ದೆಹಲಿಯಿಂದ ಸ್ಪಾ ಕೆಲಸಕ್ಕೆ ಬೆಂಗಳೂರಿಗೆ ಬಂದು ನೇಣಿಗೆ ಶರಣಾದ ಯುವತಿ; ಅಂಥದ್ದೇನಾಯ್ತು?

By Sathish Kumar KH  |  First Published Nov 28, 2024, 2:08 PM IST

ಬೆಂಗಳೂರಿನಲ್ಲಿ ದೆಹಲಿ ಮೂಲದ 24 ವರ್ಷದ ಯುವತಿ ಸೋನಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸೋನಿಯಾ, ಸ್ಪಾದಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಬೆಂಗಳೂರು (ನ.28): ಭಾರತದ ರಾಜಧಾನಿ ದೆಹಲಿಯಿಂದ ದೇಶದಲ್ಲಿಯೇ ಅತ್ಯಂತ ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸುತ್ತಿರುವ ನಗರವಾಗಿರುವ ಬೆಂಗಳೂರಿಗೆ ಕಳೆದ ಒಂದೂವರೆ ತಿಂಗಳ ಹಿಂದಷ್ಟ್ಏ ಬಂದು ನೆಲೆಸಿದ್ದ ಸುಂದರ ಯುವತಿಯೊಬ್ಬಳು ಕಳೆದ ಮೂರು ದಿನಗಳ ಹಿಂದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದು, ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಬ್ಬ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಯುವತಿಯನ್ನು ಸೋನಿಯಾ (24) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದೆಹಲಿ ಮೂಲದ ಸೋನಿಯಾ ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದು ಇಲ್ಲಿಕ ಖಾಸಗಿ  ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ, ಸೋಮವಾರ ರಾತ್ರಿ ತನ್ನ ತಾಯಿಯೊಂದಿಗೆ ಒಂದು ಗಂಟೆಗೂ ಹೆಚ್ಚು ಕಾಲ ಮಾತನಾಡಿದ್ದಾಳೆ. ಆಗ ಕೆಲಸದ ಸ್ಥಳದಲ್ಲಿನ ಕಷ್ಟವನ್ನೂ ಹಾಗೂ ಕುಟುಂಬದಿಂದ ದೂರ ಇರುವುದರಿಂದ ಆಗುತ್ತಿರುವ ಕಷ್ಟವನ್ನೂ ಹೇಳಿಕೊಂಡಿದ್ದಾಳೆ. ಇದಾದ ಬಳಿಕ ತಾನಿದ್ದ ಕೋಣೆಯಲ್ಲಿ ನೇಣು ಬಿಗಿದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

Tap to resize

Latest Videos

ಮಂಗಳವಾರ ಬೆಳಗ್ಗೆ ಎಂದಿನಂತೆ ಸ್ಪಾಗೆ ಬರಲಿಲ್ಲ ಎಂದು ಸ್ಪಾ ಮಾಲೀಕ ಯುವತಿಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದಿದ್ದಾಗ ಅನುಮಾನಗೊಂಡು ಮನೆ ಬಳಿ ಬಂದು ನೋಡಿದ್ದಾನೆ. ಎಷ್ಟೇ ಬಾಗಿಲು ಬಡಿದರೂ ಮನೆ ಬಾಗಿಲು ತೆರೆಯದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಮುರಿದು ನೋಡಿದಾಗ ಯುವತಿ ತನ್ನ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಇನ್ನು ಮೃತ ಯುವತಿಯ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ: Mangaluru: ಲವ್‌, ಸೆಕ್ಸ್‌, ದೋಖಾ ಕೇಸ್‌; ಅಪ್ರಾಪ್ತ ಯುವತಿ ಸಾವು

ದೆಹಲಿ ಮೂಲದ ಸೋನಿಯಾ ಅವರ ಪೋಷಕರು ದೆಹಲಿಯಲ್ಲಿ ವಾಸವಾಗಿದ್ದು, ಪೊಲೀಸರು ಅವರಿಗೆ ಮಗಳ ಸಾವಿನ ಸುದ್ದಿಯನ್ನು ತಿಳಿಸಿದ್ದಾರೆ. ಇದೀಗ ಸೋನಿಯಾಳ ಪೋಷಕರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಘಟನೆ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ. ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದು, ಸಾಕ್ಷಿಗಳನ್ನು ಸಂಗ್ರಹಣೆ ಮಾಡುತ್ತಿದ್ದಾರೆ. ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದು, ಸ್ಪಾ ಮಾಲೀಕರು ಹಾಗೂ ಇತರೆ ಸಿಬ್ಬಂದಿಯನ್ನು ವಿಚಾರಣೆ ಮಾಡುತ್ತಿದ್ದಾರೆ.

click me!