ಮಂಗಳೂರು ಬ್ಯಾಂಕ್‌ ಲೂಟಿ ಮಾಡಿದ್ದು ಧಾರಾವಿ ಗ್ಯಾಂಗ್‌!

Published : Jan 21, 2025, 07:29 AM IST
ಮಂಗಳೂರು ಬ್ಯಾಂಕ್‌ ಲೂಟಿ ಮಾಡಿದ್ದು ಧಾರಾವಿ ಗ್ಯಾಂಗ್‌!

ಸಾರಾಂಶ

ತಮಿಳುನಾಡಿನಮಧುರೈನಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬಂಧಿತರಿಂದ ಫಿಯೆಟ್ ಕಾರು, ಎರಡು ಗೋಣಿಚೀಲದಲ್ಲಿದ್ದ ಚಿನ್ನ, ತಲ್ವಾರ್, 2 ಪಿಸ್ತೂಲ್ ಹಾಗೂ ಇತರ ಸತ್ತು ಜಪ್ತಿ ಮಾಡಿದ್ದಾರೆ. ಬಂಧಿತರನ್ನು ಪ್ರಕರಣದ ಕಿಂಗ್‌ಪಿನ್‌ ಮುರುಗಂಡಿ ತೇವರ್ , ರಾಜೇಂದ್ರನ್ ಹಾಗೂ ಕಣ್ಣನ್ ಮಣಿ ಎಂದು ಗುರುತಿಸಲಾಗಿದೆ. 

ಮಂಗಳೂರು(ಜ.21):  ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರಿನ ಹೊರವಲಯದ ಕೋಟೆಕಾರು ಸಹಕಾರಿ ಬ್ಯಾಂಕಿಂದ 12 ಕೋಟಿ ರು. ಮೌಲ್ಯದ ಚಿನ್ನಾಭರಣ ದೋಚಿದ್ದ ಪ್ರಕರಣವನ್ನು ನಾಲ್ವೇ ದಿನದಲ್ಲಿ ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದು, ಮುಂಬೈನ ಡೆಡ್ಲಿ ಧಾರಾವಿ ಗ್ಯಾಂಗ್‌ ಸೇರಿದ ಮೂವರನ್ನು ಬಂಧಿಸಿದ್ದಾರೆ.

ತಮಿಳುನಾಡಿನಮಧುರೈನಲ್ಲಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಬಂಧಿತರಿಂದ ಫಿಯೆಟ್ ಕಾರು, ಎರಡು ಗೋಣಿಚೀಲದಲ್ಲಿದ್ದ ಚಿನ್ನ, ತಲ್ವಾರ್, 2 ಪಿಸ್ತೂಲ್ ಹಾಗೂ ಇತರ ಸತ್ತು ಜಪ್ತಿ ಮಾಡಿದ್ದಾರೆ. ಬಂಧಿತರನ್ನು ಪ್ರಕರಣದ ಕಿಂಗ್‌ಪಿನ್‌ ಮುರುಗಂಡಿ ತೇವರ್ (36), ರಾಜೇಂದ್ರನ್ (35) ಹಾಗೂ ಕಣ್ಣನ್ ಮಣಿ (36) ಎಂದು ಗುರುತಿಸಲಾಗಿದೆ. 

ಉಳ್ಳಾಲ: ದರೋಡೆ ಆದ ಬ್ಯಾಂಕ್‌ಗೆ ಮುಗಿಬಿದ್ದ ಗ್ರಾಹಕರು, ಚಿನ್ನ ವಾಪಸ್‌ ಕೊಡುವಂತೆ ಗ್ರಾಹಕರ

ದರೋಡೆಗಾಗಿ ಬಂದಿದ್ದರು: 

ದರೋಡೆಗೆಂದೇ ಮಂಗಳೂರಿಗೆ ಬಂದಿದ್ದ ಆರೋಪಿಗಳು, ದರೋಡೆ ನಂತರ ಕೇರಳ ಮೂಲಕ ತಮಿಳುನಾಡಿಗೆ ಪರಾರಿಯಾಗಿದ್ದರು. ಪರಾರಿಯಾಗಲು ಮಹಾರಾಷ್ಟ್ರ ಮೂಲದ ಫಿಯೆಟ್ ಕಾರು ಬಳಸಿದ್ದರು. ಆರೋಪಿ ಮುರುಗಂಡಿ ಕಾರನ್ನು ತಿರುವನ್ನೇಲಿವರೆಗೆ ತೆಗೆದುಕೊಂಡು ಹೋಗಿ ದ್ದನು. ಗುಪ್ತಚರ ಇಲಾಖೆ ನೆರವಿನಿಂದ ಈ ಪ್ರಕರಣ ಬೇಧಿಸಲು ಸಾಧ್ಯವಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ. 

ಹೆಚ್ಚುತ್ತಿರುವ ದರೋಡೆ, ಸುಲಿಗೆ:ಕ್ಷಿಪ್ರ ಕಾರ್ಯಾಚರಣೆಯಲ್ಲೂ ಪೊಲೀಸ್‌ ವೈಫಲ್ಯ!

ಸ್ಥಳೀಯರ ನೆರವು: 

ಸ್ಥಳೀಯರ ಬೆಂಬಲ ಇಲ್ಲದೆ ಈ ಕೃತ್ಯ ಮಾಡಲು ಸಾಧ್ಯವಿಲ್ಲ. ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗು ವುದು ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ. 

ಏನಾಗಿತ್ತು ?: 

ಜ.17ರಂದು ಮಧ್ಯಾಹ್ನ ಕಾರೊಂದರಲ್ಲಿ ಬಂದ ಐವರು ಮುಸುಕುಧಾರಿ ಗಳ ತಂಡ ಕೋಟೆಕಾರು ಸಹಕಾರಿ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿತ್ತು. ಅಂದಾಜು 4 ಕೋಟಿ ರು. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆಯಾಗಿದೆ ಎಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನೀಡಿದ ಅಧಿಕೃತ ದೂರಿನಲ್ಲಿ ತಿಳಿಸಲಾಗಿತ್ತು. ಆದರೆ ಮರುದಿನ ಮಹಜರ್ ನಡೆಸಿದ ತರು ವಾಯ ಬ್ಯಾಂಕ್ ಅಧ್ಯಕ್ಷರು 12 ಕೋಟಿ ರು. ಗೂ ಅಧಿಕ ಮೌಲ್ಯದ ಚನ್ನಾಭರಣ ಹಾಗೂ ನಗದು ದರೋಡೆಯಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!