ಯಲ್ಲಮ್ಮ ದೇವಿ ದರ್ಶನಕ್ಕೆ ಹೋಗಿ ವಾಪಸ್ ಊರಿಗೆ ಹೋಗುತ್ತಿದ್ದ ಕ್ರೂಸರ್ ಹಾಗೂ ಕಟ್ಟಿಗೆಯನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ.
ವಿಜಯಪುರ (ಮೇ 18): ಯಲ್ಲಮ್ಮ ದೇವಿ ದರ್ಶನಕ್ಕೆ ಹೋಗಿ ವಾಪಸ್ ಊರಿಗೆ ಹೋಗುತ್ತಿದ್ದ ಕ್ರೂಸರ್ ಹಾಗೂ ಕಟ್ಟಿಗೆಯನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಕ್ರೂಸರ್ ವಾಹನ ಸಂಪೂರ್ಣ ಜಖಂ ಆಗಿದ್ದು, ಮೃತರ ದೇಹಗಳು ಕೂಡ ಛಿದ್ರ, ಛಿದ್ರವಾಗಿವೆ.
ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ಗುರುವಾರ ರಾತ್ರಿ ವೇಳೆ ಈ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಕ್ರೂಸರ್ ನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಹಾಗೂ ಅಮಸಿದ್ದ ಬಂಡೆ (27) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಉಳಿದಂತೆ 6ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದು, ಇಂಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ.
ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್: ಹಣಕ್ಕಾಗಿ ಕೂಲಿ ಕಾರ್ಮಿಕರ ಬರ್ಬರ ಕೊಲೆ!
ಕಟ್ಟಿಗೆಗಳಿಗೆ ರೇಡಿಯಂ ಅಂಟಿಸಿಕೊಳ್ಳದ ಟ್ರ್ಯಾಕ್ಟರ್: ರಾತ್ರಿ ವೇಳೆ ಯಾವುದೇ ಮುಂಜಾಗ್ರತೆ ಇಲ್ಲದೇ ಮುಂಚು ಫಲಕಗಳನ್ನು ಅಂಟಿಸಿಕೊಳ್ಳದೇ ಕಟ್ಟಿಗೆಯನ್ನು ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್‌ಗೆ ಯಲ್ಲ ದೇವರ ದರ್ಶನ ಮಾಡಿ ಕ್ರೂಸರ್‌ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರಾಕ್ಟರ್‌ಗೆ ಡಿಕ್ಕಿಹೊಡೆದ ಕ್ರೂಸರ್ ನಂತರ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ವಾಹನ ಸಂಪೂರ್ಣ ಜಖಂ ಆಗಿದ್ದು, ಮೃತರ ದೇಹಗಳು ಛಿದ್ರ, ಛಿದ್ರವಾಗಿವೆ. ಘಟನೆ ನಂತರ ನೆರವಿಗೆ ಧಾವಿಸಿದ ಸ್ಥಳೀಯರು ಗಾಯಗೊಂಡವರನ್ನು ಇಂಡಿ ತಾಲೂಕಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಯಲ್ಲಮ್ಮ ದೇವರ ದರ್ಶನಕ್ಕೆ ಹೋದವರು ಊರು ಸೇರಲಿಲ್ಲ: ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಮಣೂರು ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಇನ್ನು ಅಪಘಾತದಲ್ಲಿ ಮೃತರು ಹಾಗೂ ಗಾಯಾಳು ಚಡಚಣ ತಾಲೂಕಿನ ಲಮಾನಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಇನ್ನು ಅಪಘಾತ ಘಟನೆಯು ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ. ಇನ್ನು ಅಪಘಾತ ನಡೆದಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜೆಸಿಬಿಗಳಿಂದ ವಾಹನಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ರಸ್ತೆಯಲ್ಲಿ ಅನುವು ಮಾಡಿಕೊಟ್ಟರು.
ಬಾಗಲಕೋಟೆಯಲ್ಲಿ ಹಾಡಹಗಲೇ ಚಾಕು ಇರಿದು ಕೊಲೆ: ರಾಜ್ಯದಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಪ್ರಾಂಗಣದ ಬಳಿ ಚಾಕುವಿನಿಮದ ಇರಿದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಹಾಡು ಹಗಲು ಹೊತ್ತಿನಲ್ಲಿಯೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ಮಾಡಿ ಚಾಕುವಿನಿಂದ ಇರಿಯಲಾಗಿದೆ. ತೀವ್ರ ರಕ್ತಸ್ರಾವ ಉಂಟಾದ ವ್ಯಕ್ತಿ ಸ್ಥಳದಲ್ಲಿಯೇಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
WATCH: KSRTC ಬಸ್‌ನಲ್ಲಿ ಇಬ್ಬರು ಹುಡುಗಿಯರ ಮಧ್ಯೆಯೇ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ!
ಹಾಡುಹಗಲೇ ನಡೆದ ಚಾಕು ಇರಿತ ಘಟನೆಯಲ್ಲಿ ಬಸವರಾಜ (55) ಮೃತಪಟ್ಟ ದುರ್ದೈವಿ ಆಗಿದ್ದಾನೆ. ನಗರದ ಎಪಿಎಂಸಿ ಮುಂಭಾಗದಲ್ಲಿ ಬಸವರಾಜ ನಿಂತಿದ್ದಾಗ ಈತನ ಬಳಿ ಚಾಕು ಹಿಡಿದು ಆಗಮಿಸಿದ ಮಹಾಂತೇಶ ಎನ್ನುವ ದುಷ್ಕರ್ಮಿ ಏಕಾಏಕಿ ಚಾಕುವಿನಿಂದ ಇರಿದಿದ್ದಾನೆ. ಇನ್ನು ಕೊಲೆ ಮಾಡಿದ ವ್ಯಕ್ತಿ ಸ್ವತಃ ಬಸವರಾಜನ ಹೆಂಡತಿಯ ತಂಗಿಯ ಗಂಡ (ಸಡಕ) ನಾಗಿದ್ದಾನೆ. ಇನ್ನು ಚಾಕುವನ್ನು ನೇರವಾಗಿ ಎದೆಗೇ ಚುಚ್ಚಿದ್ದು, ರಕ್ತಸ್ರಾವದಲ್ಲಿ ಬಿದ್ದ ಬಸವರಾಜು ಅವರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯೆ ಸಾವನ್ನಪ್ಪಿದ್ದಾರೆ.