ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತನ ಹದಿಹರೆಯದ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣ ಎದುರಿಸುತ್ತಿದ್ದಾರೆ.
ನವದೆಹಲಿ (ಆಗಸ್ಟ್ 21, 2023): ದೆಹಲಿ ಸರ್ಕಾರದ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತನ ಹದಿಹರೆಯದ ಮಗಳ ಮೇಲೆ ಹಲವು ತಿಂಗಳ ಕಾಲ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಅಲ್ಲದೆ, ಸರ್ಕಾರಿ ಅಧಿಕಾರಿಯ ಪತ್ನಿಯ ವಿರುದ್ಧವೂ ಕೇಸ್ ದಾಖಲಾಗಿದೆ.
ಹೌದು, ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತನ ಹದಿಹರೆಯದ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇದೀಗ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣವನ್ನು ಎದುರಿಸುತ್ತಿದ್ದಾರೆ. ದೆಹಲಿ ಪೊಲೀಸರು ಹಿರಿಯ ಅಧಿಕಾರಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಪರಿಶೀಲಿಸಲು ಕಠಿಣ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇನ್ನು, ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರಕ್ಕೆ ಸಹಾಯ ಮಾಡಿದ ಆರೋಪದ ಮೇಲೆ ಅಧಿಕಾರಿಯ ಪತ್ನಿಯ ಮೇಲೂ ಆರೋಪ ಹೊರಿಸಲಾಗಿದೆ.
ಇದನ್ನು ಓದಿ: ಏಡ್ಸ್ ರೋಗಿ ಎಂದು ಹೇಳಿ ಮನೆಗೆ ನುಗ್ಗಿದ ಕಾಮುಕನಿಂದ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಂಡ ಮಹಿಳೆ
ಬಾಲಕಿ 12ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಆಕೆ 2020 ರಲ್ಲಿ ತನ್ನ ತಂದೆಯನ್ನು ಕಳೆದುಕೊಂಡಳು, ನಂತರ ಆರೋಪಿ ಅವಳನ್ನು ತನ್ನ ಮನೆಗೆ ಕರೆತಂದನು.
2020 ಮತ್ತು 2021 ರ ನಡುವೆ ಅವನು ತನ್ನ ಮೇಲೆ ಹಲವಾರು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು, ಸಂತ್ರಸ್ತ ಬಾಲಕಿ ಗರ್ಭಿಣಿಯಾದಾಗ, ಆರೋಪಿಯು ಇದನ್ನು ಹೆಂಡತಿಗೆ ಹೇಳಿದ್ದಾನೆ. ಅಧಿಕಾರಿಯ ಪತ್ನಿ ತಮ್ಮ ಮಗನಿಗೆ ಔಷಧಿ ನೀಡುವಂತೆ ಕೇಳಿ, ಮನೆಯಲ್ಲಿಯೇ ಗರ್ಭಪಾತ ಮಾಡಿಸಿದ್ದಾರೆ ಎಂದು ಅಪ್ರಾಪ್ತ ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.
ಸದ್ಯ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿದೆ. ಉನ್ನತ ಅಧಿಕಾರಿ ವಿರುದ್ಧದ ಗಂಭೀರ ಆರೋಪಗಳ ಕುರಿತು ದೆಹಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಸಾಕು ನಾಯಿಗಳ ವಿಚಾರವಾಗಿ ಜಗಳ: ಬಾಲ್ಕನಿಯಿಂದ್ಲೇ 8 ಜನರಿಗೆ ಶೂಟ್ ಮಾಡಿದ ಭದ್ರತಾ ಸಿಬ್ಬಂದಿ!
ಇನ್ನು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆರೋಪಿ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ತನ್ನ ಆಶ್ರಯದಲ್ಲಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಹಾಗೂ, ಸೋಮವಾರ ಸಂಜೆ 5 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಕೇಜ್ರಿವಾಲ್ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ 20ಕ್ಕೂ ಹೆಚ್ಚು ಮಹಿಳೆಯರ ವಂಚಿಸಿ ಕೋಟಿ ಕೋಟಿ ಲೂಟಿ ಹೊಡೆದ ‘ಹಾರ್ಟ್ ಸ್ಪೆಷಲಿಸ್ಟ್’!