
ದಾವಣಗೆರೆ(ನ.29): ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ಆತ್ಮ೧ಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಆತಂಕಕಾರಿ ಬೆಳವಣಿಗೆಗಳ ನಡುವೆಯೇ, ದಾವಣಗೆರೆಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ.
ನಗರದ ಕೆಟಿಜೆ ನಗರದ ನಿವಾಸಿ ಮತ್ತು ನಿವೃತ್ತ ಡಿವೈಎಸ್‌ಪಿ ಹೆಚ್.ವೈ. ತುರಾಯಿ (70) ಅವರು ತಮ್ಮ ವೈಯಕ್ತಿಕ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. 2014 ರಲ್ಲಿ ಪೊಲೀಸ್ ಸೇವೆಯಿಂದ ನಿವೃತ್ತಿ ಹೊಂದಿದ್ದ ತುರಾಯಿ ಅವರು, ತಮ್ಮದೇ ಮನೆಯಲ್ಲಿ ಈ ದುರಂತಕ್ಕೆ ಶರಣಾಗಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ ಮೃತ ಅಧಿಕಾರಿಯ ಮಗ ಮನೆಯ ಮೇಲ್ಮಹಡಿಯಲ್ಲಿಯೇ ಇದ್ದರು ಎಂದು ತಿಳಿದುಬಂದಿದೆ. ಆದರೆ, ತುರಾಯಿ ಅವರ ಈ ದಿಢೀರ್ ಆತ್ಮ೧ಹತ್ಯೆಗೆ ನಿಖರ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಕುಟುಂಬ ಅಥವಾ ಇಲಾಖಾ ಒತ್ತಡದಂತಹ ಯಾವುದೇ ಅಂಶಗಳು ಸಾವಿಗೆ ಕಾರಣವೇ ಎಂಬುದರ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರು ರೈಫಲ್ ಬಳಸಿ ಆತ್ಮ೧ಹತ್ಯೆ ಮಾಡಿಕೊಂಡಿರುವುದು ಪೊಲೀಸ್ ವಲಯದಲ್ಲಿ ತೀವ್ರ ಆಘಾತ ಮತ್ತು ಚರ್ಚೆಗೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ