ಹುಬ್ಬಳ್ಳಿ: ಬಸ್‌ ನಿಲ್ದಾಣದಲ್ಲಿ ನೇಣು ಬಿಗಿದ ವ್ಯಕ್ತಿಯ ಶವ ಪತ್ತೆ

Kannadaprabha News   | Asianet News
Published : Nov 20, 2020, 01:11 PM IST
ಹುಬ್ಬಳ್ಳಿ: ಬಸ್‌ ನಿಲ್ದಾಣದಲ್ಲಿ ನೇಣು ಬಿಗಿದ ವ್ಯಕ್ತಿಯ ಶವ ಪತ್ತೆ

ಸಾರಾಂಶ

ಅಪರಿಚಿತ ವ್ಯಕ್ತಿಯ ಶವ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ| ಹುಬ್ಬಳ್ಳಿ ನಗರದ ಚೇತನಾ ಕಾಲೇಜ್‌ ಬಳಿಯಿರುವ ಬಸ್‌ ನಿಲ್ದಾಣದಲ್ಲಿ ಪತ್ತೆ| ಆತ್ಮಹತ್ಯೆಯೋ ಕೊಲೆಯೋ ಎಂಬ ಅನುಮಾನ| ತನಿಖೆ ಆರಂಭಿಸಿ ಪೊಲೀಸರು| 

ಹುಬ್ಬಳ್ಳಿ(ನ.20): ಬಸ್‌ ನಿಲ್ದಾಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ ಸಾರ್ವಜನಿಕರು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಇಲ್ಲಿನ ಚೇತನಾ ಕಾಲೇಜ್‌ ಬಳಿಯಿರುವ ಬಸ್‌ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಹಗ್ಗದಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಸುಮಾರು 40 ವರ್ಷ ವಯಸ್ಸಿನ ವ್ಯಕ್ತಿಯಾಗಿರುವ ಈತ, ಜೀನ್ಸ್‌ ಪ್ಯಾಂಟ್‌, ಟೀ ಶರ್ಟ್‌ ಧರಿಸಿದ್ದಾನೆ. 

ಆನ್‌ಲೈನ್ ಕ್ರೆಡಿಟ್ ಆಪ್ ಸಾಲ ತೀರಿಸಲಾಗದೆ ನೇಣಿಗೆ ಶರಣಾದ ಯುವತಿ

ಬೆಳಿಗ್ಗೆ ಈ ರಸ್ತೆಯಲ್ಲಿ ವಾಯುವಿಹಾರಕ್ಕೆ ತೆರಳುವವರು ಈತನ ಶವ ನೋಡಿ ಆಘಾತಕ್ಕೊಳಗಾಗಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದು ಆತ್ಮಹತ್ಯೆಯೋ ಕೊಲೆಯೋ ಎಂಬ ಅನುಮಾನ ಮೂಡಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಗೋಕುಲ ರಸ್ತೆ ಠಾಣೆಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!