
ಭಟ್ಕಳ, (ಸೆ.18): ತಾಲೂಕಿನ ಸರ್ಪನಕಟ್ಟೆ ಯಲ್ವಡಿಕವೂರು ಗ್ರಾಮ ಪಂಚಾಯತ ವ್ಯಾಪ್ತಿಯ ಉಯಿಲಮುಡಿ ಕಡಲ ತೀರದಲ್ಲಿ ಮಹಿಳೆ ಮತ್ತು ಪುರುಷನ ಶವ ಪತ್ತೆಯಾಗಿದೆ.
ಆದಿತ್ಯ ಬಿ.ಎಸ್. (48), ಲಕ್ಷ್ಮಿ (45) ಎಂಬ ಹೆಸರಿನ ದಂಪತಿಗಳ ಮೃತದೇಹ ಪತ್ತೆಯಾಗಿದ್ದು, ಇವರು ಬೆಂಗಳೂರಿನ ಜೆ.ಪಿ. ನಗರ ನಿವಾಸಿಗಳು ಎಂದು ಹೇಳಲಾಗಿದೆ.
ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮೃತದೇಹಗಳೊಂದಿಗೆ 5 ದಿನ ಕಳೆದ 3 ವರ್ಷದ ಮಗು
ಮಹಿಳೆಯ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರ ಹತ್ತಿರವಿದ್ದ ಆಧಾರ ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಅನ್ನು ಸಂಪೂರ್ಣ ಹರಿದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೂ ಪೊಲೀಸರು ಹರಿದ ಆಧಾರ ಕಾರ್ಡ್ ಗುರುತಿಸಿ ಇವರಿಬ್ಬರನ್ನು ಬೆಂಗಳೂರಿನವರು ಎಂದು ಅಂದಾಜಿಸಿದ್ದಾರೆ.
ಡಿವೈಎಸ್‌ಪಿ ಬೆಳ್ಳಿಯಪ್ಪ ಹಾಗೂ ಭಟ್ಕಳ ಗ್ರಾಮೀಣ ಠಾಣೆ ತನಿಖಾಧಿಕಾರಿ ರೇವತಿ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ. ಭಟ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ