Attempt to Murder: ಪತ್ನಿಗೆ ಬೆಂಕಿ ಹಚ್ಚಿ ಪರಾರಿ ಆಗಿದ್ದ ಪತಿ ಶವವಾಗಿ ಪತ್ತೆ

Kannadaprabha News   | Asianet News
Published : Nov 29, 2021, 06:38 AM IST
Attempt to Murder: ಪತ್ನಿಗೆ ಬೆಂಕಿ ಹಚ್ಚಿ ಪರಾರಿ ಆಗಿದ್ದ ಪತಿ ಶವವಾಗಿ ಪತ್ತೆ

ಸಾರಾಂಶ

*  ಆಂಧ್ರದ ಪ್ರಾರ್ಥನಾ ಮಂದಿರವೊಂದರ ಮುಂದೆ ಪತ್ತೆಯಾದ ಮೃತದೇಹ *  ಪೆಟ್ರೋಲ್‌ ತಂದು ಸುರಿದು ಬೆಂಕಿ ಹಚ್ಚಿದ್ದ ನಿಸಾರ್‌  *  ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಪತ್ನಿ ಆಯೇಷಾ 

ಬೆಂಗಳೂರು(ನ.29): ಇತ್ತೀಚೆಗೆ ಶೀಲ ಶಂಕಿಸಿ ತನ್ನ ಪತ್ನಿಗೆ ಬೆಂಕಿ ಹಚ್ಚಿ ಕೊಲೆ(Murder) ಮಾಡಿ ಪರಾರಿಯಾಗಿದ್ದ ಪತಿಯ ಮೃತದೇಹ(Deadbody) ಆಂಧ್ರ ಪ್ರದೇಶದ(Andhra Pradesh) ಪ್ರಾರ್ಥನಾ ಮಂದಿರವೊಂದರ ಮುಂದೆ ರಸ್ತೆ ಬದಿ ಪತ್ತೆಯಾಗಿದೆ.

ರಾಜೇಂದ್ರನಗರದ ನಿವಾಸಿ ಆಯೇಷಾ (45) ಹತ್ಯೆಗೀಡಾದ ದುರ್ದೈವಿ. ಆಂಧ್ರ ಪ್ರದೇಶದ ಪೆನುಗೊಂಡ ಪಟ್ಟಣ ಮಸೀದಿಯೊಂದರ(Masjid) ಬಳಿ ಮೃತಳ ಪತಿ ನಿಸಾರ್‌ (50) ಮೃತ ದೇಹ ಪತ್ತೆಯಾಗಿದ್ದು, ಆತ ಹೃದಯಾಘಾತದಿಂದ(Heartattack) ಸಾವನ್ನಪ್ಪಿದ್ದಾನೆ.

Illicit Relationship| ಪ್ರಿಯತಮನ ಜೊತೆ ಸೇರಿ ಗಂಡನ ಕೊಲೆಗೆ ಹೆಂಡ್ತಿ ಸ್ಕೆಚ್‌..!

ಪೆಟ್ರೋಲ್‌ ತಂದು ಸುರಿದು ಬೆಂಕಿ ಹಚ್ಚಿದ:

ದಶಕಗಳ ಹಿಂದೆ ನಿಸಾರ್‌ ಹಾಗೂ ಆಯೇಷಾ ವಿವಾಹವಾಗಿದ್ದು, ರಾಜೇಂದ್ರ ನಗರದಲ್ಲಿ ದಂಪತಿ ನೆಲೆಸಿದ್ದರು. ಇತ್ತೀಚೆಗೆ ಪತ್ನಿ ನಡವಳಿಕೆ ಮೇಲೆ ಗುಮಾನಿಗೊಂಡ ಆತ, ಇದೇ ವಿಚಾರವಾಗಿ ಮನೆಯಲ್ಲಿ ಜಗಳ ಮಾಡುತ್ತಿದ್ದ. ಕೊನೆಗೆ ಪತ್ನಿ ಕೊಲೆ ಮಾಡಲು ನ.19ರಂದು ಬಂಕ್‌ನಿಂದ ಪೆಟ್ರೋಲ್‌(Petrol) ಖರೀದಿಸಿ ಮನೆಗೆ ಬಂದಿದ್ದ. ಮಧ್ಯಾಹ್ನ 3ರ ಸುಮಾರಿಗೆ ಮನೆಯಲ್ಲಿದ್ದ ಪತ್ನಿ ಮೇಲೆ ಪೆಟ್ರೋಲ್‌ ಸುರಿದು ಆತ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಆಗ ಆಯೇಷಾ, ಪತಿಯನ್ನು ಬಲವಂತವಾಗಿ ಹೊರಗೆ ದೂಡಿ ಬಾಗಿಲು ಹಾಕಿಕೊಂಡಿದ್ದಳು. ಇದರಿಂದ ಕೆರಳಿದ ಆತ, ಕಿಟಕಿ ಗಾಜನ್ನು ಒಡೆದು ಬೆಂಕಿ ಕಡ್ಡಿ ಗೀರಿ ಪತ್ನಿ ಮೇಲೆ ಎಸೆದಿದ್ದಾನೆ. ಈ ವೇಳೆ ಕಿಟಕಿ ಗಾಜು ಚುಚ್ಚಿ ನಿಸಾರ್‌ ಕೈಗೆ ಗಂಭೀರ ಪೆಟ್ಟಾಗಿತ್ತು ಎಂದು ಪೊಲೀಸರು(Police) ಹೇಳಿದ್ದಾರೆ.

ಪೆಟ್ರೋಲ್‌ ಸುರಿದ್ದರಿಂದ ಬೆಂಕಿ ಕಡ್ಡಿ ತಾಕಿದ ಕೂಡಲೇ ಬೆಂಕಿ ಹೊತ್ತಿಕೊಂಡಿದ್ದರಿಂದ ಆಯೇಷಾ ಪಾರಾಗಲು ಸಾಧ್ಯವಾಗಲಿಲ್ಲ. ಆಗ ರಕ್ಷಣೆಗೆ ಆಕೆ ಕೂಗಿಕೊಳ್ಳುತ್ತಿದ್ದಂತೆ ನಿಸಾರ್‌ ಓಡಿ ಹೋಗಿದ್ದ. ಬಳಿಕ ಅಲ್ಲಿಂದ ಆಂಧ್ರ ಪ್ರದೇಶಕ್ಕೆ ಬಸ್‌ನಲ್ಲಿ ಹೋಗಿದ್ದನು. ಇತ್ತ ಆಯೇಷಾಳನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮರುದಿನ ಕೊನೆಯುಸಿರೆಳೆದಿದ್ದಳು ಎಂದು ಪೊಲೀಸರು ವಿವರಿಸಿದ್ದಾರೆ.

ಸಾಯುವ ಮುನ್ನ ಆಯೇಷಾ ನೀಡಿದ ಹೇಳಿಕೆ ಆಧರಿಸಿ ಪೊಲೀಸರು ಆಕೆಯ ಪತಿ ಪತ್ತೆಗೆ ಹುಡುಕಾಟ ಆರಂಭಿಸಿದ್ದರು. ಆದರೆ ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಂಡಿದ್ದ ಆರೋಪಿ ಕೊನೆ ಬಾರಿಗೆ ಆಂಧ್ರ ಪ್ರದೇಶದಲ್ಲಿ ಸಂಪರ್ಕ ಹೊಂದಿದ್ದು ಗೊತ್ತಾಯಿತು. ಈ ಸುಳಿವು ಆಧರಿಸಿ ಆಂಧ್ರ ಪ್ರದೇಶದ ಮದನಪಲ್ಲಿಗೆ ತೆರಳಿದ್ದ ಪೊಲೀಸರು, ಎರಡು ದಿನ ಹುಡುಕಾಡಿ ನಗರಕ್ಕೆ ಮರಳಿತು. ಆದರೆ ಭಾನುವಾರ ಮೃತನಿಗೆ ಆತನ ಪುತ್ರ ಕರೆ ಮಾಡಿದ್ದಾನೆ. ಆಗ ಕರೆ ಸ್ವೀಕರಿಸಿದ ಸ್ಥಳೀಯರು, ಪೆನುಗೊಂಡದ ಮಸೀದಿ ಸಮೀಪ ನಿಮ್ಮ ತಂದೆ ಮೃತದೇಹ ಪತ್ತೆಯಾಗಿದೆ ಎಂದಿದ್ದಾರೆ. ಕೂಡಲೇ ಈ ಮಾಹಿತಿಯನ್ನು ಆಡುಗೋಡಿ ಪೊಲೀಸರಿಗೆ ಆತ ತಿಳಿಸಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅನೈತಿಕ ಸಂಬಂಧ ಶಂಕೆ: ಎಲ್ಲರೆದುರೇ ಹೆಂಡತಿ ಕುತ್ತಿಗೆ ಸೀಳಿದ ಗಂಡ..!

7 ತಿಂಗಳ ಬಳಿಕ ಮಹಿಳೆ ಕೊಲೆ ಪ್ರಕರಣ ಬೆಳಕಿಗೆ

ಬೆಂಗಳೂರು(Bengaluru): ಏಳು ತಿಂಗಳ ಹಿಂದೆ ನಡೆದ ಮಹಿಳೆಯೊಬ್ಬರ ಕೊಲೆ ಪ್ರಕರಣ ಬೇಧಿಸಿರುವ ಸುಬ್ರಮಣ್ಯನಗರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು(Accused) ಬಂಧಿಸಿದ್ದಾರೆ(Arrest).

ಕರ್ನೂಲ್‌ ಮೂಲದ ನೂರ್‌ ಅಹಮ್ಮದ್‌ (43), ಸತ್ಯ (48) ಬಂಧಿತರು. ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಾದ ಕುಮಾರ್‌, ಮೆಂಟಲ್‌ ರಘು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ರಾಜಾಜಿನಗರ ನಿವಾಸಿ ಸೀತಾ (47) ಕೊಲೆಯಾಗಿದ್ದ ದುರ್ದೈವಿ.

ಮೃತ ಸೀತಾ ಅವರ ಪತಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರು. ಹೀಗಾಗಿ ಸೋದರ ಸಂಬಂಧಿ ಮನೆಯಲ್ಲಿ ವಾಸಿಸುತ್ತಿದ್ದರು. ಕೆಲಸದ ಮೇಲೆ ಹೊರಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದ ಸಂಜೆಯದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಮಂತ್ರಾಲಯ ದೇವಾಲಯದಲ್ಲಿ ಅರ್ಚಕನಾಗಿರುವ ಸೀತಾ ಸಹೋದರ ವೆಂಕಟೇಶ್‌ ಆಚಾರ್‌ ಅಕ್ಕ ಸೀತಾ ನಾಪತ್ತೆಯಾಗಿರುವ ಬಗ್ಗೆ ಮಾ.26ರಂದು ಸುಬ್ರಮಣ್ಯನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಕೈಗೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ