಂದ ಹೊರ ಬರಲು ಮೃತ ದಂಪತಿಗಳು ಪರದಾಟ ನಡೆಸಿದ್ದಾರೆ. ಅಗ್ನಿ ಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸಲು ಹರಸಾಹಸ ಮಾಡಿದರೂ ದಂಪತಿಗಳನ್ನು ಜೀವಂತವಾಗಿ ಉಳಿಸಿಕೊಳ್ಳಲಾಗಲಿಲ್ಲ.

ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ನವಜಾತ ಶಿಶುವನ್ನು 4.5 ಲಕ್ಷ ರೂ.ಗೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ