ಧಾರವಾಡ: ಸಾಲಭಾದೆಗೆ ಬೇಸತ್ತು ಒಂದೇ ಕುಟುಂಬ ನಾಲ್ವರು ಬಾವಿಗೆ ಹಾರಿ ಸಾವು

Kannadaprabha News, Ravi Janekal |   | Kannada Prabha
Published : Nov 22, 2025, 10:27 AM IST
family die

ಸಾರಾಂಶ

ಧಾರವಾಡದ ಚಿಕ್ಕಮಲ್ಲಿಗವಾಡದಲ್ಲಿ, ಆರ್ಥಿಕ ಸಂಕಷ್ಟ ಹಾಗೂ ಕೌಟುಂಬಿಕ ಕಲಹದಿಂದ ನೊಂದ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. ತಂದೆ, ಇಬ್ಬರು ಮಕ್ಕಳು ಹಾಗೂ ಅಜ್ಜ ಮೃತಪಟ್ಟಿದ್ದು, ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ಧಾರವಾಡ (ನ.22): ಆರ್ಥಿಕ ಸಂಕಷ್ಟ ಹಾಗೂ ಕೌಟುಂಬಿಕ ಕಲಹದಿಂದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮ1ಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಿಕ್ಕಮಲ್ಲಿಗವಾಡದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಗ್ರಾಮದ ವಿಠ್ಠಲ್‌ ಶಿಂಧೆ (80) ಅವರ ಪುತ್ರ ನಾರಾಯಣ ಶಿಂಧೆ (42), ಮಕ್ಕಳಾದ ಶಿವರಾಜ (12), ಶ್ರೀನಿಧಿ (10) ಮೃತರು. ನಾರಾಯಣ ಧಾರವಾಡದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ನಿತ್ಯ ಮಕ್ಕಳನ್ನು ಶಾಲೆ ಬಿಟ್ಟು ತನ್ನ ಕೆಲಸಕ್ಕೆ ಹೋಗುತ್ತಿದ್ದರು. ಶುಕ್ರವಾರ ಸಹ ಬೆಳಗ್ಗೆ ಎಂದಿನಂತೆ ತನ್ನಿಬ್ಬರು ಮಕ್ಕಳೊಂದಿಗೆ ತಂದೆಯನ್ನು ಕರೆದುಕೊಂಡು ಹೋಗಿದ್ದ. ಆದರೆ, ಶಾಲೆಗೆ ಹೋಗುವ ಬದಲು ಬಾವಿಯಲ್ಲಿ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾವಿ ಬಳಿಯ ಜಾನುವಾರು ಮೇಯಿಸುತ್ತಿದ್ದವರು ಮಧ್ಯಾಹ್ನ ಮೃತದೇಹಗಳನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಮವಸ್ತ್ರದಲ್ಲಿ ಮಕ್ಕಳ ಸಾವು:

ಮಕ್ಕಳಿಬ್ಬರು ಶಾಲಾ ಸಮವಸ್ತ್ರದಲ್ಲಿಯೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ನಾರಾಯಣ ವಿವಿಧೆಡೆ ₹15 ಲಕ್ಷದಷ್ಟು ಸಾಲ ಮಾಡಿಕೊಂಡಿರುವ ಜತೆಗೆ ಇತ್ತೀಚೆಗೆ ಪತ್ನಿ ಜೊತೆ ಜಗಳ ಸಹ ಮಾಡಿಕೊಂಡಿದ್ದರು ಎನ್ನಲಾಗಿದೆ.

ಈ ವಿಚಾರವಾಗಿ ಕುಟುಂಬದಲ್ಲಿ ಕಲಹ ಉಂಟಾಗಿತ್ತು ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿರುವ ಗ್ರಾಮೀಣ ಠಾಣೆ ಪೊಲೀಸರು ಘಟನೆಗೆ ಬರೀ ಆರ್ಥಿಕ ಸಂಕಷ್ಟವೋ ಅಥವಾ ಮತ್ತಾವ ಕಾರಣವಿದೆಯೇ ಎಂಬುದರ ಬಗ್ಗೆ ತನಿಖೆ ಚುರುಕುಗೊಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!