Uttar Pradesh: ಫಲಿಸಲಿಲ್ಲ ಚಿಕಿತ್ಸೆ; ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ದಲಿತ ಬಾಲಕಿ ಸಾವು

By BK Ashwin  |  First Published Sep 19, 2022, 2:11 PM IST

ಉತ್ತರ ಪ್ರದೇಶದಲ್ಲಿ ದಲಿತ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಡೀಸೆಲ್‌ ಸುರಿದು ಬೆಂಕಿ ಹಚ್ಚಲಾಗಿತ್ತು. ಹಲವು ದಿನಗಳಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬಾಲಕಿ ಮೃತಪಟ್ಟಿದ್ದಾಳೆ. 


ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಇಬ್ಬರು ವ್ಯಕ್ತಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ (Gang Rape) ದಲಿತ ಬಾಲಕಿಯೊಬ್ಬಳು (Dalit Girl) ಮೃತಪಟ್ಟಿದ್ದಾಳೆ. ಅತ್ಯಾಚಾರ ಮಾಡಿದ್ದ ಕಾಮುಕರು ಆಕೆಯ ದೇಹಕ್ಕೆ ಬೆಂಕಿಯನ್ನೂ (Fire) ಹಚ್ಚಿದ್ದರು. ಈ ಹಿನ್ನೆಲೆ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಲಖನೌ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಕೆ 12 ದಿನಗಳ ನಂತರ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ. ಹದಿಹರೆಯದ (Teenager) ಬಾಲಕಿ ಮೇಲೆ ಈ ತಿಂಗಳ ಆರಂಭದಲ್ಲಿ ಕುನ್ವರ್‌ಪುರ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ (Sexual Harassment) ನಡೆದಿತ್ತು. ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಬಳಿಕ ಆರೋಪಿಗಳು ಆಕೆಯ ಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ್ದರು. ಇನ್ನು, ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ, ಲಖನೌನಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಮೃತ ಬಾಲಕಿಯ ಶವವನ್ನು ಪಿಲಿಭಿತ್‌ನಲ್ಲಿರುವ ಆಕೆಯ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.

ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ದಲಿತ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ್ದಾರೆ ಎಂದೂ ಪೊಲೀಸರು ಸೆಪ್ಟೆಂಬರ್ 10 ರಂದು ಮಾಹಿತಿ ನೀಡಿದ್ದರು. 16 ವರ್ಷದ ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದೂ ಪೊಲೀಸ್ ವರಿಷ್ಠಾಧಿಕಾರಿ (Superintendent of Police) ದಿನೇಶ್ ಕುಮಾರ್ ಪ್ರಭು ಆ ವೇಳೆ ತಿಳಿಸಿದ್ದರು. ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದೂ ಪೊಲೀಸರು ಹೇಳಿದ್ದಾರೆ. ಆರೋಪಿಗಳು ಮೊದಲು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಮತ್ತು ನಂತರ ಡೀಸೆಲ್ (Diesel) ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾರೆ ಎಂದೂ ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದರು. 

Tap to resize

Latest Videos

ಇದನ್ನು ಓದಿ: Crime News: ಹುಡುಗಿ ಅತ್ಯಾಚಾರ ಮಾಡಿ ಮತ್ತೆ ಮಾಡುವುದಾಗಿ ಹೆದರಿಸಿದ ಕಾಮುಕ, ಯುವತಿ ಆತ್ಮಹತ್ಯೆ

ಸೆಪ್ಟೆಂಬರ್ 7 ರಂದು ಉತ್ತರ ಪ್ರದೇಶದ ಫಿಲಿಬಿತ್‌ ಜಿಲ್ಲೆಯ ಮಾಧವ್ ತಾಂಡಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದೂ ಪೊಲೀಸರು ತಿಳಿಸಿದ್ದಾರೆ. ಬಳಿಕ, ಸೆಪ್ಟೆಂಬರ್‌ 10 ರಂದು ಸಂತ್ರಸ್ಥೆ ತನಗಾದ ಸಂಕಷ್ಟವನ್ನು ವಿವರಿಸುತ್ತಿರುವ ವಿಡಿಯೋ ವೈರಲ್ (Viral Video) ಆದ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ. ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿಯನ್ನು ಸೆಪ್ಟೆಂಬರ್ 7ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದೂ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಪ್ರಭು ಸುದ್ದಿಗಾರರಿಗೆ ತಿಳಿಸಿದರು. 

ಬಾಲಕಿಯ ಕುಟುಂಬದವರ ದೂರಿನ ಮೇರೆಗೆ ಸೆಪ್ಟೆಂಬರ್ 10 ರ ರಾತ್ರಿ ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ, ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೋ) (POCSO) ಕಾಯ್ದೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಕಾಯ್ದೆಯಡಿ (Scheduled Castes / Scheduled Tribes Act)  ಪ್ರಕರಣ ದಾಖಲಿಸಲಾಗಿದೆ ಎಂದೂ ಅವರು ಹೇಳಿದರು. ಈ ಕುರಿತು ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದ್ದು, ಬಂಧಿತ ಆರೋಪಿಗಳಿಬ್ಬರನ್ನೂ ವಿಚಾರಣೆಗೆ ಒಳಪಡಿಸಲಾಗಿದೆ. ಹಾಗೂ, ಸಂತ್ರಸ್ಥೆ ಬಾಲಕಿಯ ಹೇಳಿಕೆಯನ್ನು ಸಹ ದಾಖಲಿಸಿಕೊಳ್ಳಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ. 

ಇದನ್ನೂ ಓದಿ: ''ಚಾಕುವಿನಿಂದ ಬೆದರಿಸಿ ಮುಂಬೈ ಮಹಿಳೆ ಮೇಲೆ ಗ್ಯಾಂಗ್‌ರೇಪ್‌ ಕಟ್ಟುಕತೆ..!'

click me!