ಡ್ರಗ್‌ ಮಾಫಿಯಾ: ನಟಿ ರಾಗಿಣಿ ಜಾಮೀನು ಅರ್ಜಿ ಅ. 23ಕ್ಕೆ ವಿಚಾರಣೆ

By Kannadaprabha NewsFirst Published Oct 18, 2020, 7:30 AM IST
Highlights

ಸಿಸಿಬಿಗೆ ಹೈಕೋರ್ಟ್‌ ನೋಟಿಸ್|ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ನಟಿ ರಾಗಿಣಿ| ಕಳೆದ ಒಂದು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಅರ್ಜಿದಾರರು ತನಿಖೆಗೆ ಸಹಕಾರ ನೀಡಿದ್ದಾರೆ. ಆದ್ದರಿಂದ, ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದ ರಾಗಿಣಿ ಪರ ವಕೀಲರ ವಾದ| 

ಬೆಂಗಳೂರು(ಅ.18): ಡ್ರಗ್ಸ್‌ ಪ್ರಕರಣದ ಸಂಬಂಧ ನ್ಯಾಯಾಂಗ ಬಂಧನದಲ್ಲಿ ಇರುವ ನಟಿ ರಾಗಿಣಿ ದ್ವಿವೇದಿ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸಿಸಿಬಿ ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. 

ಕಳೆದ ಸೆ.28ರಂದು ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನೆಲೆಯಲ್ಲಿ ರಾಗಿಣಿ ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರಿದ್ದ ಪೀಠ, ಸಿಸಿಬಿ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಅ.23ಕ್ಕೆ ವಿಚಾರಣೆ ಮುಂದೂಡಿದೆ.

ಐಪಾಡ್ ಕೊಡಿ: ಜೈಲಿನಲ್ಲಿರೋ ರಾಗಿಣಿಯ 3 ಡಿಮ್ಯಾಂಡ್

ರಾಗಿಣಿ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಅವರ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷ್ಯಧಾರ ಹಾಗೂ ದಾಖಲೆ ಇಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಯಾವುದೇ ಪುರಾವೆಗಳಿಲ್ಲ. ಇತರೆ ಆರೋಪಿಗಳ ಹೇಳಿಕೆ ಪರಿಗಣಿಸಿ ಬಂಧಿಸಲಾಗಿದೆ. ಕಳೆದ ಒಂದು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಅರ್ಜಿದಾರರು ತನಿಖೆಗೆ ಸಹಕಾರ ನೀಡಿದ್ದಾರೆ. ಆದ್ದರಿಂದ, ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.
 

click me!