
ರಾಯಚೂರು (ಡಿ.29): ಡೆಕೋರೇಷನ್ ಮಳಿಗೆಗೆ ಬೆಂಕಿ ಬಿದ್ದು ಲಕ್ಷಾಂತರ ರೂಪಾಯಿ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ನಂದಿನಿ ಲೇಔಟ್‌ನಲ್ಲಿ ನಡೆದಿದೆ.
ಅಮರಶೆಟ್ಟಿ ಒಡೆತನದ ಡೆಕೋರೇಷನ್ ಮಳಿಗೆ. ಬೆಂಕಿಹೊತ್ತಿಕೊಂಡಿದ್ದು ಹೇಗೆ ಎಂಬುದು ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್, ಬೆಂಕಿ ಕಡ್ಡಿಯಿಂದ ಕಿಡಿ ಹೊತ್ತಿರುವ ಶಂಕೆ. ಬೆಂಕಿಯ ಕೆನ್ನಾಲಗೆಗೆ ಅಂಗಡಿಯಲ್ಲಿದ್ದ ಆಲಂಕಾರಿಕ ಸಾಮಗ್ರಿಗಳು ಸುಟ್ಟು ಭಸ್ಮ. ಮದುವೆ ಪೆಂಡಾಲ್, ಬಟ್ಟೆಗಳಿಗೆ ತಗುಲಿ ಹೊತ್ತಿ ಉರಿದಿರುವ ಬೆಂಕಿ. ನೋಡನೋಡುತ್ತಿದ್ದಂತೆ ಸಂಪೂರ್ಣ ಸುಟ್ಟು ಹೋದ ಮಳಿಗೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದ ಸಿಬ್ಬಂದಿ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.
ಶಾಸಕ ಜನಾರ್ದನರೆಡ್ಡಿ ಕುಟೀರಕ್ಕೆ ಬೆಂಕಿ ಇಟ್ಟವರಾರು ? ಜನಪ್ರಿಯತೆ ಸಹಿಸದೆ ಬಿಜೆಪಿ ಕಾರ್ಯಕರ್ತರೇ ಹಚ್ಚಿದ್ರಾ ಕಿಡಿ?!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ