ಮಂಗಳೂರಿನ ಮಾದಕವ್ಯಸನಿ ಯುವಕನನ್ನು ಕೊಲೆ ಮಾಡಿ ಚಿಕ್ಕಮಗಳೂರು ಪ್ರವಾಸಿ ತಾಣ ದೇವರಮನೆ ಕಾಡಿನಲ್ಲಿ ಎಸೆದು ಹೋದ ದುಷ್ಕರ್ಮಿಗಳು.
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿಕ್ಕಮಗಳೂರು (ಜೂ.21): ಯುವಕನೋರ್ವನನ್ನು ಕೊಲೆ ಮಾಡಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿದೆ.
undefined
ಪ್ರಸಿದ್ದ ಪ್ರವಾಸಿ ತಾಣವಾದ ದೇವರಮನೆಯಲ್ಲಿ ಜೂನ್ 8 ರಂದು ಕೊಳೆತ ಸ್ಥಿತಿಯಲ್ಲಿ ಅಪರಚಿತ ಶವವೊಂದು ಪತ್ತೆ ಆಗಿತ್ತು. ಅಂದು ಬಣಕಲ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ತೀವ್ರ ತನಿಖೆ ನಡೆಸಿ ನಿನ್ನೆ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಇಂದು ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳ ತಲೆಮರೆಸಿಕೊಂಡಿದ್ದು, ಅವರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಶಾಲಾ ಬಾಲಕಿಯ ಮೈ ಮುಟ್ಟಿದ ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು
ಗಾಂಜಾ ವ್ಯವಹಾರದಲ್ಲಿ ಕೊಲೆ : ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ. ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ, ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದುಬಂದಿದೆ. ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು. ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಕೊನೆಗೆ ಆತ ತನ್ನ ಮಾದಕವಸ್ತು ಮಾರಾಟದ ಗ್ಯಾಂಗ್ ನಿಂದಲೇ ಕೊಲೆಗೀಡಾಗಿದ್ದಾನೆ. ಪ್ರಕರಣವನ್ನು ಶೀಘ್ರವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹಾವೇರಿಯಲ್ಲಿ ಆರ್‌ಎಂಡಿ ಗುಟ್ಕಾ ಕದ್ದ ಖದೀಮರು, ತಮಿಳುನಾಡಲ್ಲಿ ತಿಂದು ಸಿಕ್ಕಿಬಿದ್ರು
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು ಶಿಕ್ಷೆ: ಗದಗ (ಜೂ.21): ಶಾಲಾ ಲೈಂಗಿಕ ಕಿರುಕುಳ ನೀಡಿದ್ದ ಕೇಸ್ ಗೆ ಸಂಬಂಧಿಸಿದಂತೆ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಶಂಕ್ರಪ್ಪ ಹಳ್ಳಿಗುಡಿ ಅವರಿಗೆ 5 ವರ್ಷ ಜೈಲು ಶಿಕ್ಷೆ ನೀಡಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಆದೇಶ ಹೊರಡಿಸಿದ್ದಾರೆ.
ಕಳೆದ ಮೂರು ವರ್ಷಗಳ ಹಿಂದೆ ಅಂದರೆ 2020 ರಿಂದ ನಡೆದಿದ್ದ ಜಿಲ್ಲೆಯ ಹೈ ಪ್ರೊಫೈಲ್ ಕೇಸ್ ನ ಆರೋಪಿಗೆ ಶಿಕ್ಷೆ ಪ್ರಕಟವಾಗಿದೆ. ಆರೋಪಿ ಶಂಕ್ರಪ್ಪ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಎಒ) ಆಗಿದ್ದ ವೇಳೆ ವಿದ್ಯಾರ್ಥಿನಿಯ ಮನೆಗೆ ತೆರಳಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಇತ್ತು. ಪ್ರಕರಣ ಕುರಿತಂತೆ ಸಂತ್ರಸ್ತೆ ಬಾಲಕಿ 21 ಫೆಬ್ರವರಿ 2020 ರಲ್ಲಿ ಕೇಸ್ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಮುಂಡರಗಿ ಪೊಲೀಸರು ತನಿಖೆ ನಡೆಸಿದ್ದರು. ನಂತರ ತನಿಖೆ ನಡೆಸಿದ್ದ ಪೊಲೀಸರು 2020ರ ಮಾ.27ರಂದು ನ್ಯಾಯಾಲಯಕ್ಕೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಲಯ ಶಂಕ್ರಪ್ಪಗೆ ಐದು ವರ್ಷ ಜೈಲು ಶಿಕ್ಷೆ, 25 ಸಾವಿರ ರೂಪಾಯಿ ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.