ಅನ್ಯ ಜಾತಿಯ ಹುಡುಗನ ಜೊತೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಮಗಳನ್ನು ಆಕೆಯ ತಂದೆಯೇ ಕೊಲೆ ಮಾಡಿದ ವಿಷಯ ತಿಳಿದು ಪ್ರೇಮಿಯೂ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಬಂಗಾರಪೇಟೆ (ಜೂ.27) : ಅನ್ಯ ಜಾತಿಯ ಹುಡುಗನ ಜೊತೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಮಗಳನ್ನು ಆಕೆಯ ತಂದೆಯೇ ಕೊಲೆ ಮಾಡಿದ ವಿಷಯ ತಿಳಿದು ಪ್ರೇಮಿಯೂ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ತಾಲೂಕಿನ ಬೋಡಗುರ್ಕಿ ಗ್ರಾಮದ ಕೀರ್ತಿ ಎಂಬ 20 ಎಂಬ ಯುವತಿಯನ್ನು ಆಕೆಯ ತಂದೆ ಕೃಷ್ಣಮೂರ್ತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಇದನ್ನು ಅರಿತ ಯುವತಿಯ ಪ್ರಿಯಕರ ಅದೇ ಗ್ರಾಮದ ಗಂಗಾಧರ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಾಗಲಕೋಟೆಯಲ್ಲಿ ಮರ್ಯಾದೆ ಹತ್ಯೆ: ಅಳಿಯನನ್ನೇ ಕೊಂದ ಪಾಪಿ ಮಾವ
ಇವರಿಬ್ಬರೂ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ಕೀರ್ತಿಯ ತಂದೆ ಬುದ್ದಿವಾದ ಹೇಳಿದ್ದರು ಎನ್ನಲಾಗಿದೆ. ತಂದೆಯ ಬುದ್ದಿವಾದಕ್ಕೆ ಬೆಲೆ ಕೊಡದ ಮಗಳು ಇಬ್ಬರ ವಿವಾಹಕ್ಕೆ ಬೇಡಿಕೆ ಇಟ್ಟಿದ್ದಳು ಎನ್ನಲಾಗಿದೆ. ಇದರಿಂದಾಗಿ ತಂದೆ ಮಗಳ ನಡುವೆ ಮಾತಿನ ಚಕಮಕಿ ತಾರಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ತನ್ನ ಮಾತು ಕೇಳದ ಮಗಳನ್ನು ಮಂಗಳವಾರ ಬೆಳಗ್ಗೆ ಮನೆಯಲ್ಲೇ ಕತ್ತು ಹಿಸುಕಿ ಸಾಯಿಸಿದ್ದಾನೆ. ಈ ವಿಷಯ ತಿಳಿದು ಗಂಗಾಧರ್ ಮನನೊಂದು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.