ಕೌಟುಂಬಿಕ ಸಮಸ್ಯೆಗಳಿಂದ ಬೇಸರಗೊಂಡು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚೊಕ್ಕಸಂದ್ರ ನಿವಾಸಿಗಳಾದ ಜಗದೀಶ್ (35) ಮತ್ತು ನಂದಿನಿ (30) ಆತ್ಮಹತ್ಯೆಗೆ ಶರಣಾದ ದಂಪತಿ.
ಬೆಂಗಳೂರು (ಏ.07): ಕೌಟುಂಬಿಕ ಸಮಸ್ಯೆಗಳಿಂದ ಬೇಸರಗೊಂಡು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚೊಕ್ಕಸಂದ್ರ ನಿವಾಸಿಗಳಾದ ಜಗದೀಶ್ (35) ಮತ್ತು ನಂದಿನಿ (30) ಆತ್ಮಹತ್ಯೆಗೆ ಶರಣಾದ ದಂಪತಿ. ಗುರುವಾರ ಸಂಜೆ 4ರ ಸುಮಾರಿಗೆ ಮನೆಯ ಮಾಲಿಕ ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಎರಡೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ದಂಪತಿ ತುಮಕೂರು ಮೂಲದವರು. ಮೂರು ವರ್ಷದ ಹಿಂದೆ ಮದುವೆಯಾಗಿದ್ದರು. ಜಗದೀಶ್ ಟೆಂಪೋ ಚಾಲಕನಾಗಿದ್ದರೆ, ನಂದಿನಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಳು.
ದಂಪತಿಗೆ ಮಕ್ಕಳು ಇರಲಿಲ್ಲ. ಗುರುವಾರ ಸಂಜೆ ಇಬ್ಬರೂ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಮನೆಯ ಮಾಲಿಕ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಮರಣಪತ್ರ ಸಿಕ್ಕಿಲ್ಲ. ದಂಪತಿ ಕೌಟುಂಬಿಕ ಸಮಸ್ಯೆಗಳಿಂದ ಬೇಸರಗೊಂಡಿದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Bengaluru: ಯೂನಿಟಿ ಬಿಲ್ಡಿಂಗ್‌ನಿಂದ ಜಿಗಿದು ಮಹಿಳಾ ಮ್ಯಾನೇಜರ್ ಆತ್ಮಹತ್ಯೆ: ಖಿನ್ನತೆ ಶಂಕೆ
ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ: ಮನೆಯಲ್ಲಿ ವಿವಾಹಿತ ಮಹಿಳೆಯೊಬ್ಬರ ಶವ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತಳ ಪೋಷಕರು ಅಳಿಯನ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಸುಬ್ರಹ್ಮಣ್ಯಪುರ ಸಮೀಪದ ಪೂರ್ಣಪ್ರಜ್ಞ ಲೇಔಟ್ ನಿವಾಸಿ ರಶ್ಮಿ(30) ಮೃತರು. ಶುಕ್ರವಾರ ಬೆಳಗ್ಗೆ ರೂಮ್‌ನ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪತಿ ಅರವಿಂದ್ ಬಾಗಿಲು ಒಡೆದು ನೋಡಿದಾಗ ರಶ್ಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತಳ ಪೋಷಕರು ಅಳಿಯ ಅರವಿಂದ್ ವಿರುದ್ಧ ಕೊಲೆ ಆರೋಪದಡಿ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದರ್ಶನ್ ಧ್ರುವ ನಾರಾಯಣ್ ಕುಟುಂಬಕ್ಕೆ ಮತ್ತೊಂದು ಶಾಕ್: ದಿವಂಗತ ಆರ್.ಧ್ರುವ ನಾರಾಯಣ್ ಧರ್ಮಪತ್ನಿ ವೀಣಾ ನಿಧನ
ಮದ್ದೂರು ಮೂಲದ ರಶ್ಮಿ ಮತ್ತು ಶ್ರೀರಂಗಪಟ್ಟಣ ಮೂಲದ ಅರವಿಂದ್‌ಗೆ ಹತ್ತು ವರ್ಷದ ಹಿಂದೆ ವಿವಾಹವಾಗಿದೆ. ದಂಪತಿಗೆ ಐದು ವರ್ಷದ ಒಂದು ಗುಂಡು ಮಗುವಿದೆ. ಅರವಿಂದ್ ಸಾಫ್‌್ಟವೇರ್ ಎಂಜಿನಿಯರ್ ಆಗಿದ್ದು, ರಶ್ಮಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಳು. ದಂಪತಿ ಕೆಲ ವರ್ಷಗಳಿಂದ ಪೂರ್ಣಪ್ರಜ್ಞ ಲೇಔಟ್‌ನಲ್ಲಿ ನೆಲೆಸಿದ್ದರು. ಗುರುವಾರ ರಾತ್ರಿ 8.30ರ ಸುಮಾರಿಗೆ ಅರವಿಂದ್ ಹಾಗೂ ರಶ್ಮಿ ಜಗಳವಾಡಿದ್ದರು. ಬಳಿಕ ರಶ್ಮಿ ರೂಮ್‌ಗೆ ತೆರಳಿ ಬಾಗಿಲು ಹಾಕಿಕೊಂಡಿದ್ದಳು. ಶುಕ್ರವಾರ ಬೆಳಗ್ಗೆ ಎಷ್ಟುಹೊತ್ತಾದರೂ ರೂಮ್ ಬಾಗಿಲು ತೆರೆದಿಲ್ಲ. ಹಲವು ಬಾರಿ ಬಾಗಿಲು ಬಡಿದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆಗ ಬಾಗಿಲು ಒಡೆದು ನೋಡಿದಾಗ ರಶ್ಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.