
ದಾವಣಗೆರೆ (ಸೆ.28): ಆನೆಕೊಂಡದಲ್ಲಿ ಲಾಂಗ್ ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಆರೋಪಿ ಅಬ್ದುಲ್ ಸಮದ್ (28) ಎಂಬಾತನನ್ನು ಆರ್‌ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 18ರಂದು ಬಸವೇಶ್ವರ ದೇವಸ್ಥಾನದಿಂದ ಕಲ್ಲೇಶ್ವರ ಮಿಲ್‌ಗೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಲಾಂಗ್ ಹಿಡಿದು ಹುಚ್ಚಾಟ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿತ್ತು.
ಈ ಘಟನೆಯ ಸಂಬಂಧ ಆರ್‌ಎಂಸಿ ಯಾರ್ಡ್ ಠಾಣೆಯಲ್ಲಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಾಗಿತ್ತಾದರೂ, ಆರೋಪಿ ಬಂಧನವಾಗಿರಲಿಲ್ಲ. ಆನೆಕೊಂಡದಲ್ಲಿ ಬಸವೇಶ್ವರ ಜಾತ್ರೆ ನಡೆಯುವ ವೇಳೆ ಈ ಘಟನೆ ಸಂಭವಿಸಿದ್ದರಿಂದ, ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಮುಖಂಡರು ಆರೋಪಿಯ ಬಂಧನಕ್ಕೆ ಒತ್ತಾಯಿಸಿದ್ದರು. ಸಾರ್ವಜನಿಕರ ಆಕ್ರೋಶ ಮತ್ತು ಒತ್ತಡದ ಬಳಿಕ ಪೊಲೀಸರು ತನಿಖೆ ಚುರುಕುಗೊಳಿಸಿ, ಟಿಪ್ಪು ನಗರದ ನಿವಾಸಿಯಾದ ಅಬ್ದುಲ್ ಸಮದ್‌ನನ್ನು ಬಂಧಿಸಿದ್ದಾರೆ.
ಈ ಘಟನೆಯಿಂದ ಆನೆಕೊಂಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸರಿಗೆ ಸವಾಲಾಗಿತ್ತು. ಸದ್ಯ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿರುವ ಪೊಲೀಸರು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ