
ಬೆಂಗಳೂರು (ಸೆ.29) : ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಗುರಿಯಾಗಿಸಿ ಅಶ್ಲೀಲ ಸಂದೇಶದ ಪೋಸ್ಟ್ ಹಾಕಿ ಅತ್ಯಾ೧ಚಾರದ ಬೆದರಿಕೆವೊಡ್ಡಿದ ಆರೋಪದಡಿ ನಟ ದರ್ಶನ್ ಅಭಿಮಾನಿಗಳು ಎನ್ನಲಾದವರು ಸೇರಿ ಕೆಲವರ ವಿರುದ್ಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಂಚಶೀಲನಗರದ ನಿವಾಸಿ ಅಜಿತ್ ಆನಂದ ಹೆಗಡೆ ಎಂಬುವವರು ನೀಡಿದ ದೂರಿನ ಮೇರೆಗೆ ಖದರ್ ಕನ್ನಡಿಗ ಫೇಸ್‌ಬುಕ್ ಪೇಜ್, ನವೀನ್ ನವೀನ್, ಹರೀಶ್ ನಾಯ್ಕ್, ಕೆಂಚ ತೂಗುದೀಪ, ಭೀಮ್ಸ್ ಬೋಸಾಯಮ್, ಮಾಕ್ಸ್‌ವೆಲ್ ಗೌತಮ್, ರವಿ ದರ್ಶನ್, ಪ್ರವೀನ್ ಶೆಟ್ಟಿ, ಇಡ್ಲಿ ಸೋಮ, ರಮೇಶ್ ನಾಗಪ್ಪ ಹಾಗೂ ಶಿವು ತೂಗುದೀಪ ಹೆಸರಿನ ಫೇಸ್‌ಬುಕ್ ಪೇಜ್‌ಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಕಿತ್ತೋಗಿರೋ ನನ್ ಮಕ್ಕಳ ಬಗ್ಗೆ ತಲೆಕೆಡಿಸಿಕೋಬೇಡಿ ಅಂದಿದ್ಯಾಕೆ ಕಿಚ್ಚ ಸುದೀಪ್; ಗೂಡಾರ್ಥ ಏನಿದೆ?
ಖದರ್ ಕನ್ನಡಿಗ ಸೇರಿ ಹಲವು ಪೇಜ್ ವಿರುದ್ಧ ದೂರು
ಅಜಿತ್ ಆನಂದ್ ಹೆಗಡೆ ನೀಡಿದ ದೂರಿನನ್ವಯ, ಸೆ.24ರಂದು ಫೇಸ್‌ಬುಕ್‌ನಲ್ಲಿ ತನ್ನ ಪತ್ನಿಯನ್ನು ಟಾರ್ಗೆಟ್ ಮಾಡಿ ಕೆಲವರು ಬೆದರಿಕೆ ಹಾಕುತ್ತಿದ್ದಾರೆ. ಖದರ್ ಕನ್ನಡಿಗರ ಪೇಜ್‌ನಿಂದ ಅಶ್ಲೀಲ ಫೋಸ್ಟ್ ಮಾಡಲಾಗಿದೆ. ತಮ್ಮ ಎರಡು ವರ್ಷದ ಮಗುವಿನ ಫೋಟೋ ಬಳಸಿಕೊಂಡು ಕಿಡಿಗೇಡಿಗಳು ಪೋಸ್ಟ್ ಮಾಡುತ್ತಿದ್ದಾರೆ. ಈ ಮೂಲಕ ನನಗೆ ಮತ್ತು ಸರ್ಕಾರಿ ಶಾಲೆ ಶಿಕ್ಷಕಿಯಾಗಿರುವ ನನ್ನ ಪತ್ನಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ನನ್ನ ಪತ್ನಿ ಗಣತಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಅತ್ಯಾ೧ಚಾರದ ಬೆದರಿಕೆಯಿಂದ ನನ್ನ ಕುಟುಂಬ ಆತಂಕದಲ್ಲಿದೆ. ಹೀಗಾಗಿ ಈ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ನನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ