ಮಹಿಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ, ಖಾಸಗಿ ಅಂಗದೊಳಗೆ ಕಬ್ಬಿಣದ ಸಲಾಕೆ ಹಾಕಿ ಕ್ರೌರ್ಯ

By Sharath Sharma Kalagaru  |  First Published Oct 19, 2022, 11:55 AM IST

Crime News Today: ದೆಹಲಿಯ ಗಾಜಿಯಾಬಾದಿನಲ್ಲಿ ಮಹಿಳೆಯೊಬ್ಬರನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ಎರಡು ದಿನಗಳ ಕಾಲ ಅತ್ಯಾಚಾರ ಮಾಡಿದ ಆರೋಪಿಗಳು ಸಂತ್ರಸ್ಥೆಯ ಖಾಸಗಿ ಅಂಗದೊಳಗೆ ಕಬ್ಬಿಣದ ಸಲಾಕೆ ಹಾಕಿ ಕ್ರೌರ್ಯ ಮೆರೆದಿದ್ದಾರೆ. 


ನವದೆಹಲಿ: ನಲವತ್ತು ವರ್ಷದ ಮಹಿಳೆಯೊಬ್ಬರನ್ನು ಗಾಜಿಯಾಬಾದ್‌ನಲ್ಲಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಮಹಿಳೆಯನ್ನು ಅಪಹರಿಸಿ ಸತತ ಎರಡು ದಿನಗಳ ಕಾಲ ದೈಹಿಕ ಕಿರುಕುಳ ನೀಡಲಾಗಿದೆ ಎಂದು ಗಾಜಿಯಾಬಾದ್‌ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿತರೆಲ್ಲರೂ ಮಹಿಳೆಗೆ ಪರಿಚಯದವರೇ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ಥೆಯ ಸ್ಥಿತಿ ಗಂಭೀರವಾಗಿದ್ದು ಆಕೆಯ ಖಾಸಗಿ ಭಾಗದೊಳಗೆ ಕಬ್ಬಿಣದ ಸಲಾಕೆ ಹಾಕಲಾಗಿದ್ದು ಅದನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ಧಾರೆ. 

ಈ ಬಗ್ಗೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಳಿವಾಲ್‌ ಟ್ವೀಟ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, "ಸಂತ್ರಸ್ಥೆಯ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ. ಆಕೆಯೊಳಗೆ ಕಬ್ಬಿಣದ ಸಲಾಕೆ ಇನ್ನೂ ಇದೆ," ಎಂದು ತಿಳಿಸಿದ್ದಾರೆ. ಮಂಗಳವಾರ ಆಶ್ರಮ ರಸ್ತೆಯಲ್ಲಿ ಮಹಿಳೆಯೊಬ್ಬರು ಮಲಗಿಕೊಂಡಿರುವ ಬಗ್ಗೆ ಗಾಜಿಯಾಬಾದ್‌ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಸ್ಥಳಕ್ಕೆ ತಲುಪಿದ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. 

Tap to resize

Latest Videos

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಮರ್ಯಾದಾ ಹತ್ಯೆ: ಅಪ್ರಾಪ್ತೆ ಮತ್ತು ಬಾಯ್‌ಫ್ರೆಂಡ್‌ ಕೊಲೆ ಮಾಡಿದ ಕುಟುಂಬ

"ಪ್ರಾಥಮಿಕ ತನಿಖೆಯ ಪ್ರಕಾರ ಸಂತ್ರಸ್ಥೆ ಮತ್ತು ಆರೋಪಿಗಳು ಪರಿಚಿತರು. ಅವರ ನಡುವೆ ಜಮೀನಿನ ಸಂಬಂಧ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ನಾವು ತನಿಖೆ ಮಾಡುತ್ತಿದ್ದೇವೆ. ಸಂತ್ರಸ್ಥೆಗೆ ನ್ಯಾಯ ಕೊಡುವತ್ತ ಎಲ್ಲಾ ರೀತಿಯ ಕ್ರಮವನ್ನೂ ತೆಗೆದುಕೊಳ್ಳುತ್ತೇವೆ," ಎಂದು ಗಾಜಿಯಾಬಾದ್‌ ಎಸ್‌ಪಿ ನಿಪುಣ್‌ ಅಗರ್ವಾಲ್‌ ಎಎನ್‌ಐಗೆ ಮಾಹಿತಿ ನೀಡಿದ್ದಾರೆ. 
ದೆಹಲಿ ಮಹಿಳಾ ಆಯೋಗ ಆರೋಪಿಗಳ ಮಾಹಿತಿಯನ್ನು ನೀಡುವಂತೆ ಪೊಲೀಸರಿಗೆ ನಿರ್ದೇಶಿಸಿದೆ. ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದು, ಪ್ರಕರಣದ ಎಲ್ಲಾ ಮಾಹಿತಿಯನ್ನೂ ನೀಡಿ ಎಂದು ಆಯೋಗ ನೊಟೀಸ್‌ ಜಾರಿ ಮಾಡಿದೆ. "ಸಂತ್ರಸ್ಥ ಮಹಿಳೆ ಗಂಭೀರ ಸ್ವರೂಪದಲ್ಲಿ ರಕ್ತದ ಮಡುವಿನಲ್ಲಿ ರಸ್ತೆಯಲ್ಲಿ ಬಿದ್ದಿದ್ದರು. ಅವರೊಳಗೆ ಕಬ್ಬಿಣದ ಸಲಾಕೆ ಇನ್ನೂ ಹಾಗೆ ಇತ್ತು. ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ," ಎಂದು ಸ್ವಾತಿ ಮಳಿವಾಲ್‌ ಹೇಳಿದ್ದಾರೆ. 

ಇದನ್ನೂ ಓದಿ: Madhya Pradesh: ಪತ್ನಿ ‘ಅದಲು - ಬದಲು’ ಗೇಮ್‌ಗೆ ಒಪ್ಪದ ಮಹಿಳೆಗೆ ಕಿರುಕುಳ, 50 ಲಕ್ಷ ವರದಕ್ಷಿಣೆಗೂ ಡಿಮ್ಯಾಂಡ್‌

"ಸಂತ್ರಸ್ಥೆ ಗಾಜಿಯಾಬಾದ್‌ನಿಂದ ತನ್ನ ಮನೆಗೆ ರಾತ್ರಿ ವಾಪಸ್‌ ಹೋಗುತ್ತಿದ್ದ ವೇಳೆ ಆರೋಪಿಗಳು ಬಲವಂತದಿಂದ ಆಕಯನ್ನು ಕಾರಿನಲ್ಲಿ ಅಪಹರಿಸಿದ್ದಾರೆ. ಐವರು ಆರೋಪಿಗಳು ಸತತ ಎರಡು ದಿನಗಳ ಕಾಲ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ. ನಂತರ ಆಕೆಯ ಖಾಸಗಿ ಭಾಗದೊಳಗೆ ಕಬ್ಬಿಣದ ಸಲಾಕೆ ಹಾಕಲಾಗಿದೆ. ಆಕೆ ರಕ್ತದ ಮಡುವಿನಲ್ಲಿ ಆಶ್ರಮ ರಸ್ತೆಯಲ್ಲಿ ಸಿಕ್ಕಾಗ ಆಕೆಯ ಖಾಸಗಿ ಭಾಗದೊಳಗೆ ಕಬ್ಬಿಣದ ರಾಡ್‌ ಹಾಗೇ ಇತ್ತು. ಸಾವು ಬದುಕಿನ ನಡುವೆ ಆಕೆ ಆಸ್ಪತ್ರೆಯಲ್ಲಿ ಹೋರಾಡುತ್ತಿದ್ದಾರೆ. ಗಾಜಿಯಾಬಾದ್‌ ಹಿರಿಯ ಎಸ್‌ಪಿಗೆ ನೊಟೀಸ್‌ ಮನೀಡಿದ್ದೇವೆ," ಎಂದು ಸ್ವಾತಿ ಮಳಿವಾಲ್‌ ಟ್ವೀಟ್‌ ಮಾಡಿದ್ದಾರೆ. ಐವರು ಆರೋಪಿಗಳಲ್ಲಿ ನಾಲ್ವರ ಬಂಧನವಾಗಿದ್ದು, ಇನ್ನೊಬ್ಬ ತಲೆ ಮರೆಸಿಕೊಂಡಿದ್ಧಾನೆ.

click me!