ಒಬ್ಬಂಟಿ ಮಹಿಳೆ ಇರುವುದನ್ನು ಗಮನಿಸಿದ ಕಾಮುಕ ನನಗೆ ಉಪ್ಪಿನಕಾಯಿ ಬೇಕು ಎಂದು ಕೇಳುತ್ತಾ ಮನೆಯೊಳಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿ ಕೆನ್ನೆಯನ್ನು ಕಚ್ಚಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ (ಡಿ.18): ಮನೆಯಲ್ಲಿ ಒಬ್ಬಂಟಿ ಮಹಿಳೆ ಇರುವುದನ್ನು ಗಮನಿಸಿದ ಕಾಮುಕ ನನಗೆ ಉಪ್ಪಿನಕಾಯಿ ಬೇಕು ಎಂದು ಕೇಳುತ್ತಾ ಮನೆಯೊಳಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿ ಕೆನ್ನೆಯನ್ನು ಕಚ್ಚಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಉಪ್ಪಿನ ಕಾಯಿ ಕೇಳುವ ನೆಪದಲ್ಲಿ ಬಂದು ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಗ್ರಾಮಯೊಂದರಲ್ಲಿ ನಡೆದಿದೆ. ಮಹಿಳೆಯ ಕೆನ್ನೆಗೆ ಕಚ್ಚಿ ಗಾಯಗೊಳಿಸಿ ಪರಾರಿಯಾದ ಆರೋಪಿ ಮಂಜಪ್ಪ ಅಲಿಯಾಸ್ ಮಂಜುನಾಥ್ ಡಿ.ಹೆಚ್. ಎಂದು ಹೇಳಲಾಗುತ್ತಿದೆ. ಡಿಸೆಂಬರ್ 2 ರಂದು ನಡೆದಿದ್ದ ಘಟನೆಯ ಬಗ್ಗೆ ಪೊಲೀಸರಿಗೆ ದೂರು ಕೊಟ್ಟರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಮಹಿಳೆಯರು ಗುಂಪಾಗಿ ಬಂದು ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ.
60 ವರ್ಷ ಮೇಲ್ಪಟ್ಟವರು ಮಾತ್ರವಲ್ಲ, ಈ ರೋಗ ಲಕ್ಷಣಗಳಿದ್ದವರೂ ಮಾಸ್ಕ್ ಧರಿಸಬೇಕು!
ಮಹಿಳೆ ಮನೆಯಲ್ಲಿ ಒಬ್ಬಳೇ ಇರುವುದನ್ನ ಗಮನಿಸಿ ಅತ್ಯಾಚಾರಕ್ಕೆ ಯತ್ನ ಮಾಡಿದ ಆರೋಪಿಯನ್ನು ಬಂಧಿಸಿ ಆತನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು. ದೂರು ಕೊಟ್ಟು ಹಲವು ದಿನಗಳಾದರೂ ಆತನನ್ನು ಬಂಧಿಸದ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಹಲವು ಮಹಿಳೆಯರು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ. ದಾವಣಗೆರೆಯ ಎಸ್ಪಿ ಕಚೇರಿ ಆರೋಪಿಯ ಫೊಟೋವನ್ನು ಹಿಡಿದು ಮಹಿಳೆಯರು ಪ್ರತಿಭಟನೆ ಮಾಡುತ್ತಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಗೆ ಮನವಿ ಮಾಡಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ.
ಜಮೀನಿನಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಯತ್ನ:
ಮೈಸೂರು (ಡಿ.18) : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಮುಕನೋರ್ವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸ ಕಡಜಟ್ಟಿ ಗ್ರಾಮದಲ್ಲಿ ನಡೆದಿದೆ.ನವೀನ್ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ಮೇಲೆ ಎರಗಿ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕ. ಈ ವೇಳೆ ಮಹಿಳೆಯ ಚೀರಾಟ ಕೇಳಿ ಸ್ಥಳಕ್ಕಾಗಮಿಸಿದ ಪತಿ ಮಹಾದೇವಪ್ಪ. ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದನ್ನು ತಡೆದಿದ್ದಕ್ಕೆ ಪತಿಯ ಮೇಲೂ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಹೊಸ ಕಡಜಟ್ಟಿ ಗ್ರಾಮದಲ್ಲಿರುವ ಮೈಸೂರು ಮೂಲದ ವ್ಯಕ್ತಿಯ ತೋಟ ಒಂದರಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ದಂಪತಿ. ಕೆಲಸ ಮಾಡುವ ತೋಟದ ಒಳಭಾಗದಲ್ಲಿ ವಿದ್ಯುತ್ ಫ್ಯೂಸ್ ಹಾಕಲು ತೆರಳಿದ್ದ ಪತಿ. ಪತಿ ಮಹದೇವಸ್ವಾಮಿ ಇಲ್ಲದೆ ಇರುವ ಸಮಯವನ್ನೇ ನೋಡಿ ತೋಟದ ಮನೆಯ ಬಳಿ ಒಬ್ಬಂಟಿ ಮಹಿಳೆ ಇರುವುದನ್ನೇ ಗಮನಿಸಿದ ಕಾಮುಕ ನವೀನ. ತಂತಿ ಬೇಲಿಯನ್ನು ಜಿಗಿದು ಬಾಯಿಗೆ ಬಟ್ಟೆಯನ್ನು ತುರುಕಿ ಬಲತ್ಕಾರಕ್ಕೆ ಯತ್ನಿಸಿರುವ ದುರುಳ. ಈ ವೇಳೆ ಪತ್ನಿಯ ಚೀರಾಟ ಕೇಳಿ ಓಡಿ ಬಂದಿರುವ ಪತಿ ಪತ್ನಿಯನ್ನು ರಕ್ಷಿಸಲು ಮುಂದಾಗಿದ್ದಾನೆ.
ಈ ವೇಳೆ ಪತಿಯ ಮೇಲೆ ಮಚ್ಚು ಬೀಸಿ ಹಲ್ಲೆ ನಡೆಸಿರುವ ಕಾಮುಕ ನವೀನ್. ಮಚ್ಚಿನೇಟಿನಿಂದ ಗಾಯಗೊಂಡಿರುವ ಮಹದೇವಪ್ಪ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ರಮೇಶ್ ಕರಕಿಕಟ್ಟಿ, ದಫೆದರ್ ದೊಡ್ಡಯ್ಯ ಸ್ಥಳ ಪರಿಶೀಲನೆ ನಡೆಸಿದರು. ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕನಿಗೆ ಶೋಧಕಾರ್ಯ ಮುಂದುವರಿಸಿದ್ದಾರೆ.