ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆ.
ಮಂಡ್ಯ(ಮಾ.31): ಕೌಟುಂಬಿಕ ಕಲಹಕ್ಕೆ ಮನನೊಂದು ದಂಪತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುರುಷೋತ್ತಮ (45), ವಿದ್ಯಾ(32) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ದಂಪತಿಗಳ ನಡುವಿನ ಕಲಹದಿಂದ ಬೇಸತ್ತು ಪುರುಷೋತ್ತಮ ಹಾಗೂ ವಿದ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಅಂತ ತಿಳಿದು ಬಂದಿದೆ.
ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರೆ, ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಕೊರಳೊಡ್ಡಿದ್ದಾರೆ. ಮೃತ ಪುರುಷೋತ್ತಮ್ ಮೈಸೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು.
Pratiksha: 'ರೀಲ್ಸ್ ಕ್ವೀನ್' ಎಂದೇ ಖ್ಯಾತಿ ಪಡೆದ ಬಾಲಕಿ ಪಾಲಕರ ಬೈಗುಳಕ್ಕೆ ನೊಂದು ಆತ್ಮಹತ್ಯೆ!
ಮೃತ ದಂಪತಿಗೆ 7 ಹಾಗೂ 5 ವರ್ಷದ ಇಬ್ಬರು ಮಕ್ಕಳಿದ್ದಾರೆ. ಇದೀಗ ತಂದೆ-ತಾಯಿ ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನ ನಡೆಸಿದ್ದಾರೆ. ಮೃತ ದೇಹಗಳನ್ನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.