ಗಜೇಂದ್ರಗಡ: ಹೆತ್ತ ಮಗುವನ್ನೇ ಕೊಂದ ಪಾಪಿ ತಂದೆಗೆ ಮರಣದಂಡನೆ ಶಿಕ್ಷೆ

Suvarna News   | Asianet News
Published : Feb 19, 2021, 02:16 PM ISTUpdated : Feb 19, 2021, 02:54 PM IST
ಗಜೇಂದ್ರಗಡ: ಹೆತ್ತ ಮಗುವನ್ನೇ ಕೊಂದ ಪಾಪಿ ತಂದೆಗೆ ಮರಣದಂಡನೆ ಶಿಕ್ಷೆ

ಸಾರಾಂಶ

ತನ್ನ ಮಗುವನ್ನೇ ಕಿಡ್ನಾಪ್‌ ಮಾಡಿ ಕೊಂದಿದ್ದ ಪಾಪಿ ತಂದೆ| ಪ್ರೀತಿಸಿ ಮದುವೆಯಾಗಿ ಮಹಿಳೆಗೆ ಧೋಖಾ ಮಾಡಿದ್ದ ಗಂಡ| ಜೀವನಾಂಶ ಬೇಡಿ‌ ಕೋರ್ಟ್ ಮೆಟ್ಟೆಲೇರಿದ್ದ ಪತ್ನಿ| ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದ್ದ ಘಟನೆ| 

ಗದಗ(ಫೆ.19): ಹೆತ್ತ ಮಗುವನ್ನೇ ಕೊಂದ ಪಾಪಿ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ನೀಡಿ ತೀರ್ಪು ನೀಡಿದೆ. ಅಪರಾಧಿ ಪ್ರಶಾಂತಗೌಡ ಪಾಟೀಲ್‌ನಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ರಾಜಶೇಖರ ವಿ ಪಾಟೀಲ್ ಅವರು ಮರಣ ದಂಡನೆ ಶಿಕ್ಷೆ ನೀಡಿದ್ದಾರೆ. 

ಪ್ರಕರಣದ ಹಿನ್ನೆಲೆ: 

ಗದಗ ಜಿಲ್ಲೆಯ ರೋಣ ತಾಲೂಕಿನ ಹುಲ್ಲೂರ ಗ್ರಾಮದ ಪ್ರಶಾಂತಗೌಡ ಪಾಟೀಲ್‌ ಮಹಿಳೆಯೊಬ್ಬಳ ಜೊತೆ ಪ್ರೀತಿಯ ನಾಟಕವಾಡಿ ಮದುವೆಯಾಗಿ ವಂಚನೆ ಮಾಡಿದ್ದ, ಇಬ್ಬರ ಜೋಡಿಗೆ ಮಗು ಕೂಡ ಹುಟ್ಟಿತ್ತು. ಹೀಗಾಗಿ ನೊಂದ ಮಹಿಳೆ ತನಗೆ ಜೀವನಾಂಶ ಬೇಡಿ‌ ಕೋರ್ಟ್ ಮೆಟ್ಟೆಲೇರಿದ್ದರು.

ಕೊರೋನಾ ರೋಗ ಮುಚ್ಟಿಟ್ಟರೆ ಮರಣದಂಡನೆ!

ಇದರಿಂದ ಕುಪಿತಗೊಂಡಿದ್ದ ಅಪರಾಧಿ ಪ್ರಶಾಂತಗೌಡ ಪಾಟೀಲ್‌ ಏ. 6, 2015ರಂದು ತನ್ನ ಒಂದೂವರೆ ವರ್ಷದ ಮಗುವನ್ನೇ ಅಪಹರಿಸಿ ಕತ್ತು ಹಿಸುಕಿ, ಸುಟ್ಟು ಹಾಕಿ ವಿಕೃತಿ ಮೆರೆದಿದ್ದನು. ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ಗುಡ್ಡದಲ್ಲಿ ಮಗುವನ್ನು ಕೊಲೆ ಮಾಡಿದ್ದನು. ಈ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮಗುವನ್ನ ಕೊಂದ ತಂದೆಗೆ ನ್ಯಾಯಾಲಯ ಮರಣದಂಡನೆ ಶಿಕ್ಷೆ ನೀಡಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?