
ತಿರುಪತಿ (ಡಿ.13) ತಿರುಪತಿಯ ವೆಂಕಟೇಶ್ವರ ಸನ್ನಿಧಿಗೆ ಭೇಟಿ ನೀಡಿದ ಭಕ್ತರೊಬ್ಬರು ತಿರುಮಲದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಮಿಳುನಾಡು ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿರುಮಲಕ್ಕೆ ಹಾಲು ಸರಬರಾಜು ಮಾಡುತ್ತಿದ್ದ ವ್ಯಾನ್ ಕೆಳಗೆ ಬೇಕಂತಲೇ ಬಿದ್ದಿದ್ದಾರೆ. ವೆಂಕಟೇಶ್ವರ ಸನ್ನಿಧಿ ಸಮೀಪವೇ ಈ ಘಟನೆ ನಡೆದಿದೆ.
ಶುಕ್ರವಾರ ಬೆಳಗಿನ ಜಾವ 5ಗಂಟೆಗೆ ಈ ಘಟನೆ ನಡೆದಿದ್ದು, ಈ ವಿಷಯ ತಿಳಿಯುತ್ತಿದ್ಧಂತೆ ದೇವರ ದರ್ಶನವನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ದೇವಾಲಯ ಶುದ್ದಿ ಕಾರ್ಯದ ಬಳಿಕ ಮತ್ತೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಆಗಮ ಸಲಹೆಗಾರ ರಮಣ ದೀಕ್ಷಿತ ತಿಳಿಸಿದ್ದರು.
ಮೂಢ ನಂಬಿಕೆಯೇ? ತಿರುಮಲದಲ್ಲಿ ಸಾವನ್ನಪ್ಪಿದ್ದರೆ ಮುಕ್ತಿ ಸಿಗುತ್ತದೆ ಎಂಬ ನಂಬಿಕೆ ಸಹ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಮೊದಲಿಗೆ ಇದನ್ನು ಅಪಘಾತ ಎಂದು ಭಾವಿಸಲಾಗಿತ್ತು. ಆದರೆ ನಂತರಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಮಾಡಿದಾಗ ಆತ್ಮಹತ್ಯೆ ಎಂಬುದು ಗೊತ್ತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ