
ಬೆಂಗಳೂರು (ಜ.4) : ಜೀವನದಲ್ಲಿ ಜಿಗುಪ್ಸೆಗೊಂಡು ಅಪಾರ್ಟ್‌ಮೆಂಟ್‌ನ 21ನೇ ಮಹಡಿಯಿಂದ ಸಾಫ್ಟ್‌ವೇರ್ ಉದ್ಯೋಗಿಯೊಬ್ಬ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.
ಸರ್ಜಾಪುರ ರಸ್ತೆಯ ಜೈನ್ ಹೈಟ್ಸ್ ಅಪಾರ್ಟ್‌ಮೆಂಟ್ ನಿವಾಸಿ ಸಾರಂಗ್ ಕುಲಕರ್ಣಿ (29) ಮೃತ ದುರ್ದೈವಿ. ತನ್ನ ಪ್ಲಾಟ್‌ನ ಕೋಣೆಯಿಂದ ನಸುಕಿನ 4 ಗಂಟೆ ಸುಮಾರಿಗೆ ಸಾರಂಗ್ ಕೆಳಗೆ ಬಿದ್ದಿದ್ದಾನೆ. ಕೂಡಲೇ ಆತನ ರಕ್ಷಣೆಗೆ ಭದ್ರತಾ ಸಿಬ್ಬಂದಿ ತೆರಳಿದ್ದಾರೆ. ಆದರೆ ಅಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ಸಾರಂಗ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಐಟಿ ಸಿಟಿ ಬೆಂಗಳೂರು ಈಗ ಕ್ರೈಂ ಸಿಟಿ! ಒಂದೇ ವರ್ಷದಲ್ಲಿ ಅಪರಾಧ ಕೃತ್ಯಗಳಲ್ಲಿ ಭಾರೀ ಹೆಚ್ಚಳ!
ಧಾರವಾಡದ ಸಾರಂಗ್, ಬೆಳ್ಳಂದೂರು ಸಮೀಪ ಸಾಫ್ಟ್‌ವೇರ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ. ಜೀವನ್ ಭೀಮಾ ನಗರದಲ್ಲಿ ಆತನ ಪೋಷಕರು ನೆಲೆಸಿದ್ದಾರೆ. ಆದರೆ ಸರ್ಜಾಪುರ ರಸ್ತೆಯ ಜೈನ್ ಹೈಟ್ಸ್ ಅಪಾರ್ಟ್‌ಮೆಂಟ್‌ನ ಪ್ಲಾಟ್‌ನ ಕೋಣೆ ಬಾಡಿಗೆ ಪಡೆದು ಆತ ಪ್ರತ್ಯೇಕವಾಗಿ ನೆಲೆಸಿದ್ದ. ತನ್ನ ಫ್ಲ್ಯಾಟ್‌ನ ಕೋಣೆಯಿಂದ ಕೆಳಗೆ ಬಿದ್ದು ಸಾರಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ. ವೈಯಕ್ತಿಕ ವಿಚಾರವಾಗಿ ಆತ ಆತ್ಮಹತ್ಯೆ ನಿರ್ಧಾರಕ್ಕೆ ಬಂದಿರಬಹುದು. ಆದರೆ ಮೃತನ ಕೋಣೆಯಲ್ಲಿ ಮರಣ ಪತ್ರವೇನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆ ಬಳಿ ಮಕ್ಕಳು ಮೂತ್ರ ಮಾಡಿದ್ದಕ್ಕೆ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಪಾಪಿಗಳು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ