
ಬೆಂಗಳೂರು (ಆ.4) : ಹಾಡಹಗಲೇ ನಡು ರಸ್ತೆಯಲ್ಲಿ ಇಬ್ಬರು ದುಷ್ಕರ್ಮಿಗಳು ದ್ವಿಚಕ್ರ ವಾಹನ ಸವಾರನ ಅಡ್ಡಗಟ್ಟಿಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡಿರುವ ಘಟನೆ ಜೆ.ಸಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಲಿಗೆ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬುಧವಾರ ಮಧ್ಯಾಹ್ನ 2.36ರ ಸುಮಾರಿಗೆ ವಿಲಿಯಮ್ಸ್ ಟೌನ್‌ನಲ್ಲಿ ಈ ಘಟನೆ ನಡೆದಿದೆ. ಸುಲಿಗೆಗೆ ಒಳಗಾದ ಭೂಪಸಂದ್ರ ನಿವಾಸಿ ನವೀದ್ ಎಂಬುವವರು ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿರುವ ಜೆ.ಸಿ.ನಗರ ಠಾಣೆ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
Bengaluru: ಯೂಟ್ಯೂಬ್ ಚಾನಲ್ ಆರಂಭಿಸಿ ದಂಧೆ, ಮಾಂಸದಂಗಡಿಗಳಲ್ಲಿ ಹಫ್ತಾ ವಸೂಲಿ: 4 ಪತ್ರಕರ್ತರ ಸೆರೆ
ಬಿಹಾರ ಮೂಲದ ನವೀದ್ ನಗರದ ಭೂಪಸಂದ್ರದಲ್ಲಿ ನೆಲೆಸಿದ್ದು, ಬಟ್ಟೆವ್ಯಾಪಾರ ಮಾಡುತ್ತಾರೆ. ಬುಧವಾರ ಮಧ್ಯಾಹ್ನ ದ್ವಿಚಕ್ರ ವಾಹನದಲ್ಲಿ ಬಟ್ಟೆಬಂಡಲ್ ಇರಿಸಿಕೊಂಡು ವಿಲಿಮಯ್‌್ಸ ಟೌನ್‌ನಲ್ಲಿ ಹೋಗುವಾಗ, ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದಿರುವ ಇಬ್ಬರು ದುಷ್ಕರ್ಮಿಗಳು, ಏಕಾಏಕಿ ನವೀದ್ ಅವರನ್ನು ಅಡ್ಡಗಟ್ಟಿಮಾರಕಾಸ್ತ್ರ ತೋರಿಸಿ, ಮೊಬೈಲ್ ಹಾಗೂ ಪರ್ಸ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ಸುಲಿಗೆ ಘಟನೆ ಕಟ್ಟಡವೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಜೆ.ಸಿ.ನಗರ ಠಾಣೆ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಶೋಧಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹನಿಟ್ರ್ಯಾಪ್ ಮಾಡಿ 30 ಜನರಿಗೆ 30 ಲಕ್ಷ ಟೋಪಿ: ಮೂವರ ಬಂಧನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ