
ಬೆಂಗಳೂರುಆ.11): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಸ್ನೇಹಿತ, ಹಾಸ್ಯ ನಟ ಚಿಕ್ಕಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಸಿಆರ್‌ಪಿಸಿ 164ರಡಿ ವಿಜಯನಗರ ಉಪ ವಿಭಾಗದ ಪೊಲೀಸರು ಹೇಳಿಕೆ ದಾಖಲಿಸಿದ್ದಾರೆ.
ಪಟ್ಟಣಗೆರೆಯಲ್ಲಿ ರೇಣುಕಾಸ್ವಾಮಿ ಹತ್ಯೆಗೂ ಮುನ್ನ ರಾಜರಾಜೇಶ್ವರಿ ನಗರದಲ್ಲಿರುವ, ಪ್ರಕರಣದ ಆರೋಪಿ ವಿನಯ್ ಒಡೆತನದ ಸ್ಟೋನಿ ಬ್ರೂಕ್ಸ್ ಪಬ್‌ನಲ್ಲಿ ದರ್ಶನ್ ಜತೆ ಚಿಕ್ಕಣ್ಣ ಊಟ ಮಾಡಿದ್ದರು. ಹತ್ಯೆ ನಡೆದ ದಿನ ಪಬ್‌ನಲ್ಲಿ ದರ್ಶನ್ ಜತೆ ಚಿಕ್ಕಣ್ಣ ಇದ್ದ ಸಂಗತಿ ಪಬ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಮಾಹಿತಿ ಆಧರಿಸಿ ಚಿಕ್ಕಣ್ಣರನ್ನು ವಿಚಾರಣೆಗೊಳಪಡಿಸಿದ್ದ ಪೊಲೀಸರು, ನಂತರ ಅವರನ್ನು ಸಾಕ್ಷಿ ಎಂದು ಪರಿಗಣಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರಿಂದ ನ್ಯಾಯಾಲಯದಲ್ಲಿ ಪೊಲೀಸರು ಹೇಳಿಕೆ ಪಡೆದಿದ್ದಾರೆ. ತಮ್ಮ ಪ್ರಿಯತಮೆ ಪವಿತ್ರಾ ಗೌಡಳಿಗೆ ಅಶ್ಲೀಲ ಸಂದೇಶ ಕಳುಹಿಸಿದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಅಪಹರಿಸಿ ಕರೆತಂದು ಪಟ್ಟಣಗೆರೆ ಶೆಡ್‌ನಲ್ಲಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಆರೋಪದ ಮೇರೆಗೆ ನಟ ದರ್ಶನ್ ಹಾಗೂ ಅವರ ಸಹಚರರು ಬಂಧಿತರಾಗಿ ಜೈಲಿನಲ್ಲಿದ್ದಾರೆ. ಈಹತ್ಯೆಗೂ ಮುನ್ನ ಆರ್.ಆರ್.ನಗರದಲ್ಲಿರುವ ತಮ್ಮ ಆಪ್ತ ವಿನಯ್ ಒಡೆತನದ ಸ್ಟೋನಿ ಬ್ರೂಕ್ಸ್ ಪಬ್‌ನಲ್ಲಿ ಚಿಕ್ಕಣ್ಣ ಸೇರಿದಂತೆ ತಮ್ಮ ಸ್ನೇಹಿತರ ಜತೆ ದರ್ಶನ್ ಊಟ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ