ದಾವಣಗೆರೆ ಜಿಲ್ಲೆಯ ಶಿರಮಗೊಂಡನಹಳ್ಳಿಯಲ್ಲಿ ನಡೆಯುತ್ತಿದ್ದ ಗ್ರಾಮ ದೇವತೆ ಜಾತ್ರೆಗೆ ಕುಡುಕ ಗಂಡ ತನ್ನ ಹೆಂಡತಿಯನ್ನೇ ಬಲಿ ಕೊಟ್ಟ ಘಡನೆ ನಡೆದಿದೆ.
ದಾವಣಗೆರೆ (ಫೆ.01): ಊರಿನಲ್ಲಿ ಎಲ್ಲರೂ ಗ್ರಾಮ ದೇವತೆಯ ಜಾತ್ರೆಯ ಹಿನ್ನೆಲೆಯಲ್ಲಿ ಅದ್ಧೂರಿಯಾಗಿ ಜಾತ್ರೆಯ ಆಚರಣೆ ಮಾಡುತ್ತಿದ್ದಾಗ ಇಲ್ಲೊಬ್ಬ ಮದ್ಯವ್ಯಸನಿ ಗಂಡ ಕಂಠಪೂರ್ತಿ ಕುಡಿದು ಬಂದು ಮನೆಯಲ್ಲಿದ್ದ ಹೆಂಡ್ತಿಯನ್ನು ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ.
ಹೌದು, ಕುಡಿದ ಮತ್ತಿನಲ್ಲಿ ಹಲ್ಲೆ ಮಾಡಬೇಡಿ ಎಂದು ಹಿರಿಯರು ಹೇಳುತ್ತಾರೆ. ಆದರೆ, ಇಲ್ಲೊಬ್ಬ ಕುಡುಕ ಗಂಡ ತನ್ನ ಗ್ರಾಮದೇವತೆಯ ಜಾತ್ರೆಯ ವೇಳೆ ಕಂಠಪೂರ್ತಿ ಕುಡಿದು ಬಂದು ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಹೆಂಡತಿಯ ತಲೆ ಹಾಗೂ ಕಿವಿಯ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದು, ಕಿವಿಯಲ್ಲಿ ರಸ್ತಸ್ರಾವ ಉಂಟಾಗಿ ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲ್ಲೂಕಿನ ಶಿರಮಗೊಂಡನಹಳ್ಳಿಯಲ್ಲಿ ನಡೆದಿದೆ. ಅರ್ಪಿತಾ (24) ಕೊಲೆಯಾದ ದುರ್ದೈವಿ ಮಹಿಳೆಯಾಗಿದ್ದಾಳೆ. ಹನಮಂತ (28) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.
ಬೆಳಗಾವಿ ಡಬಲ್ ಮರ್ಡರ್: ಮದುವೆಯಾಗಿ 30 ದಿನಕ್ಕೆ ಓಡಿಹೋದ ಹೆಂಡ್ತಿಯನ್ನು ಪ್ರಿಯಕರನೊಂದಿಗೆ ಕೊಲೆಗೈದ ಗಂಡ
ಶಿರಮಗೊಂಡನಹಳ್ಳಿಯಲ್ಲಿ 5 ವರ್ಷಕ್ಕೊಮ್ಮೆ ಗ್ರಾಮದೇವತೆ ಜಾತ್ರೆ ನಡೆಯುತ್ತದೆ. ಕಳೆದ ಐದು ವರ್ಷಗಳ ಬಳಿಕ ಬಂದ ಗ್ರಾಮದೇವತೆ ಹಬ್ಬಕ್ಕೆ ಎಲ್ಲ ಮನೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನು ಎಲ್ಲ ಮನೆಗಳಲ್ಲಿಯೂ ಮಾಂಸಾಹಾರದ ಊಟವನ್ನೂ ಮಾಡಲಾಗಿರುತ್ತದೆ. ಜಾತ್ರೆ ಹಿನ್ನೆಲೆ ಕಂಠಪೂರ್ತಿ ಮದ್ಯಪಾನ ಮಾಡಿದ್ದ ಹನುಮಂತ, ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳ ಆರಂಭಿಸಿದ್ದಾನೆ. ಆದರೆ, ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಹಲ್ಲೆ ಮಾಡಿದ್ದು, ಈಗ ಪತ್ನಿ ಸಾವನ್ನಪ್ಪಿದ್ದಾಳೆ.
ಕಳೆದೆರಡು ವರ್ಷದ ಹಿಂದೆ ಹನುಮಂತ ಮತ್ತು ಅರ್ಪಿತಾ ಮದುವೆಯಾಗಿತ್ತು. ಆರೋಪಿ ಹನುಮಂತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಸಂತೋಷ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪ್ರಿಯಕರನೊಂದಿಗೆ ಓಡಿಹೋದ ಹೆಂಡ್ತಿಯನ್ನು ಕೊಲೆಗೈದ ಗಂಡ:
ಬೆಳಗಾವಿ: ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಚಂದುಳ್ಳಿ ಚಲುವೆ ಮದುವೆಗೂ ಮೊದಲೇ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಳು. ಆದರೆ, ಮನೆಯವರ ಬಲವಂತಕ್ಕೆ ಪ್ರೀತಿ ಮುಚ್ಚಿಟ್ಟು ಮದುವೆಯಾದ ಹೆಂಡತಿ ತನ್ನ ಹಳೇ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ. ಲಕ್ಷಾಂತರ ರೂ. ಖರ್ಚು ಮಾಡಿ ಮದುವೆ ಮಾಡಿಕೊಂಡ ಗಂಡ ಇಬ್ಬರೂ ಚೆನ್ನಾಗಿರುವುದನ್ನು ನೋಡಿ ಸಹಿಸಿಕೊಳ್ಳಲಾಗದೇ ಬರ್ಬರವಾಗಿ ಕೊಲೆ ಮಾಡಿದ್ದಾನೆ.
ಸ್ನೇಹಿತನ ಮಾತು ಕೇಳಿ ಹುಡುಗಿಯ ಮೈಮುಟ್ಟಿ ಅಸಭ್ಯ ವರ್ತನೆ; ಪರಪ್ಪನ ಅಗ್ರಹಾರ ಸೇರಿದ ಕಾಮುಕ
ಹೌದು, ಮದುವೆಯಾಗಿ ಕೇವಲ ಒಂದು ತಿಂಗಳಿಗೆ ಕೈಕೊಟ್ಟು ಓಡಿ ಹೋದ ಹೆಂಡತಿ ಮತ್ತು ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ. ಯಾಸಿನ ಬಾಗೊಡೆ (21) ಹಾಗೂ ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ಜೋಡಿಯಾಗಿದ್ದಾರೆ. ತೌಫಿಕ್ ಕ್ಯಾಡಿ (24) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಇನ್ನು ಇಬ್ಬರ ಮೇಲೆ ಹಲ್ಲೆ ಮಾಡುವ ವೇಳೆ ಬಿಡಿಸಲು ಬಂದಿದ್ದ ತಾಯಿ ಅಮಿನಾಬಾಯಿ ಬಾಗೂಡ ಹಾಗೂ ಮಾವ ಮುಸ್ತಫಾ ಮುಲ್ಲಾನ ಮೇಲು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಹಲ್ಲೆಗೊಳಗಾದ ಈ ಇಬ್ಬರನ್ನು ಮಿರಜ್ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಬಲ್ ಮರ್ಡರ್ ಮಾಡಿದ ಆರೋಪಿ ತೌಫಿಕ್ ಸ್ಥಳದಿಂದ ಪರಾರಿ ಆಗಿದ್ದಾನೆ.