ದೊಡ್ಡಬಳ್ಳಾಪುರ ಕ್ರಿಕೆಟ್‌ ಪಂದ್ಯಾವಳಿ ವೇಳೆ ಇಬ್ಬರನ್ನು ಕೊಲೆ ಮಾಡಿದ್ದ ಹಂತಕರು ಅರೆಸ್ಟ್‌: ಪೊಲೀಸರಿಂದ ಶೂಟೌಟ್‌

By Sathish Kumar KH  |  First Published Feb 19, 2023, 11:02 AM IST

ಶಿವರಾತ್ರಿ ಅಂಗವಾಗಿ ಆಯೋಜಿಸಲಾಗಿದ್ದ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ಕ್ಷುಲ್ಲಕ ವಿಚಾರಕ್ಕೆ ನಡೆದ ಘರ್ಷಣೆಯಲ್ಲಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಹಂತಕರನ್ನು ಕೇವಲ 48 ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ.


ದೊಡ್ಡಬಳ್ಳಾಪುರ (ಫೆ.19): ಶಿವರಾತ್ರಿ ಅಂಗವಾಗಿ ಆಯೋಜಿಸಲಾಗಿದ್ದ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ಕ್ಷುಲ್ಲಕ ವಿಚಾರಕ್ಕೆ ನಡೆದ ಘರ್ಷಣೆಯಲ್ಲಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಹಂತಕರನ್ನು ಕೇವಲ 48 ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಹಂತಕ ಬಂಧನದ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಎಸ್ಕೇಪ್‌ ಆಗಲು ಪ್ರಯತ್ನಿಸಿದ್ದು, ಪೊಲೀಸರು ಕಾಲಿಗೆ ಗುಂಡು ಹಾರಿಸುವ ಮೂಲಕ ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ. 

ಕೊಲೆ‌ ಮಾಡಿ ಎಸ್ಕೇಪ್‌ ಆಗಿದ್ದ ಆರೋಪಿಗಳಾದ ವಿನಯ್ ಮತ್ತು ತ್ರಿಮೂರ್ತಿ (ಅಪ್ಪಾಜಿ) ಬಂಧಿತರಾಗಿದ್ದಾರೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಹಳೇ ಪೆಟ್ರೋಲ್  ಬಂಕ್ ಬಳಿ ರಾತ್ರಿ ವೇಳೆ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿ ಆಗುತ್ತಿದ್ದವೇಳೆ ರೌಡಿಗಳ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಮೊನ್ನೆ (ಫೆ.17ರ) ಮಧ್ಯಾಹ್ನ ಕ್ರಿಕೆಟ್ ಪಂದ್ಯಾವಳಿ ವೇಳೆ ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲಿ ಇಬ್ಬರನ್ನು ಚಾಕು ಚುಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇನ್ನು ಕೊಲೆಯಾದವರನ್ನು ಭರತ್ ಮತ್ತು ಪ್ರತೀಕ್ ಎಂದು ಗುರುತಿಸಲಾಗಿತ್ತು.

Latest Videos

undefined

ಶಿವರಾತ್ರಿ ಕ್ರಿಕೆಟ್‌ ಪಂದ್ಯಾವಳಿ ವೇಳೆ ಚಾಕು ಇರಿತ: ಇಬ್ಬರ ದಾರುಣ ಸಾವು!

24 ಗಂಟೆ ಒಳಗೆ ಬಂಧಿಸುವ ಭರವಸೆ: ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಅವರು ಆರೋಪಿಗಳನ್ನು 24 ಗಂಟೆ ಒಳಗೆ ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದರು. ಇನ್ನು ಭರವಸೆ ಕೊಟ್ಟ 24 ಗಂಟೆ ಒಳಗೆ ಆರೋಪಿಗಳ ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ. ದೊಡ್ಡಬೆಳವಂಗಲ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಹರೀಶ್ ಮತ್ತು  ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಹರೀಶ್ ರಿಂದ ಪೈರಿಂಗ್ ಮಾಡಲಾಗಿದೆ. ರಾತ್ರಿ ವೇಳೆ ಬೀಟ್ ನಲ್ಲಿದ್ದ ಪೋಲೀಸರಿಗೆ ಖಚಿತ ಮಾಹಿತಿ ಆಧರಿಸಿ ಬಂಧಿಸಲು ಮುಂದಾಗಿದ್ದರು. 

ರಾತ್ರಿ ವೇಳೆ ಕಾರ್ಯಾರಚಣೆ:  ಆರೋಪಿಗಳು ರಾತ್ರಿ ವೇಳೆ ಸ್ನೇಹಿತರ ಬಳಿ ಹಣ ತೆಗೆದುಕೊಳ್ಳಲು ಬಂದಾಗ ಪೊಲೀಸರು ಖಚಿತ ಮಾಹಿತಿ ಮೇರೆಗೆ ಹಂತರಕರನ್ನು ಬಂಧಿಸಲು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಪೊಲೀಸರು ಬಂಧಿಸಲು ಬಂದಾಗ ಅವರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದು, ಮಾರಕಾಸ್ತ್ರಗಳಿಂದ ಚುಚ್ಚಲು ಬಂದಿದ್ದಾರೆ. ಈ ವೇಳೆ ಪ್ರಾಣ ರಕ್ಷಣೆಗಾಗಿ ಪೊಲೀಸರು ಗಾಳಿಗೆ ಗುಂಡು ಹೊಡೆದು ಸೆರೆಯಾಗಲು ಮನವಿ ಮಾಡಿದ್ದಾರೆ. ಇದಕ್ಕೂ ಬಗ್ಗದೇ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದಾಗ ರೌಡಿಗಳ ಕಾಲಿಗೆ ಗುಂಡು ಹೊಡೆಯಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.

 

 

ಸರ್ಕಾರಿ ಶಾಲಾ ಶಿಕ್ಷಕಿಯಾಗಿದ್ದ ಪತ್ನಿಯ ಶೀಲದ ಮೇಲೆ ಶಂಕೆ!: ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಪತಿ

ಕೊಲೆ ಘಟನೆಯ ವಿವರ: ಶಿವರಾತ್ರಿ ಅಂಗವಾಗಿ ಆಯೋಜಿಸಲಾಗಿದ್ದ ಕ್ರಿಕೆಟ್‌ ಪಂದ್ಯಾವಳಿಯ ವೇಳೆ ಕ್ಷುಲ್ಲಕ ವಿಚಾರಕ್ಕೆ ನಡೆದ ಘರ್ಷಣೆಯಲ್ಲಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಕೇಂದ್ರದಲ್ಲಿ ಶುಕ್ರವಾರ ಮಧ್ಯಾಹ್ನ 3.15ರ ಸುಮಾರಿನಲ್ಲಿ ನಡೆದಿತ್ತು.  ಮೃತರನ್ನು ದೊಡ್ಡಬೆಳವಂಗಲ ಗ್ರಾಮದ ಪ್ರತೀಕ್‌(17) ಮತ್ತು ಭರತ್‌ಕುಮಾರ್‌(23) ಎಂದು ಗುರುತಿಸಲಾಗಿದೆ. ಪ್ರತೀಕ್‌ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಭರತ್‌ಕುಮಾರ್‌ ಎಂಜಿನಿಯರಿಂಗ್‌ ವ್ಯಾಸಂಗ ಮುಗಿಸಿದ್ದ ಎನ್ನಲಾಗಿದೆ. ಆದರೆ, ರೌಡಿಗಳು ಕೊಲೆ ಮಾಡಿ ಅಲ್ಲಿಂದ ಎಸ್ಕೇಪ್‌ ಆಗಿದ್ದರು. ಕೊಲೆಯಾದವರ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. 

click me!